Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > BCCI Awards: ಕನ್ನಡಿಗ ರಾಹುಲ್ ದ್ರಾವಿಡ್ಗೆ ಜೀವಮಾನ ಸಾಧನೆ ಪ್ರಶಸ್ತಿ
ಪ್ರಮುಖ

BCCI Awards: ಕನ್ನಡಿಗ ರಾಹುಲ್ ದ್ರಾವಿಡ್ಗೆ ಜೀವಮಾನ ಸಾಧನೆ ಪ್ರಶಸ್ತಿ

Share
4 Min Read
SHARE

newsics.com

ಈ ಬಾರಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾರತ ಟೆಸ್ಟ್ ಹಾಗೂ ಏಕದಿನ ತಂಡದ ನಾಯಕ ಶುಭಮನ್ ಗಿಲ್ ಭಾಜನರಾಗಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ಟೆಸ್ಟ್ ಕ್ರಿಕೆಟ್‌ನಲ್ಲಿ ಕಳೆದ ವರ್ಷ ಸ್ಮರಣೀಯ ಪ್ರದರ್ಶನ ನೀಡಿದ ಗಿಲ್ಗೆ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯನ್ನು ನೀಡಲಾಗುವುದು. ನಾಯಕನಾದ ನಂತರ ಗಿಲ್, ಇಂಗ್ಲೆಂಡ್ ಪ್ರವಾಸದಲ್ಲಿ ತಮ್ಮ ಚೊಚ್ಚಲ ಸರಣಿಯಲ್ಲಿ ನಾಲ್ಕು ಶತಕಗಳು ಸೇರಿದಂತೆ ದಾಖಲೆಯ 754 ರನ್ ಕಲೆಹಾಕಿದ್ದರು. ಹಾಗೆಯೇ ಏಕದಿನ ತಂಡದ ನಾಯಕನಾಗಿ ಕಳೆದ ವರ್ಷ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡವನ್ನು ಚಾಂಪಿಯನ್ ಕೂಡ ಮಾಡಿದ್ದರು. ಆದಾಗ್ಯೂ ಕಳೆದ ವರ್ಷ ಟಿ20 ಸ್ವರೂಪದಲ್ಲಿ ಗಿಲ್ ಪ್ರದರ್ಶನ ವಿಶೇಷವಾಗಿರಲಿಲ್ಲ. ಆದರೆ ಉಳಿದೆರಡು ಸ್ವರೂಪಗಳಲ್ಲಿ ಮಿಂಚಿದ್ದ ಗಿಲ್, ಕಳೆದ ಅವರು ಮೂರು ಸ್ವರೂಪಗಳಲ್ಲಿ 42 ಇನ್ನಿಂಗ್ಸ್‌ಗಳಲ್ಲಿ 49 ಸರಾಸರಿಯಲ್ಲಿ ಒಟ್ಟು 1764 ರನ್ ಬಾರಿಸಿದ್ದರು. ಇದರಲ್ಲಿ ಏಳು ಶತಕಗಳು ಮತ್ತು ಮೂರು ಅರ್ಧಶತಕಗಳು ಸೇರಿದ್ದವು.

