https://youtube.com/shorts/Uyg7eLAiO4c?si=HGl_mdjplGhkcNCz
newsics.com
ಬೆಂಗಳೂರು: ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗಿನ ವಿರುದ್ಧ ಸಮರ ಸಾರಿರುವ ಕರ್ನಾಟಕ ಹೈಕೋರ್ಟ್, ಈ ಕೃತ್ಯದಲ್ಲಿ ಭಾಗಿಯಾಗುವ ಪುರೋಹಿತರು, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಲ್ಯಾಣ ಮಂಟಪದ ಮಾಲೀಕರ ವಿರುದ್ಧವೂ ಕ್ರಿಮಿನಲ್ ಕ್ರಮ ಜರುಗಿಸಬಹುದು ಎಂದು ಎಚ್ಚರಿಕೆ ನೀಡಿದೆ.
16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹವಾದ ಪತಿ ಹಾಗೂ ಮದುವೆ ಮಾಡಿಕೊಟ್ಟ ಪೋಷಕರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ದೇವನಹಳ್ಳಿಯ ಮಂಜುನಾಥ್ ಎಂಬಾತನೊಂದಿಗೆ 16 ವರ್ಷದ ಬಾಲಕಿಯ ವಿವಾಹವನ್ನು ಆಕೆಯ ಪೋಷಕರು ನೆರವೇರಿಸಿದ್ದರು. ಬಾಲಕಿಗೆ 18 ವರ್ಷ ತುಂಬಿದ ನಂತರ ಮದುವೆಯನ್ನು ನೋಂದಣಿ ಮಾಡಿಸಲಾಗಿತ್ತು.
ಈಗ ಬಾಲಕಿಗೆ ವಯಸ್ಸಾಗಿರುವುದರಿಂದ ಮತ್ತು ಅವರು ಸಂಸಾರ ನಡೆಸುತ್ತಿರುವುದರಿಂದ ಬಾಲ್ಯವಿವಾಹದ ಕೇಸ್ ರದ್ದುಪಡಿಸಬೇಕು ಎಂದು ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.ಆರೋಪಿಗಳ ವಾದವನ್ನು ತಳ್ಳಿಹಾಕಿದ ನ್ಯಾಯಪೀಠವು, ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಅರ್ಜಿ ವಜಾಗೊಳಿಸಿದೆ.