https://youtube.com/shorts/DiU6l59Harw?si=ZuaOlVBTxzvWqxLP
newsics.com
ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕನನ್ನು ಆರೋಗ್ಯ ವಿಮೆಯ ವ್ಯಾಪ್ತಿಗೆ ತರುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ತಿಳಿಸಿದ್ದಾರೆ.
ಮಂಗಳವಾರ ವಿಮೆ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 2033ರ ವೇಳೆಗೆ ಈ ಗುರಿಯನ್ನು ತಲುಪಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಹೇಳಿದರು.
ಆರೋಗ್ಯ ವಿಮೆಯು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಗ್ರಾಮೀಣ ಭಾಗಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ.
ಸುಮಾರು 25,000 ಗ್ರಾಮ ಪಂಚಾಯತ್ಗಳಲ್ಲಿ ಆರೋಗ್ಯ ವಿಮೆಯನ್ನು ತಲುಪಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.
ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಈಗಾಗಲೇ ಗ್ರಾಮ ಪಂಚಾಯತ್ಗಳನ್ನು ವಿಮಾ ಸೌಲಭ್ಯದ ಮೂಲ ಘಟಕವೆಂದು ಪರಿಗಣಿಸಿ ಅಧಿಸೂಚನೆ ಹೊರಡಿಸಿದೆ.