https://youtube.com/shorts/DiU6l59Harw?si=ZuaOlVBTxzvWqxLP
newsics.com
ಇಂದೋರ್: ಬುಧವಾರ ಬೆಳ್ಳಂಬೆಳಿಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಂದೇ ಕುಟುಂಬದ 7 ಮಂದಿ ಸಜೀವ ದಹನವಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ನ ಜನನಿಬಿಡ ವಸತಿ ಪ್ರದೇಶದಲ್ಲಿ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ
ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.