ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಬಿಸಿಲಿಗೆ ಬೆಂದಿದ್ದ ಜನರಿಗೆ ಸಮಾಧಾನ
newsics.com ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಇಂದು ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಸುಡುವ ಬಿಸಿಲಿಗೆ ಬೆಂದಿದ್ದ ಜನರಿಗೆ ಸಮಾಧಾನ ತಂದಿದೆ. ಆದರೆ, ಕೆಲವು ಕಡೆ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಸಂಕಷ್ಟವೂ ಎದುರಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸುತ್ತಮುತ್ತ ವರ್ಷದ ಮೊದಲ ಮಳೆಯಾಗಿದೆ. ಆದರೆ, ಮಳೆಯ ಜೊತೆಗೆ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. … Continue reading ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಬಿಸಿಲಿಗೆ ಬೆಂದಿದ್ದ ಜನರಿಗೆ ಸಮಾಧಾನ
Copy and paste this URL into your WordPress site to embed
Copy and paste this code into your site to embed