Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ
ಪ್ರಮುಖಮನರಂಜನೆ

ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್ಶಾಗೆ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ

Share
2 Min Read
SHARE

https://youtube.com/shorts/JFDfzeRUAUw?si=UPiQjhCFAIkLXEhb

newsics.com

ಗಾಯಕ ಬಾದ್‌ಶಾ ಅವರಿಗೆ ಒಂದು ಕಡೆ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದ್ದರೆ, ಮತ್ತೊಂದೆಡೆ ಕಾನೂನು ಕ್ರಮಗಳ ಅಡಿಯಲ್ಲಿ ಅವರ ಬಂಧನಕ್ಕೆ ಸಿದ್ಧತೆ ನಡೆಯುತ್ತಿದೆ.
ಬಾದ್‌ಶಾ ಅವರ ಇತ್ತೀಚಿನ ‘ಟಟೀರಿ’ (Tateeree) ಹಾಡು ಈಗ ಅವರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನಲ್ಲಿ ಹರಿಯಾಣದ ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಅವರಿಗೆ ಪ್ರಾಣ ಬೆದರಿಕೆ (Death Threat) ಬಂದಿದೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಪೋಸ್ಟ್ ಒಂದರಲ್ಲಿ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎನ್ನಲಾದ ವ್ಯಕ್ತಿಯೊಬ್ಬ ಬಾದ್‌ಶಾಗೆ ಎಚ್ಚರಿಕೆ ನೀಡಿದ್ದಾನೆ. ‘ಗಾಯಕ ಬಾದ್‌ಶಾ, ನೀನು ಹರಿಯಾಣದ ಸಂಸ್ಕೃತಿಯನ್ನು ಹಾಳುಮಾಡಲು ಯತ್ನಿಸಿದೆ. 2024ರಲ್ಲಿ ನಿನ್ನ ಕ್ಲಬ್‌ನಲ್ಲಿ ನಾವು ಕೇವಲ ಟ್ರೈಲರ್ ತೋರಿಸಿದ್ದೆವು. ಆದರೆ ಈ ಬಾರಿ ನೇರವಾಗಿ ನಿನ್ನ ಹಣೆಗೆ ಗುಂಡಿಡುತ್ತೇವೆ’ ಎಂದು ಭಯಾನಕ ಸಂದೇಶ ರವಾನಿಸಲಾಗಿದೆ. ಈ ಪೋಸ್ಟ್ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇನ್ನೊಂದೆಡೆ ಬಾದ್ಶಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಹಾಡಿನ ವಿವಾದಕ್ಕೆ ಸಂಬಂಧಿಸಿದಂತೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಕಠಿಣ ನಿಲುವು ತಳೆದಿದೆ. ಮಾರ್ಚ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೂ ಬಾದ್‌ಶಾ ಗೈರುಹಾಜರಾಗಿದ್ದರು. ಇದರಿಂದ ಕೆರಳಿದ ಮಹಿಳಾ ಆಯೋಗವು ಬಾದ್‌ಶಾ ಅವರ ಪಾಸ್‌ಪೋರ್ಟ್ ಜಪ್ತಿ ಮಾಡಲು ಪೊಲೀಸರಿಗೆ ಸೂಚಿಸಿದೆ.
ಅಲ್ಲದೇ, ಬಾದ್ಶಾ ಅವರನ್ನು ಕೂಡಲೇ ಬಂಧಿಸಲು ಹರಿಯಾಣ ಪೊಲೀಸರಿಗೆ ಮಹಿಳಾ ಆಯೋಗವು ನಿರ್ದೇಶನ ನೀಡಿದೆ. ಹರಿಯಾಣದ ಹೆಣ್ಣುಮಕ್ಕಳನ್ನು ಹಾಡಿನ ಮೂಲಕ ಅವಮಾನಿಸಲಾಗಿದೆ ಎಂದು ಆಯೋಗ ಕಿಡಿಕಾರಿದೆ. ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಬಾದ್‌ಶಾ ಅವರ ಸುತ್ತ ಸಂಕಷ್ಟದ ಸುಳಿ ಸುತ್ತಿಕೊಂಡಿದೆ.
‘ಟಟೀರಿ’ ಹಾಡಿನಲ್ಲಿ ಶಾಲಾ ಸಮವಸ್ತ್ರ ಧರಿಸಿದ ಹರಿಯಾಣದ ವಿದ್ಯಾರ್ಥಿನಿಯರು ಆಕ್ಷೇಪಾರ್ಹವಾಗಿ ಡ್ಯಾನ್ಸ್ ಮಾಡಿದ್ದಾರೆ ಹಾಗೂ ಅಸಭ್ಯ ಸನ್ನೆಗಳನ್ನು ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂತು. ಇದು ಹರಿಯಾಣದ ಸಂಸ್ಕೃತಿ ಹಾಗೂ ವಿದ್ಯಾರ್ಥಿನಿಯರ ಘನತೆಗೆ ಧಕ್ಕೆ ತಂದಿದೆ ಎಂದು ಅನೇಕರು ದೂರಿದರು. ಈ ಹಾಡಿನ ಸಾಹಿತ್ಯ ಅಸಭ್ಯವಾಗಿದೆ ಎಂದು ಹಲವರು ದೂರು ನೀಡಿದ್ದರು. ಆ ಬಳಿಕ ಹಾಡನ್ನು ರಿಲೀಟ್ ಮಾಡಿದ ಬಾದ್ಶಾ ಅವರು ಕ್ಷಮೆ ಕೇಳಿದ್ದರು.

8 ನಿಮಿಷ ಬೇಯಿಸಿದ್ರೆ ಸಾಕು.. ಈ ತರಕಾರಿಯಿಂದ ಇಡೀ ತಿಂಗಳು ಮನೆಗೆ ಬೆಳಕು!

TAGGED:Singer Badshah threatened by Bishnoi gangwill shoot him in the forehead
Share This Article
Facebook Twitter Copy Link Print
Previous Article 8 ನಿಮಿಷ ಬೇಯಿಸಿದ್ರೆ ಸಾಕು.. ಈ ತರಕಾರಿಯಿಂದ ಇಡೀ ತಿಂಗಳು ಮನೆಗೆ ಬೆಳಕು!
Next Article ಮದುವೆ ರದ್ದುಗೊಳಿಸಿದ್ದಕ್ಕೆ ಕೋಪಗೊಂಡು ಯುವತಿಗೆ HIV ಇಂಜೆಕ್ಷನ್ ಚುಚ್ಚಿದ ವ್ಯಕ್ತಿ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?