Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ಹೆಚ್ಚಾದ ಬಿಸಿಲಾರ್ಭಟ : ಬೇಸಿಗೆ ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್‌ ತಲುಪಿದ ತಾಪಮಾನ..!
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ಹೆಚ್ಚಾದ ಬಿಸಿಲಾರ್ಭಟ : ಬೇಸಿಗೆ ಆರಂಭದಲ್ಲೇ 40 ಡಿಗ್ರಿ ಸೆಲ್ಸಿಯಸ್‌ ತಲುಪಿದ ತಾಪಮಾನ..!

Share
1 Min Read
SHARE

https://youtube.com/shorts/NQT6o3FTgxQ?si=QO7iNw2quSngYXpc

newsics.com

ಕರ್ನಾಟಕದಲ್ಲಿ ತಾಪಮಾನದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇಎ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ಎಲ್ಲೆ ಮಿರಿ ಹೋಗಿದೆ. ಬಿಸಿಲಿಗೆ ಬರುವ ಮುನ್ನ ಯೋಚಿಸಿ ಬರಬೇಕಾಗುತ್ತದೆ. ಧಗೆ ಹೆಚ್ಚಾಗುತ್ತಿರುವ ಕಾರಣ ಕುಡಿಯುವ ನೀರಿನ ಬಳಕೆಯೂ ಹೆಚ್ಚಾಗುತ್ತಿದೆ. ಮಕ್ಕಳು, ವಯೋ ವೃದ್ಧರು ಈ ಬಿಸಿಲಿನಲ್ಲಿ ಹೊರಗೆ ಬಂದರೆ ದೇಹದ ಉಷ್ಣಾಂಶ ಹೆಚ್ಚಾಗಿ, ರೋಗಗಳಿಗೆ ತುತ್ತಾಗುವ ಸಾಧ್ಯತೆಗಳೂ ಇವೆ.

ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ರಾಜ್ಯದಲ್ಲೇ ಅತ್ಯಂತ ಬಿಸಿಯಾದ ಪ್ರದೇಶವಾಗಿ ವರದಿಯಾಗಿದೆ. ಕೆಲವು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ದಾಖಲಾಗಿದೆ. ಬೀದರ್‌ ಜಿಲ್ಲೆಯಲ್ಲಿ 16 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ. ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಚಲನೆಯಿಂದಾಗಿ ಹವಾಮಾನದಲ್ಲಿ ಕೆಲವು ಬದಲಾವಣೆಗಳಾಗಿದ್ದು, ಸದ್ಯಕ್ಕೆ ರಾಜ್ಯದಾದ್ಯಂತ ತಾಪಮಾನದಲ್ಲಿ ದೊಡ್ಡ ಮಟ್ಟದ ಇಳಿಕೆಯ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ, ಬೀದರ್, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಲ ತಾಪ ತೀವ್ರವಾಗಲಿದ್ದು, ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನವು 36 ಡಿಗ್ರಿ ಸೆಲ್ಸಿಯಸ್‌ ಗಡಿ ದಾಟಿದೆ. ಬೀದರ್, ವಿಜಯಪುರ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು 36.1-39.8 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಮೂಲಕ ತೀವ್ರ ಸೆಕೆ ಕಂಡುಬಂದಿದೆ. ಇನ್ನು ಬೆಳಗಾವಿ ವಿಮಾನ ನಿಲ್ದಾಣ, ಬಾಗಲಕೋಟೆ ಮತ್ತು ಧಾರವಾಡದಲ್ಲಿ ತಾಪಮಾನವು 33.4-36 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಬಿಸಿಲ ತಾಪ ಏರಿದೆ. ಚಿತ್ರದುರ್ಗ, ಹಾಸನ, ಚಿಂತಾಮಣಿ, ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ತಾಪಮಾನವು 33.4-36 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗಿದೆ.

https://www.newsics.com/2026/03/09/bodies-of-two-college-students-found-in-temple-washroom/

TAGGED:Increased heatwave in Karnataka
Share This Article
Facebook Twitter Copy Link Print
Previous Article ದೇವಸ್ಥಾನದ ವಾಶ್‌ರೂಂನಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರ ಶವ ಪತ್ತೆ
Next Article ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್ : 7 ವಿಶೇಷ ತಂಡಗಳಿಂದ ಶೋಧ ಕಾರ್ಯಾಚರಣೆ

Popular Posts

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

You Might Also Like

ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read
ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read

Social Networks

Facebook-f Instagram Twitter
Welcome Back!

Sign in to your account

Lost your password?