Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakkundi ಲಕ್ಕುಂಡಿ ನಿಧಿ ಮೌಲ್ಯ ಎಂಟು ಕೋಟಿಗೂ ಹೆಚ್ಚು! ಬಂತು ಹೊಸದೊಂದು ಡಿಮ್ಯಾಂಡ್
ಕರ್ನಾಟಕದೇಶಪ್ರಮುಖ

Lakkundi ಲಕ್ಕುಂಡಿ ನಿಧಿ ಮೌಲ್ಯ ಎಂಟು ಕೋಟಿಗೂ ಹೆಚ್ಚು! ಬಂತು ಹೊಸದೊಂದು ಡಿಮ್ಯಾಂಡ್

Share
2 Min Read
SHARE

newsics.com

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ 47 ದಿನಗಳಿಂದ ನಡೆದಿದ್ದ ಉತ್ಪನನ ಕಾರ್ಯವನ್ನು ಮಾರ್ಚ್‌11ರ ಬುಧವಾರ ಮುಕ್ತಾಯ ಮಾಡಲಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಮೈಸೂರು ಪುರಾತತ್ವ ಸಂಗ್ರಹಾಲಯಗಳು, ಪರಂಪರೆ ಇಲಾಖೆ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಈ ಉತ್ಪನನ ಕೆಲಸ ನಡೆದಿತ್ತು.

ಬುಧವಾರ ಸಂಜೆ ಪುರಾತತ್ವ ಇಲಾಖೆಯ ನಿಯಮದಂತೆ 14 ಅಡಿ ಆಳ ತೆಗೆದ ಉತ್ಪನನ ಸ್ಥಳವನ್ನು ಪ್ಲಾಸ್ಟಿಕ್ ತಾಡಪತ್ರಿ ಹಾಕಿ, ಉತ್ಪನನದ ವೇಳೆ ತೆಗೆದ ಮಣ್ಣನ್ನೇ ಹಾಕಿ ಮುಚ್ಚುವ ಕಾರ್ಯ ಪ್ರಾರಂಭಿಸಲಾಗಿದೆ. 10X10 ಮೀಟರ್ ಜಾಗದಲ್ಲಿ 4 ಬಾಕ್ಸ್‌ಗಳನ್ನು ರಚಿಸಿ, 30 ರಿಂದ 35 ಕಾರ್ಮಿಕರು 47 ದಿನ ಉತ್ಪನನ ಕಾರ್ಯದಲ್ಲಿ ಪಾಲ್ಗೊಂಡಿದ್ದರು. 50ಕ್ಕೂ ಹೆಚ್ಚು ಪುರಾತನ ಅವಶೇಷಗಳು ಈ ಭಾಗದಲ್ಲಿ ಸಿಕ್ಕವು. ಇತಿಹಾಸ ತಜ್ಞರ ಸ್ಥಳ ಪರಿಶೀಲನೆ ಬಳಿಕ ಉತ್ಪನನ ಕಾರ್ಯ ಮುಕ್ತಾಯಗೊಂಡಿದೆ ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಅವರು ಮಾಹಿತಿ ನೀಡಿದ್ದಾರೆ.

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ನಿಧಿ ನೀಡಿ ಪ್ರಮಾಣಿಕತೆ ಮೆರೆದಿದ್ದ ಪ್ರಜ್ವಲ್ ರಿತ್ತಿ ಕುಟುಂಬವು ಹೊಸ ಬೇಡಿಕೆಯೊಂದನ್ನು ಇರಿಸಿದ್ದು, ಇದು ಸರ್ಕಾರ ಹಾಗೂ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

ಮನೆ ನಿರ್ಮಾಣಕ್ಕೆ ಅಡಿಪಾಯ ಅಗೆಯುವ ಸಂದರ್ಭದಲ್ಲಿ ರಿತ್ತಿ ಕುಟುಂಬಕ್ಕೆ ಚಿನ್ನದ ನಿಧಿ ಸಿಕ್ಕಿತ್ತು. ನಿಧಿ ಸಿಕ್ಕ ಕೂಡಲೇ ಹಿಂದೆಮುಂದೆ ನೋಡದೆ ಈ ಕುಟುಂಬವು ಪೂರ್ಣ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿ ಪ್ರಮಾಣಿಕತೆ ಮೆರೆದಿತ್ತು. ಆದರೆ ಇದೀಗ ಕುಟುಂಬವು ಹೊಸದೊಂದು ಬೇಡಿಕೆ ಇರಿಸಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ಇದಕ್ಕೆ ಮುಖ್ಯ ಕಾರಣವಾಗಿರುವುದು ನಿಧಿಯ ಮೌಲ್ಯವು ಈಗ ಇರುವುದಕ್ಕಿಂತ ಹತ್ತುಪಟ್ಟು ಹೆಚ್ಚು ಎನ್ನುವುದು. ನಿಧಿ ಮೌಲ್ಯ 8 ಕೋಟಿ ರೂಪಾಯಿ ಎಂದು ತಿಳಿದ ಮೇಲೆ ನಿಧಿ ನೀಡಿದ ಕುಟುಂಬವು ಹೊಸದೊಂದು ಡಿಮ್ಯಾಂಡ್ ಇರಿಸಿದೆ.

