Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್; ಕಾರಣವೇನು?
ಕರ್ನಾಟಕಪ್ರಮುಖ

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್; ಕಾರಣವೇನು?

Share
1 Min Read
SHARE

https://youtube.com/shorts/I7q3Ny48oOg?si=RFP8giogzKefv9jC

newsics.com

ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾದ ಮಾನಹಾನಿಕರ ಸುದ್ದಿಗಳನ್ನು ತೆಗೆದುಹಾಕುವಂತೆ ನಿರ್ದೇಶಿಸಬೇಕೆಂದು ಕೋರಿ ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಚ್.ಎಂ.ಡಿ. ನವಾಜ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್‌ ಮಗದುಮ್ ಅವರಿದ್ದ ಪೀಠ ಗೂಗಲ್ ಇಂಡಿಯಾ ಸೇರಿದಂತೆ ಹಲವು ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಅರ್ಜಿಯ ಪ್ರಕಾರ, 2015 ಮತ್ತು 2020ರಲ್ಲಿ ಕೆಲವು ಆನ್‌ಲೈನ್‌ ಸುದ್ದಿ ತಾಣಗಳು ತಮ್ಮ ವಿರುದ್ಧ ಆಧಾರರಹಿತ ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಕಟಿಸಿದ್ದರಿಂದ ತಮ್ಮ ಘನತೆಗೆ ಧಕ್ಕೆ ಉಂಟಾಗಿದೆ ಎಂದು ನವಾಜ್‌ ಆರೋಪಿಸಿದ್ದಾರೆ. ಈ ಬರಹಗಳು ಇನ್ನೂ ಇಂಟರ್ನೆಟ್‌ನಲ್ಲಿ ಲಭ್ಯವಾಗುತ್ತಿರುವುದು ತಮ್ಮ ವ್ಯಕ್ತಿತ್ವಕ್ಕೆ ಹಾನಿ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಮೂರ್ತಿಯಾಗಿರುವ ಕಾರಣ ತಮ್ಮ ದೇಶದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ನವಾಜ್ ತಮ್ಮ ಅರ್ಜಿಯಲ್ಲಿ ವಿವರಿಸಿದ್ದಾರೆ. ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದು ಎಂಬ ನ್ಯಾಯತತ್ವದ ಹಿನ್ನೆಲೆಯಲ್ಲಿ ಭಾರತದಲ್ಲಿ ನ್ಯಾಯಾಲಯದ ಮೊರೆ ಹೋಗಿರುವುದಾಗಿ ಅವರು ತಿಳಿಸಿದ್ದಾರೆ.

ಅವರ ಹೇಳಿಕೆಯಂತೆ, ಶ್ರೀಲಂಕಾ ಕೋರ್ಟ್‌ ಆಫ್ ಅಪೀಲ್ ಮುಖ್ಯಸ್ಥರಾಗಿದ್ದ ವೇಳೆ ನೀಡಿದ ಕಾನೂನು ಅಭಿಪ್ರಾಯವನ್ನು ತಪ್ಪಾಗಿ ಉಲ್ಲೇಖಿಸಿ ಕೆಲವು ವೆಬ್‌ಸೈಟ್‌ಗಳು ದುರುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಿವೆ. ಇದರಿಂದ ತಮ್ಮ ಪ್ರತಿಷ್ಠೆಗೆ ಧಕ್ಕೆ ಉಂಟಾಗಿದೆ ಎಂದು ಅವರು ದೂರಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿ ಗೂಗಲ್‌ಗೆ ಈಗಾಗಲೇ ನೋಟಿಸ್‌ ನೀಡಿದ್ದರೂ, ಸಂಬಂಧಿತ ವಿಷಯವನ್ನು ಆನ್‌ಲೈನ್‌ನಿಂದ ತೆಗೆದುಹಾಕಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಅವಹೇಳನಕಾರಿ ವಿಷಯಗಳನ್ನು ತಕ್ಷಣವೇ ತೆರವುಗೊಳಿಸಲು ನ್ಯಾಯಾಲಯದ ನಿರ್ದೇಶನ ಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೊ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್ ಸೇರಿದಂತೆ ಸಂಬಂಧಿತ ಸಂಸ್ಥೆಗಳಿಗೆ ನೋಟಿಸ್‌ ನೀಡಿದ್ದು, ಮುಂದಿನ ವಿಚಾರಣೆಗೆ ಪ್ರಕರಣವನ್ನು ಮುಂದೂಡಲಾಗಿದೆ.

ಪತಿ ಜೊತೆ ಹೋಳಿ ಆಚರಿಸಿದ ಸಮಂತಾ

TAGGED:Sri Lankan Supreme Court judge elevated to Karnataka High Court; What is the reason?
Share This Article
Facebook Twitter Copy Link Print
Previous Article ಪತಿ ಜೊತೆ ಹೋಳಿ ಆಚರಿಸಿದ ಸಮಂತಾ
Next Article ಖ್ಯಾತ ರಾಪರ್ ಬಂಧನಕ್ಕೆ ಪೊಲೀಸರಿಂದ ಹುಡುಕಾಟ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?