newsics.com
ಬೆಂಗಳೂರು: ಇಂದು (ಮಾ.6) 17ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಮೀನುಗಾರರಿಗೆ 20,000 ಪ್ರೋತ್ಸಾಹ ಧನ ಏರಿಕೆ ಮಾಡಿದ್ದು ಮೀನುಗಾರಿಕಾ ವಿವಿಯಲ್ಲಿ ವಿಶೇಷ ವಿಭಾಗ ಸ್ಥಾಪನೆ ಮಾಡಲಾಗುತ್ತೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೀನುಗಾರಿಕಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತೆ ಅಲ್ಲದೆ ಮೀನು ಮಾರಾಟ ಮಾಡಲು ಮಾರುಕಟ್ಟೆ ಸ್ಥಾಪನೆಗೆ ನಿರ್ಧರಿಸಲಾಗಿದೆ.
ಇನ್ನು ಮೀನು ಆಹಾರದ ಸೇವನೆಯನ್ನು ಉತ್ತೇಜಿಸುವ ಹಾಗೂ ಸಾರ್ವಜನಿಕರಿಗೆ ಸ್ವಚ್ಛ ಮತ್ತು ಗುಣಮಟ್ಟದ ಮೀನು ಉತ್ಪನ್ನಗಳು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳನ್ನು ಸ್ಥಾಪಿಸಲಾಗುವುದು ಎಂದು ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಮೀನುಗಾರಿಕೆ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯದ ದರವನ್ನು 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ.
ರಾಜ್ಯದಲ್ಲಿ ಮೀನುಗಾರಿಕೆ ಕೊಂಡಿ ರಸ್ತೆಗಳ ನಿರ್ವಹಣೆಗಾಗಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಒಳನಾಡು ಮೀನುಗಾರಿಕೆಯು ಗ್ರಾಮೀಣ ಜೀವನೋಪಾಯ ಮತ್ತು ಆಹಾರ ಭದ್ರತೆಗೆ ಮಹತ್ವವಾಗಿದೆ. ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನದಿ, ಕೆರೆ, ಕೃಷಿ ಹೊಂಡ ಹಾಗೂ ಜಲಾಶಯಗಳಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಮೀನುಗಾರರಿಗೆ ತರಬೇತಿ ನೀಡಿ ಸ್ಥಿರ ಆದಾಯ ಗಳಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.