Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ; ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ
ಕರ್ನಾಟಕಪ್ರಮುಖ

ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ; ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ

Share
2 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿಜಿ) ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗೆಹರಿಯುವವರೆಗೂ ಊಟ ನೀಡದಿರಲು ನಿರ್ಧರಿಸಲಾಗಿದೆ ಎಂದು ಪಿಜಿ ಮಾಲೀಕರು ಘೋಷಿಸಿದ್ದು, ಎಲೆಕ್ಟ್ರಿಕ್ ಸ್ಟವ್ ಅಥವಾ ಸೌದೆ ಬಳಕೆಯಂತಹ ಪರ್ಯಾಯ ವ್ಯವಸ್ಥೆಗಳನ್ನು ರಾತ್ರೋರಾತ್ರಿ ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಅಲವತ್ತುಕೊಂಡಿದ್ದಾರೆ.
ಇನ್ನು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರಕ್ಕೆ ಬ್ರೇಕ್ ಹಾಕಿ ಬೆಂಗಳೂರಿನ ಪಿಜಿಗಳ ಊಟದ ಮೆನು ಬದಲಾವಣೆಗೆ ಪಿಜಿ ಮಾಲೀಕರ ಸಂಘ ನಿರ್ಧರಿಸಿದೆ. ಚಪಾತಿ ಹಾಗೂ ದೋಸೆಗಳ ಬದಲು ರೈಸ್ ಐಟಂಗಳತ್ತ ಹೆಚ್ಚು ಒಲವು ತೋರಿ. ತರಕಾರಿ, ಕಾಳುಗಳನ್ನು ವಿತರಿಸಿ ಎಂದು ಎಲ್ಲಾ ಪಿಜಿ ಮಾಲೀಕರಿಗೂ ಅಸೋಷಿಯೇಷನ್ನಿಂದ ಸೂಚನೆ ನೀಡಲಾಗಿದೆ.
ಹೆಚ್ಚಿನವರು ಉದ್ಯೋಗ ನಿಮಿತ್ತ ಅಥವಾ ವಿದ್ಯಾಭ್ಯಾಸಕ್ಕಾಗಿ ತಮ್ಮ ಮನೆಗಳಿಂದ ದೂರ ಉಳಿದು ಪಿಜಿಗಳನ್ನು ಆಶ್ರಯಿಸಿದ್ದಾರೆ. ಅವರು ಮಾಸಿಕ ಶುಲ್ಕವನ್ನು ಪಾವತಿಸಿದ್ದರೂ, ಸದ್ಯಕ್ಕೆ ಊಟದ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಹೋಟೆಲ್‌ಗಳೂ ಸಹ ವಾಣಿಜ್ಯ ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿರುವುದರಿಂದ, ಹೊರಗಡೆ ಊಟ ಸಿಗುವುದು ಕಷ್ಟಕರವಾಗಿದೆ. ಗೃಹಬಳಕೆಯ ಸಿಲಿಂಡರ್‌ಗಳ ಪೂರೈಕೆಗೆ ಕೇಂದ್ರದಿಂದ ಸೂಚನೆಗಳು ಬಂದಿದ್ದು, ಅವುಗಳು ತಕ್ಕಮಟ್ಟಿಗೆ ಲಭ್ಯವಿವೆ. ತಿಂಗಳಿಗೆ ಒಂದು ಸಿಲಿಂಡರ್ ದೊರೆಯುತ್ತಿರುವುದು ಮನೆಗಳಲ್ಲಿರುವವರಿಗೆ ಸ್ವಲ್ಪ ಸಮಾಧಾನಕರ ಸಂಗತಿ. ಆದರೆ, ವಾಣಿಜ್ಯ ಸಿಲಿಂಡರ್‌ಗಳ ಅಭಾವ ಮಾತ್ರ ಹೆಚ್ಚುತ್ತಲೇ ಇದೆ.
ಎಲ್‌ಪಿಜಿ ಸಿಲಿಂಡರ್ ತೀವ್ರ ಕೊರತೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯ ಮೇಲೂ ಗಂಭೀರ ಪರಿಣಾಮ ಬೀರಿದೆ. ಮಕ್ಕಳಿಗೆ ಆಹಾರ ತಯಾರಿಸಲು ತಿಂಗಳಿಗೆ ಹಲವು ಸಿಲಿಂಡರ್‌ಗಳು ಬೇಕಾಗುತ್ತವೆ. ಆದರೆ, ಕೊರತೆಯಿಂದ ಕಡಿಮೆ ಸಂಖ್ಯೆಯಲ್ಲಿ ಸಿಲಿಂಡರ್ ಪೂರೈಕೆಯಾಗಿರೋದು, ಅಡುಗೆ ಸಿಬ್ಬಂದಿ ಮತ್ತು ಶಿಕ್ಷಕರನ್ನು ಆತಂಕಕ್ಕೆ ತಳ್ಳಿದೆ. ಹಳೇ ಬಾಗಲಕೋಟೆಯ 3ನೇ ನಂಬರ್ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್ ಕೊರತೆಯಿಂದ ಅಡುಗೆ ತಯಾರಿಸಲು ಸಿಬ್ಬಂದಿಗಳಿಗೆ ಕಷ್ಟವಾಗಿದ್ದು, ಏಜೆನ್ಸಿಯವರು ಒಂದು ಸಿಲಿಂಡರ್‌ನಲ್ಲಿ ಅಡ್ಜಸ್ಟ್ ಮಾಡಿಕೊಳ್ಳಿ. ನಂತರ ಹೆಚ್ಚಿನ ಸಿಲಿಂಡರ್‌ಗಳು ಬಂದಾಗ ತಲುಪಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ಸಿಲಿಂಡರ್‌ನಲ್ಲಿ ದೊಡ್ಡ ಪ್ರಮಾಣದ ಅಡುಗೆ ತಯಾರಿಸುವುದು ಕಷ್ಟಕರ ಎಂದು ಸಿಬ್ಬಂದಿ ಹೇಳಿದ್ದು, ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲು ನಿರ್ಧರಿಸಲಾಗಿದೆ.

ವಿಧಾನಸಭೆಯಲ್ಲೂ ಸಿಲಿಂಡರ್ ಕೊರತೆ ಗದ್ದಲ: ಸರ್ಕಾರ ಮತ್ತು ವಿಪಕ್ಷದ ನಡುವೆ ವಾಕ್ಸಮರ

TAGGED:Shortage of LPG cylinders; difficulty in preparing hot meals in schools
Share This Article
Facebook Twitter Copy Link Print
Previous Article ವಿಧಾನಸಭೆಯಲ್ಲೂ ಸಿಲಿಂಡರ್ ಕೊರತೆ ಗದ್ದಲ: ಸರ್ಕಾರ ಮತ್ತು ವಿಪಕ್ಷದ ನಡುವೆ ವಾಕ್ಸಮರ
Next Article Kim Jong Un ಮುಜ್ತಬಾ ಖಮೇನಿ ಪರ ನಿಂತ ಕಿಮ್!; ಅಸಲಿ ಆಟ ಈಗ ಶುರು?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?