Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋ ಸಂಗ್ರಹಿಸುವುದು ಅಪರಾಧ: ಹೈಕೋರ್ಟ್
ಕರ್ನಾಟಕಪ್ರಮುಖ

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋ ಸಂಗ್ರಹಿಸುವುದು ಅಪರಾಧ: ಹೈಕೋರ್ಟ್

Share
2 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್‌ ಪೋನ್​​ನಲ್ಲಿ ಸಂಗ್ರಹಿಸಿಟ್ಟಿರುವುದು ಸಹ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ (ಐಟಿ) ಅಪರಾಧವಾಗಲಿದೆ ಎಂದು ಹೈಕೋರ್ಟ್‌ ಆದೇಶಿಸಿದೆ.

ತಮ್ಮ ಮೊಬೈಲ್‌ನಲ್ಲಿ ಹೇರಳವಾಗಿ ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧದ ವಿಚಾರಣೆ ರದ್ದುಗೊಳಿಸಲು ನಿರಾಕರಿಸಿರುವ ಹೈಕೋರ್ಟ್‌, ‘ಈ ವಿಷಯದಲ್ಲಿ ವಿನಾಯಿತಿ ನೀಡಲು ಸುತರಾಂ ಸಾಧ್ಯವಿಲ್ಲ’ ಎಂದು ನುಡಿದಿದೆ.

‘ನನ್ನ ವಿರುದ್ಧ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ತ್ವರಿತಗತಿ ನ್ಯಾಯಿಕ ಪ್ರಕ್ರಿಯೆಯ ವಿಶೇಷ ಕೋರ್ಟ್‌–1ರಲ್ಲಿರುವ (ಎಫ್‌ಟಿಎಸ್‌ಸಿ) ಕ್ರಿಮಿನಲ್ ಪ್ರಕರಣದ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಕೇರಳದ ತ್ರಿಶೂರು ಜಿಲ್ಲೆಯ ಚೊಟ್ಟೂರುಪುರ ಕಿಲ್ಲನೂರಿನ ಪಿ.ಜೆ.ಬಿನೋಜ್‌ (38) ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, 2004ರ ಸುಪ್ರೀಂ ಕೋರ್ಟ್‌ನ ‘ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಅಲೈಯನ್ಸ್ ವರ್ಸಸ್ ಎಸ್.ಹರೀಶ್’ ಪ್ರಕರಣದ ತೀರ್ಪು ಉಲ್ಲೇಖಿಸುವ ಮೂಲಕ, ‘ಯಾವುದೇ ವ್ಯಕ್ತಿ ತನ್ನ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಅಥವಾ ವಿಡಿಯೊಗಳನ್ನು ಹೊಂದಿದ್ದು ಅವುಗಳನ್ನು ಪ್ರಸಾರ ಮಾಡಿಲ್ಲ ಎಂಬುದಕ್ಕೆ ಪುರಾವೆ ಇದೆ ಎಂದಾದರೆ ಅದು ನಿಶ್ಚಿತವಾಗಿ ಅಪರಾಧ’ ಎಂಬ ಶಾಸನದ ನಿಬಂಧನೆಗೆ ಮುದ್ರೆ ಒತ್ತಿದೆ.

‘ನನ್ನ ಮೊಬೈಲ್‌ನಲ್ಲಿ ಸಂಗ್ರಹಿಸಿರುವ ಚಿತ್ರಗಳನ್ನು ನಾನು ಯಾರೊಂದಿಗೂ ಹಂಚಿಕೊಂಡಿಲ್ಲ’ ಎಂಬ ಅರ್ಜಿದಾರರ ವಾದವನ್ನು ನ್ಯಾಯಪೀಠ ಸಾರಾಸಗಟಾಗಿ ತಳ್ಳಿ ಹಾಕಿದೆ.

ಪ್ರಕರಣದ ಹಿನ್ನೆಲೆ: ಅಪರಾಧ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಅರ್ಜಿದಾರರ ಮೊಬೈಲ್‌ ಫೋನ್‌ ಅನ್ನು ಪೊಲೀಸರು ತನಿಖೆ ವೇಳೆ ವಶಕ್ಕೆ ಪಡೆದಿದ್ದರು. ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಿತ್ತು. ಈ ವೇಳೆ, ಮೊಬೈಲ್‌ ಸ್ಟೋರೇಜ್‌ ಬಾಕ್ಸ್ ‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಮತ್ತು‌ ವಿಡಿಯೋಗಳು ಹೇರಳವಾಗಿರುವುದು ಪತ್ತೆಯಾಗಿತ್ತು.

ಇದರಿಂದ ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆ ಪೊಲೀಸರು, ಅರ್ಜಿದಾರನ ವಿರುದ್ಧ ಐಟಿ ಕಾಯ್ದೆ ಸೆಕ್ಷನ್ 67(ಬಿ) ಮತ್ತು ಪೋಕ್ಸೋ ಕಾಯ್ದೆ ಸೆಕ್ಷನ್ 15ರ ಅನ್ವಯ; ಮಕ್ಕಳ ಅಶ್ಲೀಲ ಚಿತ್ರಗಳ ರಚನೆ, ಬ್ರೌಸಿಂಗ್, ಸಂಗ್ರಹಣೆ ಮತ್ತು ಪ್ರಸರಣ ಶಿಕ್ಷಾರ್ಹ ಅಪರಾಧ ಎಂಬ ಅಂಶಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ನಂತರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅರ್ಜಿದಾರನ ವಿರುದ್ಧ ನಗರದ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ದೊಷಾರೋಪ ಹೊರಿಸಿ ವಿಚಾರಣೆ ನಡೆಸುತ್ತಿತ್ತು. ಇದರಿಂದ ತಮ್ಮ ವಿರುದ್ಧದ ಎಫ್‌ಐಆರ್‌ ಮತ್ತು ವಿಚಾರಣಾ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಅರ್ಜಿದಾರ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೋಗಳು ಮೊಬೈಲ್‌ ಪೋನ್ ‌ನಲ್ಲಿ ಸಂಗ್ರಹಿಸಲಾಗಿದೆಯಷ್ಟೆ. ಆದರೆ, ಅದನ್ನು ಯಾರಿಗೂ ಅದನ್ನು ಕಳುಹಿಸಿಲ್ಲ. ಹಾಗಾಗಿ, ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಅಪರಾಧಗಳು ನಮ್ಮ ಕಕ್ಷಿದಾರರಿಗೆ ಅನ್ವಯವಾಗುವುದಿಲ್ಲ. ಆದ್ದರಿಂದ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೋರಿದ್ದರು.

https://www.newsics.com/2026/03/12/a-brother-who-killed-his-own-sister-in-a-drunken-stupor/

TAGGED:Storing child pornography on mobile is a crime: High Court
Share This Article
Facebook Twitter Copy Link Print
Previous Article ಕುಡಿದ ಮತ್ತಿನಲ್ಲಿ ತಮ್ಮ-ತಂಗಿಯನ್ನೇ ಕೊ*ಲೆಗೈದ ಅಣ್ಣ!
Next Article ಬಾಯ್‌ಫ್ರೆಂಡ್‌ ಜೊತೆ ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮೊನಾಲಿಸಾ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?