Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Budget 2026: ಶಿಕ್ಷಣ ಕ್ಷೇತ್ರಕ್ಕೆ ₹47,724 ಕೋಟಿ ಮೀಸಲು; ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರಮುಖ ಹೆಜ್ಜೆ!
ಕರ್ನಾಟಕಪ್ರಮುಖ

Budget 2026: ಶಿಕ್ಷಣ ಕ್ಷೇತ್ರಕ್ಕೆ ₹47,724 ಕೋಟಿ ಮೀಸಲು; ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರಮುಖ ಹೆಜ್ಜೆ!

Share
2 Min Read
SHARE

newsics.com

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರಮುಖ ಹೆಜ್ಜೆಯಾಗಿ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ (KPS)ಗಳಾಗಿ ಉನ್ನತೀಕರಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ₹3,900 ಕೋಟಿ ಅನುದಾನ ಮೀಸಲಿಡಲಾಗಿದೆ. ಜೊತೆಗೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ KPS ಶಾಲೆಗಳ ಹುದ್ದೆಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಮಾನ್ಯತೆ ಪಡೆಯುವ ಮತ್ತು ನವೀಕರಿಸುವ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸುವ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಇದರ ಮೂಲಕ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸುಗಮಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ.
2026-27ನೇ ಶೈಕ್ಷಣಿಕ ಸಾಲಿನಿಂದ ‘ವಿದ್ಯಾವಿಕಾಸ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಸಾಮಗ್ರಿ ನೀಡಲಾಗುತ್ತದೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಚಟುವಟಿಕೆ ಪುಸ್ತಕಗಳು, 1ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳು ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿಗಳ ನಿರ್ಮಾಣ ಮತ್ತು ಹಳೆಯ ಕೊಠಡಿಗಳ ದುರಸ್ತಿಗೆ ₹565 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಜೊತೆಗೆ ಶೌಚಾಲಯ ನಿರ್ಮಾಣಕ್ಕೆ ₹75 ಕೋಟಿ ಮತ್ತು ಪೀಠೋಪಕರಣಗಳ ಖರೀದಿಗೆ ₹25 ಕೋಟಿ ನೀಡಲಾಗುತ್ತದೆ. ಶಿಕ್ಷಣ ಸಂಸ್ಥೆಗಳ ನಿರ್ವಹಣೆಗೆ ಪ್ರತ್ಯೇಕವಾಗಿ ₹125 ಕೋಟಿ ಅನುದಾನ ಮೀಸಲಿರಿಸಲಾಗಿದೆ. ಭಾಷಾ ಸಾಮರ್ಥ್ಯ ವೃದ್ಧಿಗೂ ಸರ್ಕಾರ ಮಹತ್ವ ನೀಡಿದ್ದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಶಿಕ್ಷಕರಿಗೆ ಇಂಗ್ಲಿಷ್ ಭಾಷಾ ತರಬೇತಿ ಕಾರ್ಯಕ್ರಮವನ್ನು ₹24 ಕೋಟಿ ವೆಚ್ಚದಲ್ಲಿ ನಡೆಸಲಾಗುತ್ತದೆ
ಡಿಜಿಟಲ್ ಕಲಿಕೆಯನ್ನು ಉತ್ತೇಜಿಸಲು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT ಧಾರವಾಡ) ಇವರ ಸಹಯೋಗದಲ್ಲಿ 8ರಿಂದ 12ನೇ ತರಗತಿ ವರೆಗೆ ಓದುತ್ತಿರುವ ಸುಮಾರು 12.28 ಲಕ್ಷ ವಿದ್ಯಾರ್ಥಿಗಳಿಗೆ AI ಆಧಾರಿತ ವೈಯಕ್ತಿಕ ಡಿಜಿಟಲ್ ಟ್ಯೂಟರ್ ವ್ಯವಸ್ಥೆ ಒದಗಿಸಲಾಗುತ್ತದೆ. ಇದರ ಮೂಲಕ ವಿದ್ಯಾರ್ಥಿಗಳ ಕಲಿಕೆಯ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸುವ ಗುರಿ ಹೊಂದಲಾಗಿದೆ.

ಇನ್ನೊಂದೆಡೆ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸಲು 2026-27ನೇ ಸಾಲಿನಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಸುಮಾರು 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಜೊತೆಗೆ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುತ್ತದೆ.

ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪ್ರಾರಂಭಿಕವಾಗಿ ₹10 ಕೋಟಿ ಅನುದಾನ ನೀಡಲಾಗುತ್ತಿದೆ. ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ದುಷ್ಪರಿಣಾಮಗಳನ್ನು ತಡೆಯಲು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ಹೇರಲು ಕ್ರಮ ಕೈಗೊಳ್ಳಲಾಗುತ್ತದೆ. ಅದೇ ವೇಳೆ ಶಾಲೆ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಕಠಿಣ ನಿಯಮಗಳು, ಜಾಗೃತಿ ಕಾರ್ಯಕ್ರಮಗಳು ಮತ್ತು ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಒಟ್ಟಿನಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಹೆಚ್ಚಿಸುವ ಮತ್ತು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡುವ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಕಟಿಸಿದೆ.

ದೇವಕನ್ಯೆಯಂತೆ ಕಂಗೊಳಿಸಿದ ಆಶಿಕಾ ರಂಗನಾಥ್‌; ‘ಯುವರಾಣಿಯ’ ಲುಕ್ ಗೆ ಫ್ಯಾನ್ಸ್ ಪಿಧಾ

TAGGED:724 crore reserved for the education sector; An important step for the development of government schools!Budget 2026: ₹47
Share This Article
Facebook Twitter Copy Link Print
Previous Article UPSC ಫಲಿತಾಂಶ ಪ್ರಕಟ: ಕಿರಣ್ ಕಮಾಟೆ ರಾಜ್ಯಕ್ಕೆ ಟಾಪರ್; ದೇಶಕ್ಕೆ ಅನುಜ್ ಅಗ್ನಿಹೋತ್ರಿ ಫಸ್ಟ್
Next Article ಯುದ್ಧ ವಿಮಾನ SU-30 MKI ಪತನ; ಇಬ್ಬರು ಪೈಲಟ್ ಸಾವು

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?