Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಈಗ ಅಮೆರಿಕದ ಗುರಿ ಯಾವ ದೇಶ?; ಟ್ರಂಪ್ ಹೇಳಿದ್ದೇನು?
Uncategorized

ಈಗ ಅಮೆರಿಕದ ಗುರಿ ಯಾವ ದೇಶ?; ಟ್ರಂಪ್ ಹೇಳಿದ್ದೇನು?

Share
2 Min Read
SHARE

newsics.com

ಅಮೆರಿಕದ ಪಾರುಪತ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಲು ಹೊರಟಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ವಿರುದ್ಧ ತೀವ್ರ ಸಂಘರ್ಷದ ಎಚ್ಚರಿಕೆ ನೀಡಿದ್ದಾರೆ. ವೆನೆಜುವೆಲಾದಲ್ಲಿನ ಯಶಸ್ವಿ ಕಾರ್ಯಾಚರಣೆಯನ್ನು ಉಲ್ಲೇಖಿಸಿರುವ ಟ್ರಂಪ್, ಮುಂದಿನ ದಿನಗಳಲ್ಲಿ ಕ್ಯೂಬಾ ದೇಶದಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ ಎಂದು ಭವಿಷ್ಯ ನುಡಿಯುವ ಮೂಲಕ ಸಂಚಲನ ಮೂಡಿಸಿದ್ದಾರೆ.
ವೆನೆಜುವೆಲಾದಲ್ಲಿ ‘ಆಪರೇಷನ್ ಅಬ್ಸೊಲ್ಯೂಟ್ ರೆಸಲ್ಯೂವ್’ ಯಶಸ್ಸು
ಜನವರಿ ತಿಂಗಳಿನಲ್ಲಿ ಅತಿದೊಡ್ಡ ಕಾರ್ಟೆಲ್ ನಾಯಕರಲ್ಲಿ ಒಬ್ಬರಾದ ನಿಕೋಲಸ್ ಮಡುರೊ ವಿರುದ್ಧ ಅಮೆರಿಕ ಮಿಲಿಟರಿ ‘ಆಪರೇಷನ್ ಅಬ್ಸೊಲ್ಯೂಟ್ ರೆಸಲ್ಯೂವ್’ ಎಂಬ ಕ್ರೂರ ಕಾರ್ಯಾಚರಣೆ ನಡೆಸಿತ್ತು. ಈ ಬಗ್ಗೆ ಮಾತನಾಡಿದ ಟ್ರಂಪ್, ‘ಮಡುರೊ ಅವರನ್ನು ನ್ಯಾಯದ ಮುಂದೆ ತರಲು ಈ ಕಾರ್ಯಾಚರಣೆ ಅತ್ಯಗತ್ಯವಾಗಿತ್ತು. ಪ್ರಸ್ತುತ ನಾವು ವೆನೆಜುವೆಲಾದ ಹೊಸ ಅಧ್ಯಕ್ಷರೊಂದಿಗೆ ಉತ್ತಮ ಡೀಲ್ ಮಾಡಿಕೊಂಡಿದ್ದು, ಅವರು ನಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಅವರು ಹಿಂದೆಂದಿಗಿಂತಲೂ ಹೆಚ್ಚು ಹಣ ಗಳಿಸುತ್ತಿದ್ದಾರೆ’ ಎಂದು ತಿಳಿಸಿದರು.
ಕ್ಯೂಬಾ ಅಮೆರಿಕದ ಮುಂದಿನ ಗುರಿ?
ವೆನೆಜುವೆಲಾದಲ್ಲಿ ಹೊಸ ಸರ್ಕಾರವನ್ನು ಅಧಿಕೃತವಾಗಿ ಗುರುತಿಸಿರುವ ಅಮೆರಿಕ, ಅಲ್ಲಿನ ಚಿನ್ನ ಮತ್ತು ಖನಿಜಗಳ ಮಾರಾಟಕ್ಕೆ ಸಹಕಾರ ನೀಡುವ ಒಪ್ಪಂದಕ್ಕೆ ಸಹಿ ಹಾಕಿದೆ. ಇದರ ಬೆನ್ನಲ್ಲೇ ಕ್ಯೂಬಾದ ಬಗ್ಗೆ ಪ್ರಸ್ತಾಪಿಸಿದ ಟ್ರಂಪ್, ‘ಕ್ಯೂಬಾದಲ್ಲಿ ಶೀಘ್ರದಲ್ಲೇ ದೊಡ್ಡ ಬದಲಾವಣೆಗಳು ಬರಲಿವೆ. ಅವರು ನಮ್ಮೊಂದಿಗೆ, ಅದರಲ್ಲೂ ವಿಶೇಷವಾಗಿ ಮಾರ್ಕೊ ರುಬಿಯೊ ಅವರೊಂದಿಗೆ ಮಾತುಕತೆ ನಡೆಸಲು ಬಯಸುತ್ತಿದ್ದಾರೆ. ಕ್ಯೂಬಾದೊಂದಿಗೆ ಒಪ್ಪಂದ ಮಾಡಿಕೊಳ್ಳುವುದು ನಮಗೆ ಸುಲಭ, ಆದರೆ ಸದ್ಯಕ್ಕೆ ನಮ್ಮ ಪೂರ್ಣ ಗಮನ ಇರಾನ್ ಮೇಲೆ ಇದೆ’ ಎಂದಿದ್ದಾರೆ.
