Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರತ ವಿರುದ್ಧದ ಸೋಲಿಗೆ ನಾನು ಮಾಡಿದ ತಪ್ಪೇ ಕಾರಣ!; ಹ್ಯಾರಿ ಬ್ರೂಕ್ ಪಶ್ಚಾತ್ತಾಪ
ಪ್ರಮುಖ

ಭಾರತ ವಿರುದ್ಧದ ಸೋಲಿಗೆ ನಾನು ಮಾಡಿದ ತಪ್ಪೇ ಕಾರಣ!; ಹ್ಯಾರಿ ಬ್ರೂಕ್ ಪಶ್ಚಾತ್ತಾಪ

Share
2 Min Read
SHARE

newsics.com

ಗುರುವಾರ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ ನಲ್ಲಿ ಭಾರತ ವಿರುದ್ಧದ ಸೋಲಿನಲ್ಲಿ ಸಂಜು ಸ್ಯಾಮ್ಸನ್ ಅವರ ಕ್ಯಾಚ್ ಕೈಬಿಟ್ಟಿದ್ದು ಸೇರಿದಂತೆ ದುಬಾರಿ ಫೀಲ್ಡಿಂಗ್ ವೈಫಲ್ಯಗಳು ನಿರ್ಣಾಯಕ ಪಾತ್ರ ವಹಿಸಿತು ಎಂದು ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಹೇಳಿದ್ದಾರೆ.
ಪಂದ್ಯದ ಬಳಿಕ ಮಾತನಾಡಿದ ಬ್ರೂಕ್‌, ತಂಡ ಪರಿಸ್ಥಿತಿಯನ್ನು ತಪ್ಪಾಗಿ ಅರ್ಥಮಾಡಿಕೊಂಡಿತು ಮತ್ತು ವಿಶೇಷವಾಗಿ ಮೈದಾನದಲ್ಲಿ ತಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ವಿಫಲವಾಯಿತು ಎಂದು ಒಪ್ಪಿಕೊಂಡರು, ಇದರಿಂದಾಗಿ ಭಾರತವು ಬೃಹತ್‌ ಮೊತ್ತವನ್ನು ದಾಖಲಿಸಲು ಸಾಧ್ಯವಾಯಿತು ಎಂದರು.
“ಕ್ಯಾಚ್‌ಗಳು ಪಂದ್ಯಗಳನ್ನು ಗೆಲ್ಲಿಸುತ್ತವೆ ಎನ್ನುವ ಮಾತು ಇಲ್ಲಿ ನಿಜವಾಗಿದೆ. ದುರದೃಷ್ಟವಶಾತ್, ಚೆಂಡು ನನ್ನ ಕೈಯಲ್ಲಿ ಉಳಿಯಲಿಲ್ಲ. ನಾನು ಸಂಜು ಸ್ಯಾಮ್ಸನ್ ಕ್ಯಾಚ್‌ ಕೈಚೆಲ್ಲಿ ದೊಡ್ಡ ತಪ್ಪು ಮಾಡಿದೆ. ಅದುವರೆಗೂ ನಮ್ಮ ಹಿಡಿತದಲ್ಲಿದ್ದ ಪಂದ್ಯ ಆ ಬಳಿಕ ಕೈ ಜಾರಿತು” ಎಂದು ಬ್ರೂಕ್ ಹೇಳಿದರು. ಕೇವಲ 15 ರನ್‌ಗಳಲ್ಲಿದ್ದಾಗ ಬ್ರೂಕ್ ಸ್ಯಾಮ್ಸನ್ ಅವರ ಕ್ಯಾಚ್‌ ಬಿಟ್ಟರು. ಸಿಕ್ಕ ಅವಕಾಶದಲ್ಲಿ ಸ್ಯಾಮ್ಸನ್ 42 ಎಸೆತಗಳಲ್ಲಿ 89 ರನ್ ಗಳಿಸಿ ಭಾರತದ ಬೃಹತ್‌ ಮೊತ್ತಕ್ಕೆ ಕಾರಣರಾದರು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 253 ರನ್ ಗಳಿಸಿತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 246 ರನ್ ಗಳಿಸಿತು. ಹಾಲಿ ಚಾಂಪಿಯನ್ ಭಾರತವು ಇದೇ 8ರಂದು ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ.
