Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪ್ರಮೋಷನ್‌!; ಕೇವಲ 40 ವಿದ್ಯಾರ್ಥಿಗಳಿದ್ದರೆ ಸಾಕು
ಕರ್ನಾಟಕಪ್ರಮುಖ

ರಾಜ್ಯದ 50 ಸರ್ಕಾರಿ ಹೈಸ್ಕೂಲ್‌ಗಳಿಗೆ ಪ್ರಮೋಷನ್‌!; ಕೇವಲ 40 ವಿದ್ಯಾರ್ಥಿಗಳಿದ್ದರೆ ಸಾಕು

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲಾ-ಕಾಲೇಜು ಸಮಸ್ಯೆ ದೊಡ್ಡ ಮಟ್ಟದಲ್ಲಿದೆ. ಒಂದು ಕಡೆ ಎಸ್‌ಎಸ್‌ಎಲ್‌ಸಿ (SSLC) ನಂತರ ಮುಂದೆ ಓದಲು ಹಿಂದೇಟು ಹಾಕುವ ಯುವಕ, ಯುವತಿಯರು, ಮತ್ತೊಂದು ಕಡೆ ಶಿಕ್ಷಕರ ಸಮಸ್ಯೆ. ಈ ಎಲ್ಲಾ ಬೆಳವಣಿಗೆ ನಡುವೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳನ್ನು ಈಗ ಪದವಿಪೂರ್ವ (PUC) ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ. ಇದರಿಂದ ಶಾಲೆ ಬಿಡುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ಇಷ್ಟೇ ಅಲ್ಲದೆ 100 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಣಗೊಳಿಸಲಾಗುತ್ತಿದೆ. ಇದಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ರಾಜ್ಯದ ವಿವಿಧ ಭಾಗದ ಆಯ್ದ 50 ಪ್ರೌಢಶಾಲೆಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಅಂದರೆ 15 ಕಿ.ಮೀ ವ್ಯಾಪ್ತಿಯಲ್ಲಿ ಪಿಯು ಕಾಲೇಜು ಇಲ್ಲದ ಪ್ರದೇಶಗಳಲ್ಲಿರುವ ಪ್ರೌಢಶಾಲೆಗಳನ್ನು ಮಾತ್ರ ಈಗ ಮೇಲ್ದರ್ಜೆಗೆ ಏರಿಸಲಾಗುತ್ತಿದೆ.ಇದು ಹಂತಹಂತವಾಗಿ ನಡೆಯುವ ಪ್ರಕ್ರಿಯೆಯಾಗಿದೆ.

ನಿಯಮಗಳು ಸರಳ

ಮತ್ತೊಂದು ಗಮನಾರ್ಹ ವಿಚಾರ ಏನೆಂದರೆ ಇದಕ್ಕೆ ನಿಯಮಗಳು ಸರಳವಾಗಿವೆ. ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಕನಿಷ್ಠ 40 ವಿದ್ಯಾರ್ಥಿಗಳಿರಬೇಕೆಂಬ ನಿಯಮ ಇದೆ. ಈ ರೀತಿ ಇರುವ ಶಾಲೆಗಳು ಈಗ ಕಾಲೇಜುಗಳಾಗಲಿವೆ. ಇತ್ತ ಇದಕ್ಕಾಗಿ ಬೇಕಾಗಿರುವ ಸ್ಥಳ, ಸವಲತ್ತು, 10ನೇ ತರಗತಿಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಇದ್ದಾರೆಯೇ ಎಂದು ಪರಿಶೀಲನೆ ನಡೆಸುವ ಹೊಣೆಗಾರಿಕೆ ಸೇರಿದಂತೆ ಅಗತ್ಯ ಕೆಲಸಗಳನ್ನು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವಹಿಸಿಕೊಡಲಾಗುತ್ತಿದೆ. ಇವರು ಒಂದು ವಾರದ ಒಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಬೇಕಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಈ ಅನುಕಕೂಲ?

ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ಎರಡು ಪ್ರೌಢಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬೆಂಗಳೂರು ಉತ್ತರ, ದಕ್ಷಿಣಕ್ಕೆ ತಲಾ 1, ಬೆಂಗಳೂರು ಗ್ರಾಮಾಂತರ ಭಾಗಕ್ಕೆ ತಲಾ 2 ಪ್ರೌಢಶಾಲೆಗಳಿಗೆ ಅವಕಾಶ ನೀಡಲಾಗಿದೆ. ಇದರೊಂದಿಗೆ ಬೆಳಗಾವಿ, ಕೋಲಾರ, ವಿಜಯಪುರ, ಉತ್ತರ ಕನ್ನಡ, ಗದಗ,ಚಿಕ್ಕೋಡಿ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಗೆ ತಲಾ 1 ಪ್ರೌಢಶಾಲೆಗಳಿಗೆ ಪಿಯು ಉನ್ನತೀಕರಣ ಪ್ರಯೋಜನ ಸಿಕ್ಕಿದೆ.

ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್ಪೆಕ್ಟರ್

TAGGED:Promotion for 50 government high schools in the state!; Only 40 students are enough
Share This Article
Facebook Twitter Copy Link Print
Previous Article ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್ಪೆಕ್ಟರ್
Next Article ರಂಜಾನ್‌ಗೆ ಬಟ್ಟೆ ಕೊಡಿಸಲ್ಲ ಎಂದು 14 ತಿಂಗಳ ಹಸುಗೂಸನ್ನು ಸಾಯಿಸಿದ ಮಹಿಳೆ!

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?