newsics.com
ಬೆಂಗಳೂರು: ಮುಂದಿನ ದಿನಗಳಲ್ಲಿ ನೀವು ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್‌ಗಳು ಮಾತ್ರವಲ್ಲ, ಮೆಟ್ರೋ ಕಾರ್ಡ್ ಸಹ ಕಂಡಕ್ಟರ್‌ಗೆ (ನಿರ್ವಾಹಕ) ತೋರಿಸಿ ಬಿಎಂಟಿಸಿ (BMTC) ಬಸ್‌ನಲ್ಲಿ ಸಂಚರಿಸಬಹುದು.
ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನಗದು ರಹಿತ ಟಿಕೆಟ್ ವ್ಯವಸ್ಥೆಗೆ ಮಹತ್ವದ ಹೆಜ್ಜೆ ಇಟ್ಟಿದ್ದು, ಸುಮಾರು 10 ಸಾವಿರ ಅತ್ಯಾಧುನಿಕ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳನ್ನು ಅಳವಡಿಸಲು ಮುಂದಾಗಿದೆ.
ಈ ಹೊಸ ಇಟಿಎಂ ಮೆಷಿನ್ ನಲ್ಲಿ ಎನ್ಸಿಎಂಸಿ ಕಾರ್ಡ್ ಬಳಕೆ ಮಾಡಿ ಅಂದರೆ ಬಿಎಂಟಿಸಿ ಮತ್ತು ನಮ್ಮ ಮೆಟ್ರೋ ರೈಲಿನಲ್ಲೂ ಸಂಚಾರ ಮಾಡಲು ಅವಕಾಶ ನೀಡಲಾಗಿದೆ. ಬರೋಬ್ಬರಿ 40 ಕೋಟಿ ರುಪಾಯಿ ವೆಚ್ಚದಲ್ಲಿ ಮುಂಬೈ ಮೂಲದ ಚಲೋ ಅನ್ನೋ ಕಂಪನಿಗೆ ಟೆಂಡರ್ ನೀಡಲಾಗಿದೆ. ಐದು ವರ್ಷಕ್ಕೆ ಗುತ್ತಿಗೆ ಆಧಾರದಲ್ಲಿ 11 ಸಾವಿರ ಇಟಿಎಂ ಮಷಿನ್ ಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.
ಈಗಾಗಲೇ ಚಲೋ ಕಂಪನಿಗೆ 11 ಸಾವಿರ ಮಷಿನ್ ಗಳನ್ನು ಸಪ್ಲೈ ಮಾಡಲು ಟೆಂಡರ್ ನೀಡಲಾಗಿದೆ. ಇದಕ್ಕೆ ಪ್ರಯಾಣಿಕರು ಕಂಡಕ್ಟರ್ ಕಳ್ಳಾಟಕ್ಕೆ ಬ್ರೇಕ್ ಬೀಳಲಿದೆ.
ಈ ತಿಂಗಳಲ್ಲಿ ಎಲ್ಲಾ ಬಿಎಂಟಿಸಿ ಬಸ್ಸುಗಳಲ್ಲೂ ಹೊಸ ಮೆಷಿನ್ ಗಳು ಬರುವ ಸಾಧ್ಯತೆಯಿದೆ. ಈ ಮಷಿನ್ ಗಳಲ್ಲಿ ಎಟಿಎಂ ಕಾರ್ಡ್, ಕ್ರೆಡಿಟ್ ಕಾರ್ಡ್, ಫೋನ್ ಪೇ,ಗೂಗಲ್ ಪೇ ಸೇರಿದಂತೆ ಪೇಟಿಯಂ ಯೂಸ್ ಮಾಡಿ ಪ್ರಯಾಣಿಕರು ಹಣ ಪಾವತಿ ಮಾಡಿ ಸಂಚಾರ ಮಾಡಬಹುದು.
ಈ ಮಷಿನ್ ನಲ್ಲಿ ಡೈನಾಮಿಕ್ ಕ್ಯೂ ಆರ್ ಕೋಡ್ ಗಳನ್ನು ಅಳವಡಿಸಿದ್ದು, ಇದರಿಂದ ಕಂಡಕ್ಟರ್, ಪ್ರಯಾಣಿಕರಿಗೆ ಮತ್ತು ಬಿಎಂಟಿಸಿ ನಿಗಮಕ್ಕೆ ವಂಚನೆ ಮಾಡಲು ಸಾಧ್ಯವಿಲ್ಲ. ಎಲ್ಲಿಂದ ಎಲ್ಲಿಗೆ?ಎಷ್ಟು ಟಿಕೆಟ್ ದರ ಎನ್ನುವ ಸಂಪೂರ್ಣ ಮಾಹಿತಿ ಅಪ್ಲೋಡ್ ಮಾಡಲಾಗಿದೆ.
ಇಟಿಎಂ ಯಂತ್ರಗಳಲ್ಲಿ ಹೊಸ ತಂತ್ರಜ್ಞಾನ
ಬಿಎಂಟಿಸಿಯಲ್ಲಿ ಕೂಡ ಈಗಾಗಲೇ ಸ್ಟಾಟಿಕ್ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಾವತಿಸಿ ಪ್ರಯಾಣಿಸುವ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈ ವ್ಯವಸ್ಥೆಯಲ್ಲಿ ಯಾವುದೇ ಕೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳನ್ನು ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಇರಲಿಲ್ಲ.