ಭಾರತ ಪರ ಸಂಜು ಸ್ಯಾಮ್ಸನ್ (89) ಅಮೋಘ ಬ್ಯಾಟಿಂಗ್, ಅಕ್ಷರ್ ಪಟೇಲ್ ಅಮೋಘ ಫೀಲ್ಡಿಂಗ್ ಮತ್ತು ಕ್ಯಾಚಿಂಗ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದವು. ಇನ್ನೊಂದೆಡೆ ದಿಟ್ಟ ಹೋರಾಟ ಮಾಡಿದ ಇಂಗ್ಲೆಂಡ್ ತಂಡದ ಯುವ ಬ್ಯಾಟರ್ ಜೇಕಬ್ ಬೆಥೆಲ್ (105) ಶತಕ ಬಹುಕಾಲ ನೆನಪಿನಲ್ಲಿ ಉಳಿಯಲಿದೆ.
17ನೇ ಓವರ್‌ವರೆಗೂ ಇಂಗ್ಲೆಂಡ್‌ ಪಂದ್ಯವನ್ನು ತನ್ನ ನಿಯಂತ್ರಣದಲ್ಲಿ ಇರಿಸಿತ್ತು. ಭಾರತಕ್ಕಿಂತಲೂ ವೇಗವಾಗಿ ರನ್‌ ಕಲೆಹಾಕುತ್ತಾ ಸಾಗಿದ ತಂಡ, ಗೆಲ್ಲುವ ಎಲ್ಲಾ ಸಾಧ್ಯತೆಯಿತ್ತು. ಬಟ್ಲರ್‌(25), ವಿಲ್‌ ಜ್ಯಾಕ್ಸ್‌(35) ಔಟಾದರೂ ಜೇಕಬ್‌ ಬೆಥೆಲ್‌ ಕ್ರೀಸ್‌ನಲ್ಲಿ ಇರುವವರೆಗೂ ತಂಡ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಕೊನೆ 3 ಓವರಲ್ಲಿ ತಂಡಕ್ಕೆ 34 ರನ್‌ ಬೇಕಿತ್ತು. 18ನೇ ಓವರ್‌ನಲ್ಲಿ ಬೂಮ್ರಾ 6, 19ನೇ ಓವರ್‌ನಲ್ಲಿ ಹಾರ್ದಿಕ್‌ 9 ರನ್‌ ನೀಡಿ ಇಂಗ್ಲೆಂಡ್‌ ಗೆಲವು ಕಸಿದರು. ಒಂದೊಮ್ಮೆ ಉಭಯ ಆಟಗಾರರ ಓವರ್‌ನಲ್ಲಿ 10 ಪ್ಲಸ್‌ ಮೊತ್ತ ದಾಖಲಾಗಿದ್ದರೆ ಭಾರತ ಸೋಲು ಕಾಣುತ್ತಿತ್ತು.

ಏನಿದು ಬಾಯ್‌ಫ್ರೆಂಡ್ ಬನಾವೋ ಕ್ಯಾಂಪೇನ್?

TAGGED:The defeat against India was due to my mistake!; Harry Brook regrets
Share This Article
Facebook Twitter Copy Link Print
Previous Article ಏನಿದು ಬಾಯ್‌ಫ್ರೆಂಡ್ ಬನಾವೋ ಕ್ಯಾಂಪೇನ್?
Next Article 1.1 ಲಕ್ಷ ಕೋಟಿ ಮೌಲ್ಯದ ಚಿನ್ನ ಮಾರಿ ಶಸ್ತ್ರಾಸ್ತ್ರ ಖರೀದಿಗೆ ಮುಂದಾದ ಪೋಲೆಂಡ್‌

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?