https://youtube.com/shorts/JFDfzeRUAUw?si=UPiQjhCFAIkLXEhb
newsics.com
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಪುನಃ ರಾಷ್ಟ್ರ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ. 72 ವರ್ಷದ ಡಿ.ವಿ.ಸದಾನಂದ ಗೌಡರಿಗೆ 2024ರ ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪಿತ್ತು.
ಜೂನ್‌ನಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾದ 4 ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ಕರ್ನಾಟಕ ವಿಧಾನಸಭೆಯಲ್ಲಿ 137 ಶಾಸಕರ ಬಲ ಹೊಂದಿರುವ ಕಾಂಗ್ರೆಸ್ 3 ಸೀಟುಗಳಲ್ಲಿ ಜಯಗಳಿಸಬಹುದು.
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ರಾಜ್ಯಸಭೆ ಅವಧಿಯೂ ಮುಕ್ತಾಯವಾಗಲಿದೆ. ಆದರೆ ಜೆಡಿಎಸ್ ಬಳಿ ಪುನಃ ಅವರನ್ನು ಆಯ್ಕೆ ಮಾಡುವಷ್ಟು ಶಾಸಕರ ಬಲವಿಲ್ಲ. ಆದ್ದರಿಂದ ಬಿಜೆಪಿಗೆ ಒಂದು ಸೀಟು ಸುಲಭವಾಗಿ ಸಿಗಲಿದೆ. ಈ ಸೀಟಿನ ಮೂಲಕ ಡಿ.ವಿ.ಸದಾನಂದ ಗೌಡರು ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎಂಬುದು ಸುದ್ದಿ.
ಡಿ.ವಿ.ಸದಾನಂದ ಗೌಡರು 2014ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ 718,326 ಮತಗಳನ್ನು ಪಡೆದು ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ 824,500 ಮತಗಳನ್ನು ಪಡೆದು ಮತ್ತೊಮ್ಮೆ ಆಯ್ಕೆಯಾದರು. ಆದರೆ 2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅಭ್ಯರ್ಥಿಯಾದರು. ಡಿ.ವಿ.ಸದಾನಂದ ಗೌಡರಿಗೆ ಟಿಕೆಟ್ ಕೈತಪ್ಪಿತ್ತು.