https://youtube.com/shorts/JFDfzeRUAUw?si=UPiQjhCFAIkLXEhb
newsics.com
ದುಬೈ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಮಹಾಯುದ್ಧವು 15ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದ ತೀವ್ರತೆ ಈಗ ಗಲ್ಫ್ ರಾಷ್ಟ್ರಗಳತ್ತ ಹರಡುತ್ತಿದೆ. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಕ್ಷಿಪಣಿ ಹಾಗೂ ಡ್ರೋನ್ ಮೂಲಕ ಭೀಕರ ದಾಳಿ ನಡೆಸಿದೆ.
ಈ ಅನಿರೀಕ್ಷಿತ ದಾಳಿಯಿಂದಾಗಿ ವಿಶ್ವದ ಅತ್ಯಂತ ಕಾರ್ಯನಿರತ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಏರ್ಪೋರ್ಟ್ನಲ್ಲಿ ವಿಮಾನ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ.
ಇರಾನ್ನಿಂದ ಹಾರಿಬಂದ ಸರಣಿ ಕ್ಷಿಪಣಿಗಳು ಮತ್ತು ಸುಸಜ್ಜಿತ ಡ್ರೋನ್ಗಳು ದುಬೈ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಸುರಕ್ಷತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಒಳಬರುವ ಮತ್ತು ಹೊರಹೋಗುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಸಿಲುಕಿಕೊಂಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ಪ್ರಮುಖ ರಸ್ತೆಗಳನ್ನು ದುಬೈ ಆಡಳಿತ ಮಂಡಳಿ ಬಂದ್ ಮಾಡಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
https://www.newsics.com/2026/03/16/this-famous-bollywood-actress-is-worth-550-crores/