Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀಮಂತರೇ ಈಕೆಯ ಟಾರ್ಗೆಟ್; ಉದ್ಯಮಿಗಳಿಗೆ ಗಾಳ ಹಾಕುತ್ತಿದ್ದ ಸುಂದರಿ ಅರೆಸ್ಟ್
ಕರ್ನಾಟಕಪ್ರಮುಖ

ಶ್ರೀಮಂತರೇ ಈಕೆಯ ಟಾರ್ಗೆಟ್; ಉದ್ಯಮಿಗಳಿಗೆ ಗಾಳ ಹಾಕುತ್ತಿದ್ದ ಸುಂದರಿ ಅರೆಸ್ಟ್

Share
1 Min Read
SHARE

ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತರನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ದೀಪಾ ಅವಟಗಿ ಎಂಬ ಫ್ಯಾಶನ್ ಡಿಸೈನರ್‌ನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.ಶ್ರೀಮಂತರನ್ನೇ ಟಾರ್ಗೆಟ್ ಮಾಡಿ ಫೇಸ್ಬುಕ್ ಮೂಲಕ ಪರಿಚಯ ಮಾಡಿಕೊಳ್ಳುತ್ತಿದ್ದ ಆಕೆ, ಲಾಡ್ಜ್ಗೆ ಕರೆಸಿ ಅವರ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು ಎಂದು ತಿಳಿದುಬಂದಿದೆ. ಮೋಸ ಹೋಗಿದ್ದ ವ್ಯಕ್ತಿಯೊಬ್ಬರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವಳಾದ ದೀಪಾ ಅವಟಗಿ (33) ಫ್ಯಾಶನ್ ಡಿಸೈನರ್ ಆಗಿದ್ದು, ಹನಿಟ್ರ್ಯಾಪ್ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ.
ಹಣದಾಸೆಗೆ ಬಿದ್ದಿದ್ದ ದೀಪಾ, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಅವರ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಿ ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು. ಈಕೆಯನ್ನು ನಂಬಿ ಅಲ್ಲಿಗೆ ಬಂದ ಗಂಡಸರ ಬಳಿ ಸಲುಗೆಯಿಂದ ವರ್ತಿಸಿ, ಅವರನ್ನು ಮೊದಲು ಸ್ನಾನಕ್ಕೆ ಕಳುಹಿಸುತ್ತಿದ್ದಳು. ಇದೇ ಸಮಯ ಸಾಧಿಸಿ ವ್ಯಕ್ತಿಗಳ ಬಳಿಯಿದ್ದ ಹಣ, ಚಿನ್ನ, ಬ್ಯಾಗ್ ಹಾಗೂ ಕಾರುಗಳನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಎಲ್ಲಾ ದುಷ್ಕೃತ್ಯಗಳನ್ನೆಸಗಲು ದೀಪಾಗೆ ಸಹಾಯ ಮಾಡುತ್ತಿದ್ದುದು ಆಕೆಯ ಆಪ್ತ ಸ್ನೇಹಿತ ಶಿವಾನಂದ ಮಠಪತಿ. ಶ್ರೀಮಂತ ವ್ಯಕ್ತಿಗಳ ಮಾಹಿತಿಯನ್ನು ಆಕೆಗೆ ನೀಡುತ್ತಿದ್ದವನೇ ಇವನು. ಸಧ್ಯಕ್ಕೆ ಆತನೂ ಪರಾರಿಯಾಗಿದ್ದು, ಅವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಶಿವಾನಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ.
ಬಂಧನದ ನಂತರ ಆರೋಪಿಯಿಂದ ಸುಮಾರು 32 ಲಕ್ಷ 86 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಫಾರ್ಚೂನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

TAGGED:Her target is the rich; Beauty who was baiting businessmen arrested
Share This Article
Facebook Twitter Copy Link Print
Previous Article ಬೆಂಗಳೂರು ಟೆಕ್ಕಿಗಳಿಗೆ ವರ್ಕ್ ಫ್ರಂ ಹೋಮ್, ಮಕ್ಕಳಿಗೆ ಆನ್ಲೈನ್ ಕ್ಲಾಸ್
Next Article ಶ್ರೀಮಂತರೇ ಈಕೆಯ ಟಾರ್ಗೆಟ್; ಉದ್ಯಮಿಗಳಿಗೆ ಗಾಳ ಹಾಕುತ್ತಿದ್ದ ಸುಂದರಿ ಅರೆಸ್ಟ್

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?