Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ
ಕರ್ನಾಟಕಪ್ರಮುಖ

Karnataka Budget 2026 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

Share
1 Min Read
SHARE

newsics.com

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮುನಿರಾಬಾದ್-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಹಾಗೂ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.

TAGGED:Ban on social media use for children under sixteen
Share This Article
Facebook Twitter Copy Link Print
Previous Article KARNATAKA BUDGET 2026 16 ವರ್ಷದೊಳಗಿನ ಮಕ್ಕಳಿಗೆ ‘ಸೋಶಿಯಲ್ ಮೀಡಿಯಾ’ ಬಳಕೆ ನಿಷೇಧ : CM ಸಿದ್ದರಾಮಯ್ಯ ಘೋಷಣೆ
Next Article Karnataka Budget 2026 ಮನೆ ಇಲ್ಲದವರಿಗೆ ಮನೆ, ಕೆಲಸ ಇಲ್ಲದವರಿಗೆ ಕೆಲಸ  ;ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ

Popular Posts

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?