ದ್ರಾವಿಡ್ ಹಾಗೂ ಮಿಥಾಲಿ ರಾಜ್ಗೆ ಜೀವಮಾನ ಸಾಧನೆ ಪ್ರಶಸ್ತಿ

ಭಾರತದ ಮಾಜಿ ಮುಖ್ಯ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ವಿಶ್ವ ಕ್ರಿಕೆಟ್ನ ಅಗ್ರಗಣ್ಯ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ರಾಹುಲ್ ದ್ರಾವಿಡ್, ತರಬೇತುದಾರರಾಗಿಯೂ ಭಾರತ ಕ್ರಿಕೆಟ್ಗೆ ಸ್ಮರಣೀಯ ಕೊಡುಗೆಗಳನ್ನು ನೀಡಿದ್ದಾರೆ. ದ್ರಾವಿಡ್ ತಮ್ಮ ತರಬೇತಿಯಡಿಯಲ್ಲಿ, ಭಾರತ 19 ವರ್ಷದೊಳಗಿನವರ ತಂಡವನ್ನು 2018 ರ ವಿಶ್ವಕಪ್ನಲ್ಲಿ ಚಾಂಪಿಯನ್ ಮಾಡಿದರು. ಆ ನಂತರ 2021 ರಲ್ಲಿ ರವಿಶಾಸ್ತ್ರಿ ಬದಲಿಗೆ ಭಾರತದ ಹಿರಿಯ ತಂಡದ ಕೋಚ್ ಆಗಿ ನೇಮಕಗೊಂಡಿದ್ದ ದ್ರಾವಿಡ್, ತಮ್ಮ ಕೋಚಿಂಗ್ನಲ್ಲಿ ತಂಡವನ್ನು 2023 ರ ಏಕದಿನ ವಿಶ್ವಕಪ್ ಫೈನಲ್ಗೇರಿಸಿದ್ದರು. ಬಳಿಕ 2024 ರಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ತಂಡವನ್ನು ಚಾಂಪಿಯನ್ ಕೂಡ ಮಾಡಿದ್ದರು.

