https://youtube.com/shorts/Uyg7eLAiO4c?si=HGl_mdjplGhkcNCz
newsics.com
ವಿಧಾನಸಭೆಯಲ್ಲಿ ಕಂಡು ಕೇಳರಿಯದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಲಾಪ ನಡೆಸದೇ ಪೀಠದಿಂದ ಎದ್ದು ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇದೇ ಮೊದಲ ಬಾರಿಗೆ 8 ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ಸದನದಲ್ಲಿ ಶಾಸಕರು ಕೇಳುವ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ಕೊಡುತ್ತಿಲ್ಲ ಎಂದು ಸಿಟ್ಟಾದ ಸ್ಪೀಕರ್ ಯು.ಟಿ.ಖಾದರ್ ಸಭಾತ್ಯಾಗ ಮಾಡಿ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಜೆಟ್ ಕಲಾಪದ 7 ನೇ ದಿನವಾದ ಇವತ್ತು ಕೂಡ ಕಲಾಪ ನಡೆಸಲು ವಿಧಾನಸಭೆಗೆ ಆಗಮಿಸಿದ್ದರು. ಆದರೆ ಸಚಿವರು, ಅಧಿಕಾರಿಗಳು ಲಿಖಿತ ಪ್ರಶ್ನೆಗಳಿಗೆ ಉತ್ತರಿಸಲು ಅನುಪಸ್ಥಿತರಿದ್ದರು.
ಇದಕ್ಕೆ ಮುನಿಸಿಕೊಂಡು ಪೀಠದಿಂದ ಹೊರಹೋದರು. ಇದರ ಬೆನ್ನಲ್ಲೇ ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಅಲ್ಲದೇ ಕರ್ನಾಟಕದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಕಾರಣ ಕೇಳಿ ಬರೋಬ್ಬರಿ ಎಂಟು ಇಲಾಖೆಯ ಹಿರಿಯ ಐಎಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಯಾವೆಲ್ಲಾ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಈ ಕೆಳಗಿನ ಬರೋಬ್ಬರಿ 8 ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ.
ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ- ಆರ್. ವಿನೋತ್ ಪ್ರಿಯಾ
ವಸತಿ ಇಲಾಖೆ ಕಾರ್ಯದರ್ಶಿ- ಮೋಹನ್ ರಾಜ್ ಕೆ.ಪಿ
ಸಾರಿಗೆ ಇಲಾಖೆ ಕಾರ್ಯದರ್ಶಿ-ಎನ್.ವಿ ಪ್ರಸಾದ್
ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ- ಆರ್.ಗೀರಿಶ್
ಲೋಕಪಯೋಗಿ ಇಲಾಖೆ ಕಾರ್ಯದರ್ಶಿ-ಅಮಲಾನ್ ಆದಿತ್ಯ ಬಿಸ್ವಾಸ್
ಕಂದಾಯ ಇಲಾಖೆ-ರಾಜೇಂದರ್ ಕುಮಾರ್ ಕಟಾರಿಯಾ
https://www.newsics.com/2026/03/17/cruiser-hit-by-lorry-three-dead-on-the-spot/