https://youtube.com/shorts/JFDfzeRUAUw?si=UPiQjhCFAIkLXEhb
ಜೈಪುರ: ವರದಕ್ಷಿಣೆ ಆಸೆಗಾಗಿ ಸೊಸೆಯಂದಿರಿಗೆ ಕಿರುಕುಳ ನೀಡುವ ಕುಟುಂಬಗಳಿಗೆ ಎಲ್‌ಪಿಜಿ ಸಿಲಿಂಡರ್ಪೂರೈಕೆಯನ್ನು ಸ್ಥಗಿತಗೊಳಿಸುವುದಾಗಿ ರಾಜಸ್ಥಾನ ಸರ್ಕಾರ ಘೋಷಿಸಿದೆ.
ರಾಜಸ್ಥಾನ ಪೊಲೀಸರು ತಮ್ಮ ಅಧಿಕೃತ ‘X’ (ಟ್ವಿಟರ್) ಖಾತೆಯ ಮೂಲಕ ಈ ಮಹತ್ವದ ನಿರ್ಧಾರವನ್ನು ಹಂಚಿಕೊಂಡಿದ್ದಾರೆ. “ವರದಕ್ಷಿಣೆ ಕಿರುಕುಳ ಪ್ರಕರಣಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ತನಿಖೆಯಲ್ಲಿ ಕಿರುಕುಳ ಸಾಬೀತಾದಲ್ಲಿ, ಸಂಬಂಧಪಟ್ಟ ಕುಟುಂಬಕ್ಕೆ ಗ್ಯಾಸ್ ಸಿಲಿಂಡರ್ ಸೌಲಭ್ಯವನ್ನು ರದ್ದುಗೊಳಿಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಸಾಮಾಜಿಕ ಪಿಡುಗನ್ನು ನಿಯಂತ್ರಿಸಲು ಅಗತ್ಯ ಸೇವೆಗಳನ್ನೇ ಅಸ್ತ್ರವಾಗಿ ಬಳಸಲು ಸರ್ಕಾರ ನಿರ್ಧರಿಸಿದೆ.
ಈ ಹೊಸ ನಿಯಮವನ್ನು ಯಾವಾಗ ಜಾರಿಗೆ ತರಲಾಗುವುದು ಎಂಬ ಬಗ್ಗೆ ಪೊಲೀಸರು ಇನ್ನು ನಿಖರವಾದ ದಿನಾಂಕವನ್ನು ಘೋಷಿಸಿಲ್ಲ. ಆದರೆ, ಈಗಾಗಲೇ ವರದಕ್ಷಿಣೆ ಕಿರುಕುಳದ ದೂರು ದಾಖಲಾಗಿರುವ ಮನೆಗಳ ಮೇಲೆ ನಿಗಾ ಇಡಲಾಗುತ್ತಿದ್ದು, ಶೀಘ್ರದಲ್ಲೇ ಈ ನಿಯಮ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
https://x.com/PoliceRajasthan/status/2031967694329954660?s=20