https://youtube.com/shorts/NQT6o3FTgxQ?si=QO7iNw2quSngYXpc
newsics.com
ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕಿಡ್ನ್ಯಾಪ್ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಗೋಪಾಲ್ ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಇದ್ದ ಕಾರಿಗೆ ವಾಹನದಿಂದ ಡಿಕ್ಕಿ ಹೊಡೆದ ಕಿಡಿಗೇಡಿಗಳು ಸ್ಪ್ರೇ ಹಾಕಿ ದಾಳಿ ನಡೆಸಿ ಅವರನ್ನು ಅಪಹರಿಸಿರುವುದಾಗಿ ಕುಟುಂಬಸ್ಥರು ಆರೋಪಿಸದ್ದಾರೆ.
ಕುಟುಂಬಸ್ಥರ ಶಂಕೆ ಅನ್ವಯ ಜಿಗಣಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬುವರನ್ನು ಗೋಪಾಲ್ ಪತ್ನಿಯ ಆರೋಪದ ಮೇರೆಗೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಅಪಹರಣಗೊಂಡ ಗೋಪಾಲ್ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಇಂದು (ಮಾ.09) ಬೆಳಗಿನ ಜಾವ 9 ಇನ್ಸ್‌ಪೆಕ್ಟರ್‌ಗಳ ಸಹಭಾಗಿತ್ವದಲ್ಲಿ 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡಗಳು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎನ್ನಲಾಗಿದೆ.
ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು,ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಆನೇಕಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://www.newsics.com/2026/03/09/increased-heatwave-in-karnataka/