Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ
ಪ್ರಮುಖಮನರಂಜನೆವಿದೇಶ

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸೋನು ಸೂದ್ ಕಡೆಯಿಂದ ಉಚಿತ ವಸತಿ ಸೌಲಭ್ಯ

Share
1 Min Read
SHARE

newsics.com

ಅಮೆರಿಕ-ಇರಾನ್ ಸಂಘರ್ಷದ ನಡುವೆ, ವಿಮಾನಯಾನ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ನೂರಾರು ಪ್ರವಾಸಿಗರ ನೆರವಿಗೆ ಬಾಲಿವುಡ್ ನಟ ಸೋನು ಸೂದ್ (Sonu Sood) ಧಾವಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ.
ಈ ಹಿಂದೆ 2020-21ರ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಮೂಲಕ ಸೋನು ಸೂದ್ ದೇಶಾದ್ಯಂತ ಅಪಾರ ಪ್ರೀತಿ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಅವರು ಸುದ್ದಿಯಲ್ಲಿದ್ದಾರೆ.
ಇತ್ತೀಚಿನ ಜಾಗತಿಕ ಮಟ್ಟದ ರಾಜಕೀಯ ಉದ್ವಿಗ್ನತೆಯಿಂದಾಗಿ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ಹಾರಾಟವನ್ನು ರದ್ದುಗೊಳಿಸಿವೆ. ಇದರಿಂದಾಗಿ ಪ್ರವಾಸಿಗರು ತಾಯ್ನಾಡಿಗೆ ಮರಳಲಾಗದೆ ದುಬೈನಲ್ಲಿ ಪರದಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಗಮನಿಸಿದ ಸೋನು ಸೂದ್, ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
‘ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಯಾರೆಲ್ಲಾ ದುಬೈನಲ್ಲಿ ಸಿಲುಕಿಕೊಂಡಿದ್ದಾರೋ, ಅವರಿಗೆ ನಾವು ನೆರವಾಗಲು ಸಿದ್ಧರಿದ್ದೇವೆ. ನೀವು ಉಳಿದುಕೊಳ್ಳಲು ನಾವು ಉಚಿತ ವ್ಯವಸ್ಥೆ ಮಾಡುತ್ತೇವೆ’ ಎಂದು ಅವರು ಭರವಸೆ ನೀಡಿದ್ದಾರೆ. ಕೇವಲ ಭಾರತೀಯರಿಗೆ ಮಾತ್ರವಲ್ಲದೆ, ಯಾವುದೇ ದೇಶದವರಾಗಿದ್ದರೂ ಅವರಿಗೆ ಆಶ್ರಯ ನೀಡುವುದಾಗಿ ಸೋನು ಸೂದ್ ತಿಳಿಸಿದ್ದಾರೆ.

ನಮ್ಮ ಭಾರತೀಯ ಸಹೋದರರು ಇರಲಿ ಅಥವಾ ಬೇರೆ ಯಾವುದೇ ರಾಷ್ಟ್ರದವರೇ ಇರಲಿ, ನೀವು ದುಬೈನಲ್ಲಿ ಸಂಕಷ್ಟದಲ್ಲಿದ್ದರೆ ದಯವಿಟ್ಟು ನಮಗೆ ಅಥವಾ ದುಗಾಸ್ತ ಪ್ರಾಪರ್ಟೀಸ್ ಸಂಸ್ಥೆಗೆ ನೇರವಾಗಿ ಸಂದೇಶ ಕಳುಹಿಸಿ. ನೀವು ಸುರಕ್ಷಿತವಾಗಿ ನಿಮ್ಮ ದೇಶಕ್ಕೆ ಮರಳುವವರೆಗೆ ನಿಮ್ಮ ವಾಸ್ತವ್ಯದ ಜವಾಬ್ದಾರಿ ನಮ್ಮದು’ ಎಂದು ಸೋನು ಸೂದ್ ಹೇಳಿದ್ದಾರೆ.

https://www.instagram.com/reel/DVde5blDD_w/?igsh=ZjR0ZDE1Nnc1NnU4

ವಧುವಿನ ಮನೆಯವರಿಂದ ವರನ ಬಳಗಕ್ಕೆ ಗೋಲ್ಡ್ ಬಿಸ್ಕೆಟ್ ಉಡುಗೊರೆ; ವೈರಲ್ ವಿಡಿಯೋ ನೋಡಿ

TAGGED:Sonu Sood offers free accommodation to those in distress in Dubai
Share This Article
Facebook Twitter Copy Link Print
Previous Article High court verdict ವಾಟ್ಸ್ಯಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಹೈಕೋರ್ಟ್ ತೀರ್ಪು
Next Article ಇಸ್ರೇಲ್-ಇರಾನ್ ಸಮರಕ್ಕೆ ಶೀಘ್ರವೇ ಬ್ರೇಕ್?

Popular Posts

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

You Might Also Like

ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read
ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?