https://youtube.com/shorts/DiU6l59Harw?si=ZuaOlVBTxzvWqxLP
newsics.com
ಮೂಡುಬಿದಿರೆಯಲ್ಲಿ ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಎದುರಿಸುತ್ತಿರುವ ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಇದೀಗ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ.
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸಂತ್ರಸ್ತೆ ಮಹಿಳೆ ಆರೋಪ ಸಂಬಂಧ ಕೆಲ ಆಡಿಯೋ ವಿಡಿಯೋಗಳ ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್‌ಪೆಕ್ಟರ್ ವಿರುದ್ಧದ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಎಸಿಪಿ ಶ್ರೀಕಾಂತ್‌ಗೆ ಜವಾಬ್ದಾರಿ ನೀಡಲಾಗಿತ್ತು. ಮತ್ತೊಂದೆಡೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮಹಿಳೆಯರಿಗೆ ಕಿರುಕುಳ ಆರೋಪ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರನ್ನ ಭೇಟಿ ಮಾಡಿ ಮಾಡಿದ್ದು, ಸಂದೇಶ್ ಅವರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಈ ಬಗ್ಗೆ ಮಹಿಳಾ ಆಯೋಗ ಸಹ ಸುಮಟೋ ಕೇಸ್ ದಾಖಲಿಸಿಕೊಂಡಿದ್ದು, ಪ್ರಕರಣದ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇನ್ಸ್‌ಪೆಕ್ಟರ್ ಸಂದೇಶ ಅವರನ್ನು ಕೊನೆಗೂ ಅಮಾನತು ಮಾಡಲಾಗಿದೆ.
https://www.newsics.com/2026/03/18/yellow-alert-declared-in-many-places-including-bengaluru/