Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !
ಕರ್ನಾಟಕಆರೋಗ್ಯಪ್ರಮುಖ

ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

Share
2 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬಿಸಿಲು ವ್ಯಾಪಕವಾಗಿದೆ. ರಾಜ್ಯಾದ್ಯಂತ ತಾಪಮಾನದಲ್ಲಿ ಗಣನೀಯವಾಗಿ ಏರಿಕೆ ಕಂಡಿದ್ದು, ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡುತ್ತಾ ಬಂದಿದೆ. ಮಾರ್ಚ್ ಎರಡನೇ ವಾರ ಕಳೆಯುತ್ತಿದ್ದಂತೆ ಬಿಸಿಲಿನ ತೀವ್ರತೆ ಏರಿಕೆಯಾಗುತ್ತಿದ್ದು, ಜನರಲ್ಲಿ ಹೀಟ್ ಸ್ಟ್ರೋಕ್ (ಬಿಸಿಲು ಘಾತ) ಭೀತಿ ಶುರುವಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಹತ್ವದ ಸೂಚನೆಗಳನ್ನು ನೀಡಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಇಂದು ಬೆಂಗಳೂರಿನಲ್ಲಿ ತಾಪಮಾನವು 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ನಗರದಲ್ಲಿ ಒಣ ಹವೆ ಮುಂದುವರಿಯಲಿದ್ದು, ಸುಡುವ ಬಿಸಿಲಿನಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ.

 

ರಾಜ್ಯಾದ್ಯಂತ ಒಣ ಹವೆಯ ಅಬ್ಬರ

ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ:

ಕರಾವಳಿ ಭಾಗ: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೇವಾಂಶ ಮಿಶ್ರಿತ ಒಣ ಹವೆ ಇರಲಿದೆ.

ಉತ್ತರ ಒಳನಾಡು: ಬೆಳಗಾವಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಗರಿಷ್ಠ ಮಟ್ಟದಲ್ಲಿದ್ದು, ಇಂದೂ ಕೂಡ ಇದೇ ವಾತಾವರಣ ಮುಂದುವರಿಯಲಿದೆ.

 

ದಕ್ಷಿಣ ಒಳನಾಡು: ಮೈಸೂರು, ಮಂಡ್ಯ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಆರೋಗ್ಯ ಇಲಾಖೆಯ ಹೈ ಅಲರ್ಟ್

 

ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ಡಿಹೈಡ್ರೇಶನ್ (ನಿರ್ಜಲೀಕರಣ) ಮತ್ತು ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಿದೆ. ಈ ಬಗ್ಗೆ ವೈದ್ಯರು ಹಾಗೂ ಆರೋಗ್ಯ ಇಲಾಖೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದೆ.

 

ಯಾರು ಎಚ್ಚರಿಕೆ ವಹಿಸಬೇಕು?

ವೃದ್ಧರು ಮತ್ತು ಮಕ್ಕಳು.

ಗರ್ಭಿಣಿಯರು.

ಹೃದಯ ಸಂಬಂಧಿ ಕಾಯಿಲೆ ಇರುವವರು.

ತಜ್ಞರ ಸಲಹೆಗಳೇನು?

 

ನೀರಿನ ಸೇವನೆ: ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯಿರಿ.

ಆಹಾರ ಕ್ರಮ: ಎಳನೀರು, ಮಜ್ಜಿಗೆ, ಹಣ್ಣಿನ ರಸ ಹಾಗೂ ಹೆಚ್ಚಿನ ನೀರಿನಂಶವಿರುವ ಹಣ್ಣುಗಳನ್ನು (ಕಲ್ಲಂಗಡಿ, ಸೌತೆಕಾಯಿ) ಸೇವಿಸಿ.

ರಕ್ಷಣೆ: ಅನಿವಾರ್ಯವಾಗಿ ಹೊರಹೋಗುವಾಗ ಛತ್ರಿ, ಟೋಪಿ ಬಳಸಿ ಹಾಗೂ ಸುತಾರಂ ಹತ್ತಿ ಬಟ್ಟೆಗಳನ್ನು ಧರಿಸಿ.

https://www.newsics.com/2026/03/11/a-mother-along-with-her-two-year-old-child-committed-suicide-by-hanging-herself-in-the-same-noose/

TAGGED:The people of the state are suffering from the scorching heat! Fear of heat stroke due to the increase in temperature!
Share This Article
Facebook Twitter Copy Link Print
Previous Article ಎರಡು ವರ್ಷದ ಮಗುವಿನ ಜೊತೆಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮ*ಹತ್ಯೆ
Next Article ಇಂಧನ ಬೆಲೆ ಏರಿಕೆ ಎಫೆಕ್ಟ್‌: ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?