https://youtube.com/shorts/NQT6o3FTgxQ?si=QO7iNw2quSngYXpc
newsics.com
ಇಸ್ರೇಲ್ ಇರಾನ್ ಯುದ್ಧ ಹಿನ್ನೆಲೆ ಹೋಟೆಲ್‌ಗಳಿಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಸ್ಥಗಿತವಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಹೋಟೆಲ್‌ಗಳನ್ನು ಬಂದ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಗ್ಯಾಸ್ ಇಲ್ಲದೆ ನಾವು ಅಡುಗೆ ಮಾಡುವುದು ಅಸಾಧ್ಯ ಎಂದು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ. ಇದರಿಂದ ನಗರದ ಲಕ್ಷಾಂತರ ಮಂದಿಗೆ ಊಟ ತಿಂಡಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ತೈಲ ಕಂಪನಿಗಳು 70 ದಿನಗಳವರೆಗೆ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದ್ದವು. ಆದರೆ, ಇದೀಗ ಏಕಾಏಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದು ಹೋಟೆಲ್ ಮಾಲೀಕರಿಗೆ ಶಾಕ್ ನೀಡಿದೆ. ಕೂಡಲೇ ಸಂಬಂಧಪಟ್ಟ ಕೇಂದ್ರ ಸಚಿವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಗ್ಯಾಸ್ ಪೂರೈಕೆಯನ್ನು ತಕ್ಷಣವೇ ಪುನರಾರಂಭಿಸುವಂತೆ ಹೋಟೆಲ್ ಮಾಲೀಕರ ಸಂಘ ಆಗ್ರಹಿಸಿದೆ.
ಗ್ಯಾಸ್ ಪೂರೈಕೆ ಸ್ಥಗಿತಗೊಂಡ ಪರಿಣಾಮ ಹೋಟೆಲ್‌ಗಳನ್ನು ಬಂದ್ ಮಾಡಲಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಚರ್ಚಿಸಲು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ನಿರ್ಧರಿಸಲು, ಇಂದು ಸಂಜೆ 7:30ಕ್ಕೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ ‘ನಿಸರ್ಗ ಗ್ರ್ಯಾಂಡ್’ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯನ್ನು ಹೋಟೆಲ್‌ಗಳ ಸಂಘ ಆಯೋಜನೆ ಮಾಡಿದೆ.
ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇಸ್ರೇಲ್ ದಾಳಿಯ ನಂತರ ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ಸರಬರಾಜು ಮೇಲೆ ಬೀರಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರಿಫೈನರಿಗಳಿಗೆ ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ದೇಶೀಯ ಎಲ್‌ಪಿಜಿ ಬಳಕೆದಾರರಿಗೆ ಆದ್ಯತೆ ನೀಡುವಂತೆ ಆದೇಶಿಸಿದೆ.