Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೋಕಾಯುಕ್ತ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು
ಕರ್ನಾಟಕಪ್ರಮುಖ

ಲೋಕಾಯುಕ್ತ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು

Share
2 Min Read
SHARE

newsics.com

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಹಿರಿಯ ಇಂಜಿನಿಯರ್‌ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಜಾಲಾಡಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಗದಗ, ಯಾದಗಿರಿ, ಹುಬ್ಬಳ್ಳಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಇಂದಿನ ದಾಳಿಯ ಅತ್ಯಂತ ರೋಚಕ ಘಟನೆ ನಡೆದದ್ದು ಹಾಸನದಲ್ಲಿ. ಹಾಸನ ಮಹಾನಗರ ಪಾಲಿಕೆಯ ಎಎಇ (AEE) ಸತ್ಯನಾರಾಯಣ ಅವರ ರವೀಂದ್ರ ನಗರದ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್ ನೇತೃತ್ವದ ತಂಡ ದಾಳಿ ಮಾಡಿದಾಗ, ಅಧಿಕಾರಿ ಬಾಗಿಲು ತೆಗೆಯಲು ನಿರಾಕರಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ಚಾಣಾಕ್ಷತನ ಮೆರೆದರು. ಠಾಣೆಯ ಜೀಪ್ ಅನ್ನು ಮನೆಯ ಗೋಡೆಗೆ ಅಂಟಿಸಿ ನಿಲ್ಲಿಸಿ, ಅದರ ಮೇಲೆ ಹತ್ತಿ ಮೊದಲ ಮಹಡಿಯ ಮೂಲಕ ಮನೆಯೊಳಗೆ ಪ್ರವೇಶಿಸಿ ಸತ್ಯನಾರಾಯಣ ಅವರಿಗೆ ಶಾಕ್ ನೀಡಿದ್ದಾರೆ.
ವಿಜಯಪುರದಲ್ಲಿ ಶಾಲೆಯ ಮೇಲೂ ದಾಳಿ!
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೆ.ಬಿ.ಜೆ.ಎನ್.ಎಲ್ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ (ಗೊಡಬಂಡಿ) ಅವರ ಮೇಲೆ ನಡೆದ ದಾಳಿ ಕೂಡ ಗಮನಾರ್ಹವಾಗಿದೆ. ಪ್ರಕಾಶ್ ಅವರ ಇಂಡಿ ಕಚೇರಿ, ನಿವಾಸದ ಜೊತೆಗೆ ಬೆಂಗಳೂರಿನ ಮಹದೇವಪುರದಲ್ಲಿರುವ ಮನೆ ಹಾಗೂ ಬೀದರ್‌ನ ಹುಮನಾಬಾದ್‌ನಲ್ಲಿರುವ ಮನೆಯ ಮೇಲೆಯೂ ದಾಳಿ ನಡೆದಿದೆ. ವಿಶೇಷವೆಂದರೆ, ಇವರ ಪತ್ನಿಯ ಹೆಸರಿನಲ್ಲಿರುವ ಶಾಲೆಯ ಮೇಲೆಯೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬಾಗಲಕೋಟೆ ಮತ್ತು ಹುಬ್ಬಳ್ಳಿಯಲ್ಲಿ ಚೀಫ್ ಇಂಜಿನಿಯರ್ ಬೆವರಿಳಿಸಿದ ಲೋಕಾ
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (KRDCL) ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ್ ಅವರ ಮೇಲೆ ಬೆಂಗಳೂರು, ಹುಬ್ಬಳ್ಳಿ ಮತ್ತು ಬಾಗಲಕೋಟೆಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಇವರ ಸಹೋದರ ಭೀಮಸಿಂಗ್ ನಾಯಕ್ ಬಾಗಲಕೋಟೆಯಲ್ಲಿ ಎಎಸ್‌ಐ (ASI) ಆಗಿ ಕೆಲಸ ಮಾಡುತ್ತಿದ್ದು, ಅವರ ಮನೆಯ ಮೇಲೆಯೂ ದಾಳಿ ಮಾಡಲಾಗಿದೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿರುವ ವಸಂತ ನಾಯಕ್ ಅವರ ಮನೆಯಲ್ಲಿ ಬೆಲೆಬಾಳುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಾಜ್ಯದ ವಿವಿಧೆಡೆ ದಾಳಿಗೆ ಒಳಗಾದ ಅಧಿಕಾರಿಗಳ ಪಟ್ಟಿ:
ಯಾದಗಿರಿ: ವೀರೇಶ್ ಹಿರೇಮಠ (ಜೆಸ್ಕಾಂ ಉಪ ವಿದ್ಯುತ್ ಪರಿವೀಕ್ಷಕ) – ಯಾದಗಿರಿ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ.
ಮಂಡ್ಯ: ಎಸ್. ಸತೀಶ್ (ಎಎಇ, ಪಿಡಬ್ಲ್ಯೂಡಿ) – ಬಂದಿಗೌಡ ಬಡಾವಣೆಯ ಮನೆ ಸೇರಿದಂತೆ 4 ಕಡೆ ದಾಳಿ.
ಗದಗ: ಎಂ.ಕೆ. ಸುರಕೋಡ್ (ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ) – ಗದಗ ನಗರದ ವಿಶ್ವೇಶ್ವರ ಬಡಾವಣೆ ಸೇರಿ 6 ಕಡೆ ರೇಡ್.
ಮೈಸೂರು: ಆಸಿಫ್ ಇಕ್ಬಾಲ್ ಹುಸೇನ್ (ಎಎಇ, ನಗರ ನೀರು ಸರಬರಾಜು ಮಂಡಳಿ) – ಶಿವಾಜಿ ರಸ್ತೆ ನಿವಾಸ ಮತ್ತು ಸರಸ್ವತಿಪುರಂ ಕಚೇರಿ ಮೇಲೆ ದಾಳಿ.
ಬೆಂಗಳೂರು: ಆರ್. ಶಶಿಧರ್ (ಸಿಇಒ, ರೈತ ಸೇವಾ ಸಹಕಾರ ಸಂಘ, ಯಲಹಂಕ) ಮತ್ತು ಹೆಚ್.ಸಿ. ಇಂದ್ರೇಶ್ (ಸಹಾಯಕ ಪ್ರಾಧ್ಯಾಪಕ, ಪಶುವೈದ್ಯಕೀಯ ಕಾಲೇಜು, ಹೆಬ್ಬಾಳ).

ಲೋಕಾಯುಕ್ತ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು

TAGGED:Corrupt officials shocked by Lokayukta attack
Share This Article
Facebook Twitter Copy Link Print
Previous Article ಭಾರತೀಯ ಇನ್‌ಫ್ಲುಯೆನ್ಸರ್ ಭೀಕರ ಹ*ತ್ಯೆ; ಮನೆಯೊಳಗೆ ನುಗ್ಗಿ ಚುಚ್ಚಿ ಚುಚ್ಚಿ ಮುಗಿಸೇಬಿಟ್ರು
Next Article ಪಾಕಿಸ್ತಾನದಲ್ಲಿರುವ ರಾಯಭಾರ ಕಚೇರಿ ಖಾಲಿ ಮಾಡಿ ದೇಶ ಬಿಡಲು ಆದೇಶಿಸಿದ ಅಮೆರಿಕ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?