https://youtube.com/shorts/yMSO-E277Og?si=gFSvtQQHQjZ3lXBt
newsics.com
ಡಿಸಿಎಂ ಡಿಕೆ ಶಿವಕುಮಾರ್ ಬಂಬಲಿಗರು ರಹಸ್ಯ ಸಭೆಗಳನ್ನು ನಡೆಸಿ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. ಇವುಗಳ ಮಧ್ಯದಲ್ಲೇ ಕಾಂಗ್ರೆಸ್ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿಕೆ ಶಿವಕುಮಾರ್ 14 ಮಂದಿ ಕಾಂಗ್ರೆಸ್ ಶಾಸಕರನ್ನು ಬಿಡದಿಯ ವಂಡರ್ ಲಾ ರೆಸಾರ್ಟ್‌ಗೆ ಕಳುಹಿಸಿದ್ದಾರೆ.
ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಬಂದ ಶಾಸಕರನ್ನು ಡಿಕೆ ಶಿವಕುಮಾರ್ ಆಪ್ತರು ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಪೊಲೀಸ್ ಬಂದೋಬಸ್ತ್ ಮತ್ತು ಎಸ್ಕಾರ್ಟ್ ವ್ಯವಸ್ಥೆಯೊಂದಿಗೆ ಶಾಸಕರನ್ನು ನೇರವಾಗಿ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರಿಗೆ ವಿಶೇಷ ವಸತಿ ವ್ಯವಸ್ಥೆ ಮಾಡಲಾಗಿದೆ.
ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬಿಜೆಪಿಯ ಆಪರೇಷನ್ ಕಮಲ ಪ್ರಯತ್ನವನ್ನು ತಡೆಯಲು ಈ ತಂತ್ರ ರೂಪಿಸಲಾಗಿದೆ.
https://www.newsics.com/2026/03/13/lpg-shortage-hits-infosys-too/