newsics.com
ಇನ್ಮುಂದೆ ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿಯಾಗಲಿದೆ, ಬೆಲೆ ನಿಗದಿ ಮಾಡುವ ಜವಾಬ್ದಾರಿ ಉತ್ಪಾದಕರ ಹೆಗಲಿಗೆ ಬಿದ್ದಿದೆ, ಮದ್ಯದ ಉತ್ಪಾದಕರಿಗೆ ಹೊಸ ಜವಾಬ್ದಾರಿಯನ್ನು ಸರ್ಕಾರ ಕೊಟ್ಟಿದೆ. ಸರ್ಕಾರದಿಂದ ಮದ್ಯದ ಬೆಲೆ ನಿರ್ಧಾರ ಆಗುವುದಿಲ್ಲ, ಇನ್ಮುಂದೆ ಮದ್ಯದ ಬೆಲೆ ಏರಿಕೆ ಉತ್ಪಾದಕರೇ ಮಾಡ್ಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್ಪೋರ್ಟ್ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು.
ಕಳೆದ ವರ್ಷ ಪ್ರಾರಂಭಿಸಲಾದ, ತಡೆಗಟ್ಟಬಹುದಾದ ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸುವ ಅಭಿಯಾನದ ಪರಿಣಾಮವಾಗಿ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವು ಶೇ.24ರಷ್ಟು ಇಳಿಕೆಯಾಗಿರುತ್ತದೆ. ಈ ಅಭಿಯಾನದಡಿ ಪ್ರತಿ ತಾಯಂದಿರ ಮರಣವನ್ನು ತಜ್ಞರ ಸಮಿತಿಯಿಂದ ವಿಶ್ಲೇಷಿಸಿ ಗುಣಾತ್ಮಕವಾದ ಗರ್ಭಿಣಿ ಮತ್ತು ಪ್ರಸವ ಸೇವೆಗಳನ್ನು ನೀಡಲಾಗುತ್ತಿದೆ. ಹೆರಿಗೆ ಆಸ್ಪತ್ರೆಗಳಿಗೆ ಮಾರ್ಗದರ್ಶನ, ಹೆಚ್ಚಿನ ಮಾನವ ಸಂಪನ್ಮೂಲ ಮತ್ತು ಆಧುನಿಕ ಉಪಕರಣಗಳನ್ನು ನೀಡಲಾಗುತ್ತಿದೆ
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.