Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೋಟೆಲ್ ಗಳು ಬಂದ್ ಆಗಲ್ಲ; ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ
ಕರ್ನಾಟಕಪ್ರಮುಖ

ಹೋಟೆಲ್ ಗಳು ಬಂದ್ ಆಗಲ್ಲ; ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ

Share
2 Min Read
SHARE

newsics.com

ಬೆಂಗಳೂರಿನಲ್ಲಿ LPG ಸಿಲಿಂಡರ್ ಕೊರತೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದ್ದು, ಎಲ್ಪಿಜಿ ದಾಸ್ತಾನು ಕೊರತೆ ಇಲ್ಲ.ಸುಳ್ಳು ವದಂತಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಹೇಳಿದ್ದಾರೆ.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಕೂಡ ಯಾವುದೇ ಹೋಟೆಲ್ಗಳು ಬಂದ್ ಆಗಲ್ಲ ಎಂದಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರೋ ಯುದ್ಧದಿಂದಾಗಿ ಜಗತ್ತಿನಾದ್ಯಂತ ಅಸ್ಥಿರತೆ ಉಂಟಾಗಿದೆ. ಯುದ್ಧದ ಮೋಹದಿಂದ ಜಗತ್ತಿಗೆ ತೈಲದ ಹೊರೆಬಿದ್ದಿದೆ. ಅದರಲ್ಲೂ, ಭಾರತದಲ್ಲಂತೂ ಗ್ಯಾಸ್ ಗಂಡಾಂತರವನ್ನೇ ಸೃಷ್ಟಿಸಿದೆ. ಮರ್ಷಿಯಲ್ ಗ್ಯಾಸ್ ಪೂರೈಕೆ ಆಗದೆ ಹೋಟೆಲ್ಗಳು ಬಂದ್ ಆಗುತ್ತಿವೆ.

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲವು ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಅನಿಲದ ಕೊರತೆ ಇರುವುದಿಲ್ಲವಾದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಹಾಗೂ ಗೃಹಬಳಕೆ ಅಡುಗೆ ಅನಿಲಕ್ಕೆ ಸಂಬಂಧಿಸಿದಂತೆ ಯಾವುದೇ ಕುಂದುಕೊರತೆಗಳು ಇದಲ್ಲಿ ಸಹಾಯವಾಣಿ 9611404384 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿಸಿ ರಾವ್ ಪ್ರತಿಕ್ರಿಯಿಸಿದ್ದು, ನಮ್ಮ ಉದ್ಯಮ ಉಳಿಯಬೇಕು. ಕಾರ್ಮಿಕರಿಗೂ, ಗ್ರಾಹಕರಿಗೂ ತೊಂದರೆ ಆಗಬಾರದು. ಗ್ರಾಹಕರ ನಂಬಿಕೆ ಉಳಿಸಿಕೊಳ್ಳಬೇಕು. ಯಾರೂ ಕೂಡ ಹೋಟೆಲ್ ಬಾಗಿಲು ಹಾಕಬಾರದು. ಬೆಂಗಳೂರಿನಲ್ಲಿ ಯಾವುದೇ ಹೋಟೆಲ್ಗಳು ಬಂದ್ ಆಗಲ್ಲ. ಬಂದ್ ಆಗಿರುವ ಹೋಟೆಲ್ಗಳನ್ನ ಮತ್ತೆ ತೆರೆಯುವ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.
ಹೋಟೆಲ್ ಬಾಗಿಲು ಹಾಕಿದರೆ ಎಲ್ಲರಿಗೂ ತೊಂದರೆ
ಪಿಜಿಯಲ್ಲಿರುವ ಬ್ಯಾಚುಲರ್ಸ್, ಐಟಿ ಕಂಪನಿ, ಆಸ್ಪತ್ರೆಗಳಿಗೆ ಹೋಟೆಲ್ಗಳು ಹೆಚ್ಚು ನೆರವು ಆಗುತ್ತಿವೆ. ಬಾಗಿಲು ಹಾಕಿದರೆ ಮಾಲೀಕರು, ಕಾರ್ಮಿಕರು, ಜನರಿಗೂ ತೊಂದರೆ ಆಗುತ್ತೆ. ಕೇವಲ 20% ಕಡಿಮೆ ಬಳಕೆ ಮಾಡುತ್ತಿದ್ದೇವೆ. ನಮಗೆ ಒದಗಿಸುವ ಗ್ಯಾಸ್ನಲ್ಲಿ 50% ಕೊಡಿ ಸಾಕು. ಪೆಟ್ರೋಲಿಯಂ ಕಂಪನಿಗಳ‌ ಮುಖ್ಯಸ್ಥರ ಜೊತೆ, ಸರ್ಕಾರದ ಕಾರ್ಯದರ್ಶಿಗಳ‌ ಜೊತೆ ಪರ್ಯಾಯ ಮಾರ್ಗಗಳ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಸದ್ಯಕ್ಕೆ ಬಂದ ಮಾಹಿತಿ ಪ್ರಕಾರ ಎರಡು ಹಡಗು ಭಾರತ ತಲುಪಿದೆ. ಇನ್ನೂ ನಮಗೆ ಕೈಗೆ ಬರಬೇಕಿದೆ. ಯುಗಾದಿ, ರಂಜಾನ್ ಸಮಯದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ. 50% ಅಗತ್ಯವಿರುವ ಗ್ಯಾಸ್ ಸಿಗಬಹುದು ಎಂಬ ವಿಶ್ವಾಸ ಇದೆ. ನಾಳೆಯಿಂದ ಹೋಟೆಲ್ ಎಲ್ಲವೂ ತೆರೆದಿರುತ್ತೆ. ಮೆಜೆಸ್ಟಿಕ್ನಲ್ಲಿ ಬಂದ್ ಆಗಿರುವ ಹೋಟೆಲ್ ಓಪನ್ ಆಗುತ್ತೆ. 13% ಗ್ಯಾಸ್ ಬೆಂಗಳೂರಿಗೆ ಅಗತ್ಯ ಇದೆ. ಆದರೆ 7% ಗ್ಯಾಸ್ ಸಿಕ್ಕಿದ್ರೂ ನಿರ್ವಹಣೆ ಮಾಡಬಹುದು ಎಂದರು.
ಇನ್ನು ಗ್ಯಾಸ್ ಸಿಲಿಂಡರ್ ಕೊರತೆಯಿಂದ ಹೋಟೆಲ್ನಲ್ಲಿ ಬೆಲೆ ಏರಿಕೆ ಮಾಡುತ್ತಿಲ್ಲ. ವೈಯಕ್ತಿಕವಾಗಿ ಅವರು ಬೆಲೆ ಏರಿಸಿದರೆ ಸಂಘ ಜವಾಬ್ದಾರವಲ್ಲ. 98% ಹೋಟೆಲ್ಗಳು ಈ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡಲ್ಲ ಎಂದು ಪಿಸಿ ರಾವ್ ಮಾಹಿತಿ ನೀಡಿದ್ದಾರೆ.

ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್

TAGGED:District Collector makes important clarification regarding gas; Hotels will not be closed
Share This Article
Facebook Twitter Copy Link Print
Previous Article ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್
Next Article ವೈರಲ್ ಆಡಿಯೋ ಡಿಲೀಟ್ ಮಾಡಿ: ರಶ್ಮಿಕಾ ಖಡಕ್ ಎಚ್ಚರಿಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?