ಟೀಂ ಇಂಡಿಯಾದ ಮಾಜಿ ನಾಯಕ, ಕೋಚ್ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ. ಆಟಗಾರನಾಗಿ ಆ ಬಳಿಕ ತಂಡದ ನಾಯಕನಾಗಿ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ್ದ ರಾಹುಲ್ ದ್ರಾವಿಡ್, ನಿವೃತ್ತಿಯ ಬಳಿಕ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದರು.
ದ್ರಾವಿಡ್ ಅವರ ಕೋಚಿಂಗ್ನಡಿಯಲ್ಲಿ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್ ಗೆದ್ದಿತ್ತು. ಹಾಗೆಯೇ ಅವರ ಕೋಚಿಂಗ್ನಲ್ಲಿ ಸಾಕಷ್ಟು ಪ್ರತಿಭಾವಂತ ಆಟಗಾರರು ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟಿದ್ದು, ಪ್ರಸ್ತುತ ಕ್ರಿಕೆಟ್ ಲೋಕವನ್ನು ಆಳುತ್ತಿದ್ದಾರೆ. ಹೀಗೆ ತನ್ನ ನಿಸ್ವಾರ್ಥ ಸೇವೆಯಿಂದ ಕ್ರಿಕೆಟ್ ಲೋಕದಲ್ಲಿ ಹೆಸರುವಾಸಿಯಾಗಿರುವ ದ್ರಾವಿಡ್ಗೆ ಮಾರ್ಚ್ 15 ರಂದು ದೆಹಲಿಯಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ನಮನ್ ಪ್ರಶಸ್ತಿಗಳ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿ ಮಾಡಿರುವಂತೆ ರಾಹುಲ್ ದ್ರಾವಿಡ್ ಅವರಿಗೆ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು. ಟೀಂ ಇಂಡಿಯಾದ ‘ಬಿಗ್ ಫೋರ್’ ಬ್ಯಾಟಿಂಗ್ ಲೈನ್ ಅಪ್ನ ಭಾಗವಾಗಿದ್ದ ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ತಂತಹ ದಿಗ್ಗಜರ ಪಟ್ಟಿಯಲ್ಲಿ ಒಬ್ಬರಾಗಿದ್ದರು. ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ತಂಡಕ್ಕೆ ದ್ರಾವಿಡ್ ನೀಡಿರುವ ಕೊಡುಗೆ ಅಪಾರ. ಅದರಲ್ಲೂ ಟೆಸ್ಟ್ ಕ್ರಿಕೆಟ್ನಲ್ಲಿ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿದ್ದ ದ್ರಾವಿಡ್ಗೆ ‘ದಿ ವಾಲ್’ ಎಂಬ ಅಡ್ಡಹೆಸರನ್ನು ತಂದುಕೊಟ್ಟಿದೆ.
ತಂಡವನ್ನು ಚಾಂಪಿಯನ್ ಮಾಡಿದ್ದ ದ್ರಾವಿಡ್
ಏಕದಿನ ಮಾದರಿಯಲ್ಲಿ 10,000 ಕ್ಕೂ ಹೆಚ್ಚು ರನ್ ಗಳಿಸಿರುವ ದ್ರಾವಿಡ್, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ (13,288) ಗಳಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. 2012 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತರಾದ ದ್ರಾವಿಡ್, ಆ ಬಳಿಕ ವೀಕ್ಷಕ ವಿವರಣೆಗಾರನಾಗಿ ಕಾಣಿಸಿಕೊಂಡರು. ನಂತರ ತರಬೇತುದಾರರಾಗಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ದ್ರಾವಿಡ್, ತಮ್ಮ ತರಬೇತಿಯಡಿಯಲ್ಲಿ, ಭಾರತ 19 ವರ್ಷದೊಳಗಿನವರ ತಂಡವನ್ನು 2018 ರ ವಿಶ್ವಕಪ್ನಲ್ಲಿ ಚಾಂಪಿಯನ್ ಮಾಡಿದರು. ಆ ನಂತರ 2021 ರಲ್ಲಿ ರವಿಶಾಸ್ತ್ರಿ ಬದಲಿಗೆ ಭಾರತದ ಹಿರಿಯ ತಂಡದ ಕೋಚ್ ಆಗಿ ನೇಮಕಗೊಂಡಿದ್ದ ದ್ರಾವಿಡ್, ತಮ್ಮ ಕೋಚಿಂಗ್ನಲ್ಲಿ ತಂಡವನ್ನು 2023 ರ ಏಕದಿನ ವಿಶ್ವಕಪ್ ಫೈನಲ್ಗೇರಿಸಿದ್ದರು. ಬಳಿಕ 2024 ರಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ತಂಡವನ್ನು ಚಾಂಪಿಯನ್ ಕೂಡ ಮಾಡಿದ್ದರು.
ಬಿಸಿಸಿಐ ನಮನ್ ಪ್ರಶಸ್ತಿ
ಬಿಸಿಸಿಐ ಪ್ರತಿ ವರ್ಷದಂತೆ ಈ ವರ್ಷವೂ ತನ್ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 15 ರ ಭಾನುವಾರದಂದು ನವದೆಹಲಿಯಲ್ಲಿ ಆಯೋಜಿಸಿದೆ. 2006/07 ರಿಂದ ಈ ರೀತಿಯ ವಾರ್ಷಿಕ ಪ್ರಶಸ್ತಿ ಪ್ರಧಾನವನ್ನು ಆರಂಭಿಸಿರುವ ಬಿಸಿಸಿಐ, ಹಿಂದಿನ ವರ್ಷ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರು/ ಆಟಗಾರ್ತಿಯರು ಹಾಗೂ ಮಾಜಿ ಆಟಗಾರರು, ತರಬೇತುದಾರರು ಮತ್ತು ವಿವಿಧ ವಿಭಾಗಗಳಲ್ಲಿನ ಅಂಪೈರ್‌ಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.
ಈ ಸಮಾರಂಭದಲ್ಲಿ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ, ಕಳೆದೊಂದು ವರ್ಷದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕ್ರಿಕೆಟಿಗನಿಗೆ ಪಾಲಿ ಉಮ್ರಿಗರ್ ಪ್ರಶಸ್ತಿ ಮತ್ತು ವಿವಿಧ ದೇಶೀಯ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಚೆನ್ನೈನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

TAGGED:BCCI Awards: Lifetime Achievement Award for Kannadiga Rahul Dravid
Share This Article
Facebook Twitter Copy Link Print
Previous Article ಚೆನ್ನೈನ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
Next Article ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಒಡವೆ ಬ್ಯಾಗ್ ಕಳ್ಳತನ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?