https://youtube.com/shorts/JFDfzeRUAUw?si=UPiQjhCFAIkLXEhb
newsics.com
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ತೀವ್ರ ಅಭಾವ ಮತ್ತು ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಹೋಟೆಲ್‌ಗಳಲ್ಲಿ ತಿಂಡಿ-ತಿನಿಸುಗಳ ದರವನ್ನು ಐದರಿಂದ ಹತ್ತು ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ.
ಬೆಂಗಳೂರಲ್ಲಿ ಇಡ್ಲಿ, ದೋಸೆ, ಕಾಫಿ-ಟೀ ಸೇರಿದಂತೆ ದಿನನಿತ್ಯದ ತಿಂಡಿಗಳ ಮೇಲೆ 10 ರೂ. ವರೆಗೆ ದರ ಹೆಚ್ಚಳವಾಗಿದೆ.ಇದರ ಜೊತೆ ಕೆಲವು ಹೋಟೆಲ್ ಗಳಲ್ಲಿ ಬಿಲ್ ನಲ್ಲಿ ಗ್ಯಾಸ್ ದರ 30 ರೂ. ವಿಧಿಸುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.
ಮಧ್ಯಪ್ರಾಚ್ಯದ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿದೆ. ತೈಲ ಕಂಪನಿಗಳು ನೀಡುತ್ತಿದ್ದ ರಿಯಾಯಿತಿಯನ್ನು ಕಡಿತಗೊಳಿಸಿವೆ. ಖಾದ್ಯ ತೈಲ ಮತ್ತು ಇತರ ಅಗತ್ಯ ವಸ್ತುಗಳ ಬೆಲೆಯೂ ಗಣನೀಯವಾಗಿ ಏರಿಕೆಯಾಗಿದೆ. ಈ ದರ ಏರಿಕೆಯು ಸದ್ಯಕ್ಕೆ ತಾತ್ಕಾಲಿಕವಾಗಿದ್ದು, ಗ್ಯಾಸ್ ಪೂರೈಕೆ ಸಹಜ ಸ್ಥಿತಿಗೆ ಬರುವವರೆಗೆ ಮುಂದುವರಿಯಲಿದೆ ಎನ್ನಲಾಗಿದೆ.
https://www.newsics.com/2026/03/14/symptoms-of-liver-cancer-appear-in-the-eyes/