ಇದೇ ಮೊದಲ ಬಾರಿಗೆ ಬಿಎಂಟಿಸಿ ಆ್ಯಂಡ್ರಾಯ್ಡ್ ಸೌಲಭ್ಯದ ವಿದ್ಯುನ್ಮಾನ ಟಿಕೆಟ್ ಯಂತ್ರ (ಇಟಿಎಂ)ಗಳನ್ನು ನೀಡಲಾಗುತ್ತಿದೆ. ಇಟಿಎಂ ಯಂತ್ರಗಳು ಹೊಸ ತಂತ್ರಜ್ಞಾನವನ್ನು ಹೊಂದಿದ್ದು, ನಗದು ರಹಿತ ಪಾವತಿಗೆ ಅನುಕೂಲವಾಗುತ್ತವೆ. ಇದರಿಂದ ಪ್ರಯಾಣಿಕರು ಡಿಜಿಟಲ್ ಪಾವತಿಗಳನ್ನು (UPI, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮುಂತಾದವು) ಬಳಸುವ ಸಾಧ್ಯತೆ ಇದೆ. ಇದರೊಂದಿಗೆ ಟಿಕೆಟ್ ನೀಡುವ ಪ್ರಕ್ರಿಯೆ ಪಾಸ್ಟ್ ಆಗುತ್ತದೆ.
ಈ ಇಟಿಎಂ ಯಂತ್ರಗಳಲ್ಲಿ ಗೂಗಲ್ ಪೇ, ಫೋನ್ ಪೇ, ಭೀಮ್ ಯುಪಿಐ ಆಧಾರಿತ ಡೈನಮಿಕ್ ಕ್ಯೂಆರ್ ಕೋಡ್‌ಗಳ ಜೊತೆಗೆ, ಮೆಟ್ರೋ ಕಾರ್ಡ್, ಡೆಬಿಟ್, ಕ್ರೆಡಿಟ್, ವೀಸಾ ಕಾರ್ಡ್‌ಗಳು ಮತ್ತು ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ (NCMC) ಬಳಸಿ ಪಾವತಿ ಮಾಡುವ ಅವಕಾಶವನ್ನು ನೀಡಲಾಗಿದೆ.
ಈ ಯಂತ್ರದ ವಿಶೇಷವೆಂದರೆ ಟಿಕೆಟ್ ವೇಗವಾಗಿ ಮುದ್ರಣವಾಗುತ್ತದೆ. ಟಚ್ ಸ್ಟೀನ್ ಮತ್ತು ವೇಗದ ಪ್ರಕ್ರಿಯೆ ವ್ಯವಸ್ಥೆಗಳನ್ನು ಈ ಸ್ಮಾರ್ಟ್ ಇಟಿಎಂ ಹೊಂದಿರಲಿದ್ದು, ಡೈನಮಿಕ್ ಕ್ಯೂ ಆರ್ ಕೋಡ್ ಆಧಾರಿತ ಪಾವತಿ ಸುಲಭವಾಗಿ ಟಿಕೆಟ್ ನೀಡುವುದಕ್ಕೆ ಅನುಕೂಲವಾಗಲಿದೆ.
ಈಗಾಗಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸ್ಟಾಟಿಕ್ ಕ್ಯೂಆರ್ ಕೋಡ್ ಸ್ಕ್ಯಾನ್ ಮೂಲಕ ಟಿಕೆಟ್ ಪಾವತಿ ಮಾಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಈ ವ್ಯವಸ್ಥೆಯಲ್ಲಿ ಪ್ರಯಾಣಿಕರು ತಮ್ಮ ಮೊಬೈಲ್ ಫೋನ್‌ನಿಂದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಮೊತ್ತ ಪಾವತಿಸಬಹುದು. ಇದುವರೆಗೆ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಬಳಸಿ ಟಿಕೆಟ್ ಪಡೆಯುವ ಅವಕಾಶ ಇರಲಿಲ್ಲ. ಆದರೆ ಇದೇ ಮೊದಲ ಬಾರಿ ಬಿಎಂಟಿಸಿ ಆ್ಯಂಡ್ರಾಯ್ಡ್ ಆಧಾರಿತ ವಿದ್ಯುನ್ಮಾನ ಟಿಕೆಟ್ ಯಂತ್ರಗಳನ್ನು (ETM) ಪರಿಚಯಿಸುತ್ತಿದೆ.
ಲೈಂಗಿಕ ಉತ್ತೇಜಕ ಮಾತ್ರೆ ಸೇವಿಸಿ ಯುವಕ ಸಾವು, ಶವ ಬಿಟ್ಟು ಗೆಳತಿ ಪರಾರಿ!
ಬೆಂಗಳೂರು ಟೆಕ್ಕಿಗಳಿಗೆ ವರ್ಕ್ ಫ್ರಂ ಹೋಮ್, ಮಕ್ಕಳಿಗೆ ಆನ್ಲೈನ್ ಕ್ಲಾಸ್
ಮಲೈಕಾಗೆ ಮತ್ತೆ ಲವ್? ಬೋಲ್ಡ್ ಆದದ್ದು ಯಾರು? ಅರೋರಾ ಲವ್ ಭಾರೀ ಡೇಂಜರ್!
ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ : ಬೆಂಗಳೂರಿನ ಬನಶಂಕರಿ ದೇವಾಲಯದಲ್ಲಿ ಅನ್ನಪ್ರಸಾದ ಸೇವೆ ತಾತ್ಕಾಲಿಕವಾಗಿ ಸ್ಥಗಿತ
ಇಂಧನ ಬೆಲೆ ಏರಿಕೆ ಎಫೆಕ್ಟ್: ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