newsics.com
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ದಾಖಲೆಯ 17ನೇ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.
ಈ ಬಜೆಟ್‌ನಲ್ಲಿ ವಿಶೇಷವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಿದ್ದು 30,000 ರಿಂದ 45,000 ಗಳಿಗೆ ಹೆಚ್ಚಳ ಮಾಡಿದ್ದಾರೆ 20 ಹೊಸ ಶಿಶು ಪಾಲನ ಕೇಂದ್ರ ಸ್ಥಾಪನೆಗೆ ಒಂದು ಕೋಟಿ ರೂಪಾಯಿ ಮೀಸಲು ಇಟ್ಟಿದ್ದಾರೆ ಜಿಲ್ಲಾಮಟ್ಟದಲ್ಲಿ ಸ್ಥಾಪನೆ ಮಾಡಲಾಗುತ್ತದೆ.
ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದರು. ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದರು.