https://youtube.com/shorts/yMSO-E277Og?si=gFSvtQQHQjZ3lXBt
newsics.com
ಬೀದರ್ : ಸಹಪಾಠಿಯೊಬ್ಬನ ಕಿರುಕುಳವನ್ನು ತಾಳಲಾರದೆ 16 ವರ್ಷದ ಶಾಲಾ ಬಾಲಕಿಯೊಬ್ಬಳು ಶಾಲಾ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮದಿಯಾ ನಶೀರ್ ಪಾಷಾ (16 ) ಎಂದು ಗುರುತಿಸಲಾಗಿದೆ.ಮೃತ ಬಾಲಕಿಯ ಚಿಕ್ಕಪ್ಪ ಎಂ.ಡಿ. ಯೂಸುಫ್ ಅವರು ಆರೋಪಿಸಿರುವಂತೆ, ಆಕೆಯ ಸಹಪಾಠಿಯೊಬ್ಬ ಮದಿಯಾಗೆ ಪ್ರೀತಿಸುವಂತೆ ನಿರಂತರವಾಗಿ ಪೀಡಿಸುತ್ತಿದ್ದ. ಆತನ ಮಾನಸಿಕ ಕಿರುಕುಳವೇ ಬಾಲಕಿ ಈ ತೀವ್ರ ನಿರ್ಧಾರ ತೆಗೆದುಕೊಳ್ಳಲು ಕಾರಣ ಎನ್ನಲಾಗಿದೆ.ಶಾಲೆಯ ಆವರಣದಲ್ಲಿ ಸಹಪಾಠಿ ವಿದ್ಯಾರ್ಥಿಯು ಬಾಲಕಿಗೆ ಚುಡಾಯಿಸುತ್ತಿದ್ದ ದೃಶ್ಯಗಳು ಅಲ್ಲಿನ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಭೆಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.