https://youtube.com/shorts/fD6pvkz7g8c?si=uKQ1N3BMJTvK6QIw
newsics.com
ಆರ್ಥಿಕ ದಿವಾಳಿತನದ ಅಂಚಿನಲ್ಲಿರುವ ಪಾಕಿಸ್ತಾನಕ್ಕೆ ಈಗ ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧವು ಶಾಪವಾಗಿ ಪರಿಣಮಿಸಿದೆ. ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು ಭಾರಿ ಪ್ರಮಾಣದಲ್ಲಿ ಉಂಟಾಗಿದ್ದು, ಅಲ್ಲಿಯ ಸರ್ಕಾರವು ದೇಶದಾದ್ಯಂತ ಎರಡು ವಾರಗಳ ಕಾಲ ಶಾಲೆಗಳನ್ನು ಮುಚ್ಚಲು ಆದೇಶಿಸಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ದೇಶದಾದ್ಯಂತ ತೀವ್ರಗೊಳ್ಳುತ್ತಿರುವ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಎರಡು ವಾರಗಳ ಕಾಲ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಯಾಕಂದರೆ, ವಾಹನಗಳಿಗೆ ಇಂಧನವಿಲ್ಲದೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶಾಲೆಗೆ ತಲುಪಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿರುವುದೇ ಅದಕ್ಕೆ ಕಾರಣ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇಂಧನ ಬಳಕೆಯನ್ನು ಕಡಿಮೆ ಮಾಡಲು, ಮಾರ್ಚ್ 16 ರಿಂದ ಜಾರಿಗೆ ಬರುವಂತೆ ಎಲ್ಲಾ ಶಾಲೆಗಳಿಗೆ ಎರಡು ವಾರಗಳ ರಜೆ ಘೋಷಿಸಲಾಗಿದೆ. ಜೊತೆಗೆ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ತಕ್ಷಣದಿಂದಲೇ ಆನ್‌ಲೈನ್ ತರಗತಿಗಳಿಗೆ ಬದಲಾಗುವಂತೆ ಸೂಚಿಸಲಾಗಿದೆ.
ಇದರೊಂದಿಗೆ ಬ್ಯಾಂಕುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳು ವಾರಕ್ಕೆ ಕೇವಲ ನಾಲ್ಕು ದಿನಗಳು ಮಾತ್ರ ಕಾರ್ಯನಿರ್ವಹಿಸಲಿವೆ. ಏತನ್ಮಧ್ಯೆ, ಶೇ. 50ರಷ್ಟು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಸರ್ಕಾರಿ ಇಲಾಖೆಗಳ ಇಂಧನ ಭತ್ಯೆಯನ್ನು ಶೇ. 50ರಷ್ಟು ಕಡಿತಗೊಳಿಸಲಾಗಿದೆ.
ಸಚಿವರಿಗೂ ಶಾಕ್!
ಮುಂದುವರೆದು, ಸರ್ಕಾರಿ ಸಚಿವರು ಎರಡು ತಿಂಗಳ ಕಾಲ ತಮ್ಮ ಸಂಬಳವನ್ನು ತೆಗೆದುಕೊಳ್ಳುವುದಿಲ್ಲ ಎಂದು ಘೋಷಿಸಿದ ಪ್ರಧಾನಿ ಷರೀಫ್, ಸಂಸದರ ವೇತನದಲ್ಲಿ ಶೇ. 50 ರಷ್ಟು ಕಡಿತಗೊಳ್ಳಲಿದೆ ಎಂದರು. ಇದಲ್ಲದೆ, ₹3 ಲಕ್ಷಕ್ಕಿಂತ ಹೆಚ್ಚು ಆದಾಯ ಗಳಿಸುವ ಬಿಎಸ್-20 ಅಧಿಕಾರಿಗಳ ಎರಡು ದಿನಗಳ ಸಂಬಳವನ್ನು ಸಾರ್ವಜನಿಕ ಕಲ್ಯಾಣಕ್ಕಾಗಿ ಬಳಸಲಾಗುವುದು ಎಂದು ಸಹ ಘೋಷಿಸಿದ್ದಾರೆ.
ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