Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ರೋಗಿಗಳು ನಿರಾಳ
ಕರ್ನಾಟಕಪ್ರಮುಖ

ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ರೋಗಿಗಳು ನಿರಾಳ

Share
1 Min Read
SHARE

 

newsics.com

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ  ನಾಳೆಯಿಂದ (ಮಾರ್ಚ್ 11) ಕರೆನೀಡಿದ್ದ ಮುಷ್ಕರವನ್ನು  ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. 14 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ ನಿಡಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 11ರ ಮುಷ್ಕರವನ್ನು ವೈದ್ಯಾಧಿಕಾರಿಗಳ ಸಂಘ ವಾಪಸ್ ಪಡೆದುಕೊಂಡಿದೆ.
ಇಂದು ನಡೆದ ಸಂಧಾನ ಸಭೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಇಟ್ಟಿರುವ 14 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಮುಂದಿನ 3 ತಿಂಗಳಲ್ಲಿ ಎಲ್ಲ ಬೇಡಿಕೆ ಈಡೇರಿಸುವುದಾಗಿ ತಿಳಿಸಿದೆ. ಸರ್ಕಾರದ ಈ ಭರವಸೆಗೆ ವೈದ್ಯಾಧಿಕಾರಿಗಳ ಸಂಘ ಸಹ ಒಪ್ಪಿಕೊಂಡಿದ್ದು, ನಾಳೆಯ(ಮಾರ್ಚ್ 11) ಮುಷ್ಕರ ಹಿಂಪಡೆದುಕೊಂಡಿದೆ. ಇದರಿಂದ ರೋಗಿಗಳು ನಿಟ್ಟುಸಿರುಬಿಡುವಂತಾಗಿದೆ.
ಆರೋಗ್ಯ ಸಚಿವರು ಹೇಳಿದ್ದೇನು?
ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಎಂ ಸೂಚನೆ ಮೇರೆಗೆ ವೈದ್ಯಾಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದೇವೆ. CNR ಮಾಡುತ್ತೇವೆ ಎಂದು ಹೇಳಿದ್ದೇವೆ. ಜೇಷ್ಠತಾ ಪಟ್ಟಿಯೂ ರೆಡಿ ಇದೆ. ಪಿಜಿ ಕೋರ್ಸ್ ಮಾಡಿ ಎಂದು ಹೇಳಿದ್ದರು ಅದಕ್ಕೂ ಒಪ್ಪಿದ್ದೇವೆ. ಉಳಿದಂತೆ ಹಲವು ವಿಚಾರಗಳನ್ನು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಔಷಧಿಗಳ ಪೂರೈಕೆಗೆ ಖರೀದಿಗೆ ಹಣ ಕೊಟ್ಟಿದ್ದೇವೆ. ಔಷಧಿಗಳನ್ನು ನಮ್ಮ ಕಡೆಯಿಂದ ಸರಬರಾಜು ಆಗುತ್ತಿದೆ. ಔಷಧಿ ಎಲ್ಲಿಂದ ಬರುತ್ತೆ ಅನ್ನೋದು ಮುಖ್ಯ ಅಲ್ಲ. ಜನರಿಗೆ ಔಷಧಿ ಸಿಗಬೇಕು, ಎಲ್ಲದಕ್ಕೂ ಅವರೂ ಒಪ್ಪಿದ್ದಾರೆ. ಬಹುತೇಕ ಎಲ್ಲಾ ಬೇಡಿಕೆ ಈಡೇರಿಸುವುದರ ಬಗ್ಗೆ ಮಾತನಾಡಿದ್ದೇವೆ ಎಂದು ಹೇಳಿದರು.

 

ಭ್ರೂಣ ಹತ್ಯೆ ಮಾಹಿತಿ ನೀಡಿದರೆ ಲಕ್ಷ ರೂ. ಬಹುಮಾನ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು ಟೆಕ್ಕಿಗಳಿಗೆ ವರ್ಕ್ ಫ್ರಂ ಹೋಮ್, ಮಕ್ಕಳಿಗೆ ಆನ್ಲೈನ್ ಕ್ಲಾಸ್

 

TAGGED:Negotiations successful: Doctors call off strikepatients relieved
Share This Article
Facebook Twitter Copy Link Print
Previous Article ಭ್ರೂಣ ಹತ್ಯೆ ಮಾಹಿತಿ ನೀಡಿದರೆ ಲಕ್ಷ ರೂ. ಬಹುಮಾನ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
Next Article ಮಲೈಕಾಗೆ ಮತ್ತೆ ಲವ್‌? ಬೋಲ್ಡ್ ಆದದ್ದು ಯಾರು? ಅರೋರಾ ಲವ್ ಭಾರೀ ಡೇಂಜರ್!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?