https://youtube.com/shorts/Uyg7eLAiO4c?si=HGl_mdjplGhkcNCz
newsics.com
ಸ್ಯಾಂಡಲ್‌ವುಡ್ ನಿರ್ದೇಶಕ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಹಾಡಿನ ವಿವಾದ ಈಗ ಕೇವಲ ಸೋಷಿಯಲ್ ಮೀಡಿಯಾಗೆ ಸೀಮಿತವಾಗಿಲ್ಲ, ಬದಲಾಗಿ ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಸಂಘರ್ಷಕ್ಕೆ ಕಾರಣವಾಗಿದೆ. ಧ್ರುವ ಸರ್ಜಾ ನಟನೆಯ ಮತ್ತು ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾದ “ಸರ್ಸೆ ನಿನ್ನ ಸೆರಗ ಸರ್ಸೆ” (ಹಿಂದಿಯಲ್ಲಿ ‘ಸರ್ಕೆ ಚುನರ್ ತೇರಿ ಸರ್ಕೆ’) ಹಾಡು ಈಗ ದೊಡ್ಡ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಹಾಡಿನಲ್ಲಿ ಬಳಸಲಾದ ಅಶ್ಲೀಲ ಮತ್ತು ಡಬಲ್ ಮೀನಿಂಗ್ ಸಾಹಿತ್ಯದ ವಿರುದ್ಧ ಕೇಳಿಬಂದ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಅಶ್ಲೀಲ ಹಾಡಿಗೆ ಬಾಲಿವುಡ್‌ನ ನೋರಾ ಫತೇಹಿ ಹಾಗೂ ಸಂಜಯ್ ದತ್ ಹೆಜ್ಜೆ ಹಾಕಿದ್ದರು. ಕನ್ನಡ ಹಾಗೂ ಬಾಲಿವುಡ್‌ನಲ್ಲಿ ಈ ಹಾಡು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಬಾಲಿವುಡ್‌ನ ಗಾಯಕರು, ಸಿನಿಮಾ ದಿಗ್ಗಜರು ಆಕ್ರೋಶ ಹೊರಹಾಕಿದ್ದರು. ಕನ್ನಡದಲ್ಲಿ ಸರ್ಸೆ ಸೆರಗ ಸಾಂಗ್ ಬಾಲಿವುಡ್‌ನಲ್ಲಿ ಸರ್ಕೆ ಚುನರ್ ಸಾಂಗ್ ಆಗಿ ಬಿಡುಗಡೆಯಾಗಿದೆ. ಇದೀಗ ಹಿಂದಿ ಹಾಡು ಯೂಟ್ಯೂಬ್‌ನಿಂದ ಡಿಲೀಟ್ ಮಾಡಲಾಗಿದೆ.
ಈ ಹಾಡಿನಲ್ಲಿ ಮಹಿಳೆಯರನ್ನು ಅವಮಾನಿಸುವಂತಹ ಮತ್ತು ಅಶ್ಲೀಲತೆಯನ್ನು ಪ್ರಚೋದಿಸುವಂತಹ ಸಾಹಿತ್ಯ ಹಾಗೂ ದೃಶ್ಯಗಳಿವೆ ಎಂಬ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವಿನೀತ್ ಜಿಂದಾಲ್ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದು, ಹಾಡಿನಲ್ಲಿರುವ ಲೈಂಗಿಕ ಪ್ರಚೋದಕ ಸಾಹಿತ್ಯವು ಸಾರ್ವಜನಿಕ ವೀಕ್ಷಣೆಗೆ ಯೋಗ್ಯವಲ್ಲ ಮತ್ತು ಇದು ಯುವ ಪೀಳಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ ಎಂದು ದೂರಿದ್ದಾರೆ.
ಮಾನವ ಹಕ್ಕುಗಳ ಆಯೋಗದ ಕಠಿಣ ಸೂಚನೆ ಮತ್ತು ಜನರ ತೀವ್ರ ವಿರೋಧಕ್ಕೆ ಮಣಿದಿರುವ ಕೆಡಿ ಚಿತ್ರತಂಡ, ಇದೀಗ ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಂದ ಹಾಡಿನ ಹಿಂದಿ ಆವೃತ್ತಿಯನ್ನು ಅಧಿಕೃತವಾಗಿ ತೆಗೆದುಹಾಕಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಕಾಣಿಸಿಕೊಂಡಿದ್ದ ಈ ಹಾಡಿನ ವಿರುದ್ಧ ಇಡೀ ಸ್ಯಾಂಡಲ್‌ವುಡ್ ಕೆಂಡಾಮಂಡಲವಾಗಿತ್ತು.
ರಕೀಬ್ ಆಲಂ ಬರೆದಿದ್ದ ಈ ಹಾಡಿನ ಸಾಹಿತ್ಯ ಮತ್ತು ಡಬಲ್ ಮೀನಿಂಗ್ ಸಂಭಾಷಣೆಗಳ ವಿರುದ್ಧ ನೆಟ್ಟಿಗರು ಪ್ರೇಮ್ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಸಿನಿಮಾ ಈಗ ಹಾಡಿನ ವಿವಾದದಿಂದಾಗಿ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸದ್ಯಕ್ಕೆ ಹಾಡನ್ನು ತೆಗೆದುಹಾಕಿರುವ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ವಿಲ್’ ಚಿತ್ರದ ವಿವಾದಿತ ಹಾಡು “ಸರ್ಸೆ ನಿನ್ನ ಸೆರಗ ಸರ್ಸೆ” (ಹಿಂದಿಯಲ್ಲಿ ‘ಸರ್ಕೆ ಚುನರ್ ತೇರಿ ಸರ್ಕೆ’) ಬಿಡುಗಡೆಯಾದ ಕೇವಲ ಒಂದು ದಿನದಲ್ಲೇ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಹಾಡಿನಲ್ಲಿದ್ದ ಅಶ್ಲೀಲ ದೃಶ್ಯಗಳು ಮತ್ತು ಸಾಹಿತ್ಯದ ವಿರುದ್ಧ ಸಾರ್ವಜನಿಕರು ಹಾಗೂ ಕಾನೂನು ಸಂಸ್ಥೆಗಳು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ, ಚಿತ್ರತಂಡ ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ ಹಾಗೂ ಇತರ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಿಂದ ಅಧಿಕೃತವಾಗಿ ತೆಗೆದುಹಾಕಿದೆ.
ಪಬ್ಗಳಿಗೂ ತಟ್ಟಿದ ಸಿಲಿಂಡರ್ ಸಮಸ್ಯೆ: ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!