Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸದನ ನಡೆಸಲ್ಲ ಎಂದು ಪೀಠದಿಂದ ಎದ್ದು ಹೋದ ಸ್ಪೀಕರ್ ಖಾದರ್! ಸರ್ಕಾರಕ್ಕೆ ತೀವ್ರ ಮುಜುಗರ
ಕರ್ನಾಟಕಪ್ರಮುಖ

ಸದನ ನಡೆಸಲ್ಲ ಎಂದು ಪೀಠದಿಂದ ಎದ್ದು ಹೋದ ಸ್ಪೀಕರ್ ಖಾದರ್! ಸರ್ಕಾರಕ್ಕೆ ತೀವ್ರ ಮುಜುಗರ

Share
2 Min Read
SHARE

newsics.com

ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್ ಯು.ಟಿ. ಖಾದರ್ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ.
ಸದನದಲ್ಲಿ ಸಚಿವ ಪರಮೇಶ್ವರ್ ಉತ್ತರಗಳನ್ನು ಮಂಡಿಸುತ್ತಿದ್ದ ವೇಳೆ ವಿಪಕ್ಷಗಳ ಸದಸ್ಯರಿಂದ ಟೀಕೆ ವ್ಯಕ್ತವಾಗಿದೆ. ಕಲಾಪ ಆರಂಭದಿಂದಲೂ ಸಚಿವರಿಂದನಿರೀಕ್ಷಿತ ಉತ್ತರ ಬಂದಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ‌ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತಾ ವಿಪಕ್ಷ ನಾಯಕ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಚಿವರ ವಿರುದ್ಧ ಸ್ಪೀಕರ್ ಖಾದರ್ ಅಸಮಾಧಾನ ಹೊರಹಾಕಿದ್ದಾರೆ. ಸದನದಲ್ಲಿ ಎಲ್ಲಾ ಶಾಸಕರೂ ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗಲ್ಲ. ಗಮನ ಸೆಳೆಯುವ ಸೂಚನೆಗೂ ಸಚಿವರು ಉತ್ತರ ಕೊಡಲ್ಲ. 3 ಸಲ ಸಚಿವರಿಗೆ ಹೇಳಿದರೂ ಸುಧಾರಣೆ ಕಂಡು ಬರುತ್ತಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ, ಕಾರಣ ಕೊಡಬೇಕು. ಅಲ್ಲಿಯವರೆಗೂ ನಾನು ಸದನ ನಡೆಸುವುದಿಲ್ಲ ಎಂದು ಖಾರವಾಗಿ ಹೇಳುವ ಮೂಲಕ ಆಡಳಿತ ಪಕ್ಷಕ್ಕೆ ಸ್ಪೀಕರ್ ಖಾದರ್ ಬಿಸಿ ಮುಟ್ಟಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಸಭಾತ್ಯಾಗ ಮಾಡಿದ್ದಾರೆ. ಪ್ರತಿದಿನವೂ ಶೇ. 10-30 ಲಿಖಿತ ಪ್ರಶ್ನೆಗಳಿಗೆ ಮಾತ್ರ ಉತ್ತರ ಕೊಡುತ್ತಿದ್ದಾರೆ. ಸರ್ಕಾರ ಹೆಣದಂತಾಗಿದ್ದು, ಸಿಎಂ ಹಿಡಿತ ಕಳೆದುಕೊಂಡಿದ್ದಾರೆ. ಸಚಿವರು ಸದನಕ್ಕೆ ಬರುತ್ತಿಲ್ಲ. ಯಾರು ಸಿಎಂ ಅಂತಾ ತೀರ್ಮಾನ ಆಗದಿರುವ ಕಾರಣ ಈ ರೀತಿ ಆಗುತ್ತಿದೆ. ಸ್ಪೀಕರ್ ನೊಂದು ಹೊರ ಹೋಗಿರುವುದು ಸರ್ಕಾರಕ್ಕೆ ಚಾಟಿ ಏಟು ನೀಡಿದಂತಾಗಿದೆ. ಸ್ಪೀಕರ್ ನಡೆಯನ್ನು ಸ್ವಾಗತಿಸುತ್ತೇವೆ. ಸರ್ಕಾರ ಬದುಕಿದ್ದರೆ ಸಿಎಂ ಬಂದು ಕ್ಷಮೆ ಕೇಳಬೇಕು. ಮಾನ, ಮಾರ್ಯಾದೆ ಇದ್ದರೆ ಸಚಿವರು ರಾಜೀನಾಮೆ ಕೊಟ್ಟು ಹೋಗಬೇಕು ಎಂದು ತಿವಿದಿದ್ದಾರೆ. ವಿಧಾನಸಭೆ ಇತಿಹಾಸದಲ್ಲಿಯೇ ಸರ್ಕಾರದ ಧೋರಣೆ ಖಂಡಿಸಿ ಸ್ಪೀಕರ್ ಪೀಠ ಬಿಟ್ಟು ಹೊರ ಹೋಗಿದ್ದಾರೆ. ಇದು ಆಘಾತಕಾರಿಯಾಗಿದ್ದು, ಸಿಎಂ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. 40 ದಿನದ ಅಧಿವೇಶನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರವೇ ಬರುವುದಿಲ್ಲ. ಸ್ಪೀಕರ್ ತೆಗೆದುಕೊಂಡಿರುವ ನಿರ್ಣಯಕ್ಕೆ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ಈ ಪುಟ್ಟ ಕಾಳು ಬೆರೆಸಿದ ನೀರು ಕುಡಿದ್ರೆ ವಾರದಲ್ಲೇ ಹೊಟ್ಟೆಯ ಬೊಜ್ಜು ಕರಗುತ್ತೆ!

TAGGED:Speaker Khader gets up from the bench to say that the House will not be held! A great embarrassment for the government
Share This Article
Facebook Twitter Copy Link Print
Previous Article ಈ ಪುಟ್ಟ ಕಾಳು ಬೆರೆಸಿದ ನೀರು ಕುಡಿದ್ರೆ ವಾರದಲ್ಲೇ ಹೊಟ್ಟೆಯ ಬೊಜ್ಜು ಕರಗುತ್ತೆ!
Next Article ಸುಳ್ಳು ಸುದ್ದಿ ಹಂಚಿಕೆ: 19 ಭಾರತೀಯರ ಬಂಧನಕ್ಕೆ ಯುಎಇ ಆದೇಶ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?