newsics.com
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡನೆ ಶುರು ಮಾಡಿದ್ದಾರೆ.
2026-27ನೇ ಸಾಲಿಗೆ 4.40 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ ನಿರೀಕ್ಷೆಯಿದ್ದು, ರಾಜ್ಯದಲ್ಲಿ ದಾಖಲೆ ಗಾತ್ರದ ಬಜೆಟ್ ಮಂಡಿಸಿದ ಹಿರಿಮೆಗೂ ಅವರು ಪಾತ್ರರಾಗಲಿದ್ದಾರೆ.
ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಪ್ರಗತಿಶೀಲ ರಾಜ್ಯದ ತೆರಿಗೆ ಹಣಕ್ಕೆ ಪ್ರಮುಖ ದೃಷ್ಟಿಯಾದ ನಾನು ಸರ್ವರ ಏಳಿಗೆ ಬಯಸಿ ಆಯವ್ಯಯ ಬಜೆಟ್ ಮಂಡಿಸುತ್ತಿದ್ದೇನೆ. 6 ಕೋಟಿ ಕನ್ನಡಿಗರ ನಿರೀಕ್ಷೆಗಳನ್ನು ನಾವು ಅರಿತಿದ್ದೇವೆ. ಅವರ ಕನಸುಗಳನ್ನು ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ರೈತರ ದಮನಿತರ ಕಾರ್ಮಿಕರ ಮಹಿಳೆಯರ ಅಶಕ್ತರ ಅಲ್ಪಸಂಖ್ಯಾತರ ವ್ಯಾಪಾರ ಮತ್ತು ಕೈಗಾರಿಕೋದ್ಯಮಿಗಳಿಗೆ ಒದಗಿಕೊಂಡರುವ ಕನಸು ಮತ್ತು ವಿಶ್ವಾಸವನ್ನು ಪ್ರತಿನಿಧಿಸುವ ಜೀವಂತ ದಾಖಲೆಯಾಗಿದೆ.