ಅಮೆರಿಕ 10 ಹೊಸ ಯುದ್ಧನೌಕೆಗಳನ್ನು ನಿರ್ಮಿಸುತ್ತಿದೆ: ಟ್ರಂಪ್
ಅಮೆರಿಕದ ಮಿಲಿಟರಿ ಶಕ್ತಿಯನ್ನು ಆಧುನೀಕರಿಸುವ ಬಗ್ಗೆ ಮಾತನಾಡಿದ ಟ್ರಂಪ್, ದುಬಾರಿ ಕ್ಷಿಪಣಿಗಳಿಗಿಂತ ಭಾರಿ ಸ್ಫೋಟಕಗಳನ್ನು ಹಾರಿಸಬಲ್ಲ ದೊಡ್ಡ ಯುದ್ಧನೌಕೆಗಳ ಅಗತ್ಯವಿದೆ ಎಂದಿದ್ದಾರೆ. ‘ನಾವು ಹಿಂದಿನ ಹಡಗುಗಳಿಗಿಂತ 100 ಪಟ್ಟು ಹೆಚ್ಚು ಶಕ್ತಿಶಾಲಿಯಾದ 10 ಹೊಸ ಯುದ್ಧನೌಕೆಗಳನ್ನು ನಿರ್ಮಿಸುತ್ತಿದ್ದೇವೆ. ಇವುಗಳ ಭಯಕ್ಕೆ ಯಾರೂ ಅಮೆರಿಕವನ್ನು ಎದುರಿಸಲು ಧೈರ್ಯ ಮಾಡಬಾರದು. ಈ ಶಕ್ತಿಯನ್ನು ಬಳಸುವ ಪರಿಸ್ಥಿತಿ ಬರಬಾರದು ಎಂಬುದು ನನ್ನ ಆಶಯ’ ಎಂದು ಅವರು ಹೇಳಿದರು.
ಇರಾನ್ ವಾಯುಪಡೆ ಮತ್ತು ರಾಡಾರ್ ಸಿಸ್ಟಂ ಧ್ವಂಸ!
ಇರಾನ್ ವಿರುದ್ಧ ಅಮೆರಿಕ ನಡೆಸಿದ ದಾಳಿಯ ಬಗ್ಗೆ ಮಾಹಿತಿ ನೀಡಿದ ಟ್ರಂಪ್, ‘ಕೇವಲ ಮೂರು ದಿನಗಳಲ್ಲಿ ಇರಾನ್‌ನ 42 ನೌಕಾ ಹಡಗುಗಳನ್ನು ನಾವು ನಾಶಪಡಿಸಿದ್ದೇವೆ. ಅವರ ವಾಯುಪಡೆ ಮತ್ತು ದೂರಸಂಪರ್ಕ ವ್ಯವಸ್ಥೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದೇವೆ. ಇರಾನ್ ಪರಮಾಣು ಶಸ್ತ್ರಾಸ್ತ್ರ ತಯಾರಿಕೆಗೆ ಅತ್ಯಂತ ಹತ್ತಿರವಿತ್ತು. ನಮ್ಮ ‘ಮಿಡ್‌ನೈಟ್ ಹ್ಯಾಮರ್’ ಕಾರ್ಯಾಚರಣೆಯು ಅವರ ಪರಮಾಣು ಕನಸನ್ನು ಭಗ್ನಗೊಳಿಸಿದೆ ಎಂದು ಗುಡುಗಿದ್ದಾರೆ.

https://x.com/ANI/status/2030304964002910550?ref_src=twsrc%5Etfw%7Ctwcamp%5Etweetembed%7Ctwterm%5E2030304964002910550%7Ctwgr%5E96705c04e40737cfdb21d9132a485ea5a4b9c0d9%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇಸ್ರೇಲ್‌ನ ‘ಹೈಫಾ’ ತೈಲ ಸಂಸ್ಕರಣಾ ಕೇಂದ್ರದ ಮೇಲೆ ಇರಾನ್ ದಾಳಿ

TAGGED:Which country is America's target now?; What did Trump say?
Share This Article
Facebook Twitter Copy Link Print
Previous Article ಅಮೆರಿಕ ದಾಳಿಯಿಂದ ಖಮೇನಿ ಪುತ್ರನಿಗೆ ಗಾಯ; ಹೇಗಿದೆ ಸ್ಥಿತಿ?
Next Article ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ?; ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

Popular Posts

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?