ಮನೆ ನಿರ್ಮಾಣದ ಸಮಯದಲ್ಲಿ ಸಿಕ್ಕ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಇದೀಗ ಸರ್ಕಾರದಿಂದ ನಿವೇಶನ ಸಿಕ್ಕಿದೆ, ಹೊರ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಹಾಗೂ ಮನೆ ನಿರ್ಮಾಣದ ಭರವಸೆಯೂ ಸಿಕ್ಕಿದೆ. ಅಲ್ಲದೆ ಸರ್ಕಾರವು ಈ ಕುಟುಂಬಕ್ಕೆ 5 ಲಕ್ಷ ರೂಪಾಯಿ ಧನ ಸಹಾಯ ಮಾಡಿದೆ. ಇದೀಗ ಈ ಕುಟುಂಬವು ಹೊಸದೊಂದು ಡಿಮ್ಯಾಂಡ್ ಅನ್ನು ಸರ್ಕಾರದ ಮುಂದಿರಿಸಿದೆ.

ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಅಡಿಪಾಯ ತೆಗೆಯುವ ಸಂದರ್ಭದಲಿ 470 ಗ್ರಾಂ ಚಿನ್ನಾಭರಣಗಳ ನಿಧಿ ಪತ್ತೆಯಾಗಿತ್ತು.

ನಿಧಿ ಒಪ್ಪಿಸಿದ ಕುಟುಂಬವು ಇದೀಗ ಸರ್ಕಾರದ ಬಳಿ ಹೊಸದೊಂದು ಡಿಮ್ಯಾಂಡ್ ಇರಿಸಿದೆ. ನಿಧಿ ಮೌಲ್ಯದ 8 ಕೋಟಿ ರೂ. ಮೊತ್ತದಲ್ಲಿ ಐದರಲ್ಲಿ ಒಂದು ಪಾಲು ತಮಗೆ ನೀಡಬೇಕು ಎಂದು ಮನವಿ ಮಾಡಿದೆ. ನಾವು ನಮಗೆ ಸಿಕ್ಕಿದ್ದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ್ದೇವೆ. ಹೀಗಾಗಿ ತಜ್ಞರು ಹೇಳಿರುವಂತೆ ಚಿನ್ನದ ಆಯಂಟಿಕ್​​ ಮೌಲ್ಯದಲ್ಲಿ ನಮಗೆ ಐದನೇ ಒಂದು ಭಾಗ ಪಾಲು ನೀಡಬೇಕು. ಅಲ್ಲದೆ ಸರ್ಕಾರ ಸಹ ನಮಗೆ ಪ್ರಾಮಾಣಿಕವಾಗಿ ಪರಿಹಾರ ನೀಡಬೇಕು. ಈಗಿನ ಬೆಲೆಯನ್ನೇ ಕೊಡುತ್ತೇವೆ ಎಂದರೆ ನಾವು ಒಪ್ಪುವುದಕ್ಕೆ ಸಾಧ್ಯವಿಲ್ಲ. ಸಚಿವ ಎಚ್. ಕೆ. ಪಾಟೀಲ್ ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸಲಹಾ ಸಮಿತಿ ಸದಸ್ಯರಾದ ಸಿದ್ದು ಪಾಟೀಲ್ ನಮಗೆ ಭರವಸೆ ನೀಡಿದ್ದರು. ಅವರ ಮೇಲೆ ನಮಗೆ ಭರವಸೆ ಇದೆ ಎಂದು ಕುಟುಂಬದವರು ಹೇಳಿದ್ದಾರೆ.

ಇನ್ಮುಂದೆ ಗ್ರೋಕ್ ಬಳಕೆದಾರರಿಗೆ ಉಚಿತವಾಗಿ ಸೇವೆ ಇಲ್ಲ

TAGGED:Lakkundi Nidhi is worth more than eight crores! A new demand has come
Share This Article
Facebook Twitter Copy Link Print
Previous Article ರಾಷ್ಟ್ರಧ್ವಜಕ್ಕೆ ಅವಮಾನ : ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ
Next Article Elephant attack ಹಾಡಹಗಲೇ ಕಾಡಾನೆ ದಾಳಿ: ಬೆಳೆಗಾರ ಸಾವು

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?