https://youtube.com/shorts/DiU6l59Harw?si=Atk3K2_RIgW0n5N2
newsics.com
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತವೊಂದು ಎದುರಾಗಿದೆ ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ವಾಯುದಾಳಿಯೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ. ದೇಶವು ಮತ್ತಷ್ಟು ಬಿಕ್ಕಟ್ಟಿಗೆ ಸಿಲುಕಿದೆ.56 ವರ್ಷದ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯ ನಂತರ ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ.
ದಾಳಿಯಲ್ಲಿ ಅವರು ತಮ್ಮ ಒಂದು ಅಥವಾ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ ಮತ್ತು ಅವರ ಹೊಟ್ಟೆ ಅಥವಾ ಯಕೃತ್ತಿಗೆ ತೀವ್ರ ಹಾನಿಯಾಗಿದೆ ಎಂದು ‘ದ ಸನ್’ ಪತ್ರಿಕೆ ವರದಿ ಮಾಡಿದೆ.ಕಳೆದ ಸೋಮವಾರವಷ್ಟೇ ಅವರು ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡಿದ್ದರು. ಇವರ ತಂದೆ ಮತ್ತು ಪತ್ನಿ ಫೆಬ್ರವರಿ 28 ರಂದು ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮೃತಪಟ್ಟಿದ್ದರು. ಈ ಘಟನೆಯೇ ಯುದ್ಧಕ್ಕೆ ನಾಂದಿ ಹಾಡಿತ್ತು.
ಮೊಜ್ತಾಬಾ ಖಮೇನಿ ಅವರಿಗೆ ಪ್ರಸ್ತುತ ಟೆಹ್ರಾನ್‌ನ ಐತಿಹಾಸಿಕ ವಲಯದಲ್ಲಿರುವ ಸಿನಾ ಯುನಿವರ್ಸಿಟಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಒಂದು ಭಾಗವನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ. ಇರಾನ್‌ನ ಆರೋಗ್ಯ ಸಚಿವ ಮತ್ತು ಪ್ರಖ್ಯಾತ ಟ್ರಾಮಾ ಸರ್ಜನ್ ಆಗಿರುವ ಮೊಹಮ್ಮದ್ ರೇಜಾ ಜಾಫರ್ಗಜಾನಿ ಅವರ ನೇತೃತ್ವದಲ್ಲಿ ಚಿಕಿತ್ಸೆ ನಡೆಯುತ್ತಿದೆ.