newsics.com
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು.
ಇಂದು ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ರಾಜ್ಯ ಬಜೆಟ್ ನ್ನು ಮಂಡನೆ ಮಾಡುವುದಕ್ಕೆ ಅನುಮತಿ ಕೋರಿದರು. ಇಂದಿನ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ.
ವಿಶೇಷ ಸಚಿವ ಸಂಪುಟದಲ್ಲಿ ಬಜೆಟ್‌ಗೆ ಔಪಚಾರಿಕವಾಗಿ ಅನುಮೋದನೆ ಪಡೆದ ಬಳಿಕ ಸಿದ್ದರಾಮಯ್ಯ ಅವರು 10.15ಕ್ಕೆ ಬಜೆಟ್ ಭಾಷಣ ಆರಂಭಿಸಲಿದ್ದಾರೆ.