Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING ಯುಗಾದಿ ಹಬ್ಬದ ಶುಭಾಶಯಗಳು… ಇಂದಿನ ರಾಶಿ‌ ಭವಿಷ್ಯ, 19-03-2026, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING ಯುಗಾದಿ ಹಬ್ಬದ ಶುಭಾಶಯಗಳು… ಇಂದಿನ ರಾಶಿ‌ ಭವಿಷ್ಯ, 19-03-2026, ಗುರುವಾರ, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

Share
4 Min Read
SHARE

newsics.com

ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಪರಾಭವ ಸಂವತ್ಸರ ಸದಾ ಒಳಿತನ್ನೇ ಮಾಡಲಿ. 

ಇಂದಿನ ಪಂಚಾಂಗ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಪ್ರತಿಪತ್ ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಭ, ಕರಣ : ಕಿಂಸ್ತುಘ್ನ, ಸೂರ್ಯೋದಯ – 06 – 30 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:03 – 15:33, ಯಮಗಂಡ ಕಾಲ 06:30 – 08:01, ಗುಳಿಕ ಕಾಲ 09:31 – 11:02

=========

ಮೇಷ ರಾಶಿ:

ನಿಮ್ಮ ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅದೃಷ್ಟ ಇದ್ದರೂ ನಿಮ್ಮನ್ನು ನಂಬಿಯೇ ಕೆಲಸ ಮಾಡಿ.

ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಯಾವುದೇ ಜವಾಬ್ದಾರಿಯನ್ನು ದೂರದಿಂದಲೇ ತಳ್ಳಿಹಾಕುವಿರಿ. ಸುಬ್ರಹ್ಮಣ್ಯನ ಉಪಾಸನೆಯು ಸಂತಸಪ್ರದವಾಗಲಿದೆ.

ವೃಷಭ ರಾಶಿ:

ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಸಮಯ ಹಾಗೂ ಸ್ಥಳಗಳೂ ಮುಖ್ಯ. ನಿಮ್ಮ ಕಠಿಣ ಪರಿಶ್ರಮದ ಪೂರ್ಣ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಗುರಿಯ ಬಗ್ಗೆ ಇರುವ ದೃಢತೆಯು ಸಡಿಲವಾದೀತು. ಇಂದು ಏನಾದರೂ ಆಗುತ್ತದೆ ಎಂಬ ಅಪಾಯವು ಇರಲಿದೆ. ಬಂಧುಗಳ ಮನೆಯಲ್ಲಿ ನೀವು ಇಂದು ಅನಿರೀಕ್ಷಿತವಾಗಿ ಭೋಜನ ಮಾಡುವಿರಿ. ನಿಂದಕರ ಬಗ್ಗೆ ನಿಮ್ಮ ಮಾತುಗಳು ಇರದು.

ಮಿಥುನ ರಾಶಿ:

ನಿಮ್ಮನ್ನು ಸಂತೋಷಪಡಿಸಿದವರಿಗೆ ಕೃತಜ್ಞತೆಯನ್ನು ತಿಳಿಸಿ. ಮಕ್ಕಳ ಕುರಿತು ನಿಮಗೆ ಅಭಿಮಾನ ಹೆಚ್ಚಾಗುವುದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ವೃತ್ತಿಯ ಸ್ಥಳದಲ್ಲಿ ನಿಮ್ಮನ್ನು ಗುರುತಿಸುವರು. ದ್ವೇಷಕ್ಕೆ ಸರಿಯಾದ ಕಾರಣವಿರಲಿ. ಮಕ್ಕಳ ಕಾಳಜಿಯು ಅತಿಯಾಗುವುದು. ನಿಮ್ಮ ಬಳಿ ಇರುವುದನ್ನು ಜೋಪಾನ‌ಮಾಡಿಕೊಳ್ಳುವುದು ಸೂಕ್ತ. ಮಹಾವಿಷ್ಣುವಿನ ಉಪಾಸನೆಯು ನಿಮ್ಮ ಈ‌ ದಿನವನ್ನು ಸಾರ್ಥಕ ಮಾಡಿಸೀತು.

ಕರ್ಕಾಟಕ ರಾಶಿ:

ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಗೌರವ ಹೆಚ್ಚಾಗುವುದು. ಸ್ನೇಹಿತರ ಸಹಾಯದಿಂದ ವ್ಯವಹಾರ ಬೆಳೆಯುತ್ತದೆ. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನಿಮಗೆ ಇಂದು ವಾದದಲ್ಲಿ ಸೋಲಾಗಬಹುದು, ಮುಗ್ಗರಿಸಿ ಬೀಳುವುದು ಬೇಡ.

ಸಿಂಹ ರಾಶಿ:

ಯಾವುದೇ ಸಮಸ್ಯೆಯಲ್ಲಿ ಮುಳುಗಿದ್ದರೆ, ಇಂದು ಅದಕ್ಕೆ ಪರಿಹಾರ ಸಿಗುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಪ್ರಗತಿಯಿಂದ ಲಾಭ ಸಿಗುವುದು. ಕುಟುಂಬ ಜೀವನವನ್ನು ಬಹಳ ಆನಂದಿಸುವಿರಿ. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು.

ಕನ್ಯಾ ರಾಶಿ:

ನಿಮ್ಮ ಕೋಪವನ್ನು ಒಂದಿಷ್ಟು ಸಮಯದಲ್ಲಾದರೂ ನಿಯಂತ್ರಣದಲ್ಲಿಡಿ. ಕೆಲಸದಲ್ಲಿ ನಿಮಗೆ ಬೆಂಬಲ ಸಿಗುತ್ತದೆ. ಅನಗತ್ಯವಾಗಿ ಓಡಾಡುವುದರಿಂದ ಮನಸ್ಸು ತೊಂದರೆಗೊಳಗಾಗಬಹುದು. ಪ್ರಯಾಣವು ಅವಸರವಸರವಾಗಿ ಇರುವುದು. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು. ನೌಕರರಿಗೆ ಕೆಲಸವನ್ನು ಹೇಳುವ ರೀತಿಯಲ್ಲಿ ಹೇಳಿ, ಮಾಡಿಸಿಕೊಳ್ಳಿ. ಮಾತಿನಿಂದ ಅಳೆದ ನಿಮ್ಮ ಮಾಪನವು ಸರಿಯಾಗದೇ ಇರುವುದು.

ತುಲಾ ರಾಶಿ:

ಅಂದುಕೊಂಡಿದ್ದನ್ನು ಸಾಧಿಸಲು ಸರಿಯಾದ ಮಾರ್ಗವು ಕಂಡುಕೊಳ್ಳುವ ಅನಿವಾರ್ಯತೆ ಸೃಷ್ಟಿ. ದೇವರ ಮೇಲೆ ನಂಬಿಕೆ ಇಟ್ಟ ಕಾರಣ ನಿಮ್ಮ ಮನೋರಥವು ಪೂರ್ತಿಯಾಗಿದ್ದು ನಿಮಗೆ ಅತಿಶಯ ಸಂತೋಷವಾಗಲಿದೆ. ನಿಮ್ಮ ಘನತೆಗೆ ಯಾರಿಂದಲಾದರೂ ಧಕ್ಕೆ ಬರುವುದು. ಸಮಯಪಾಲನೆಗೆ ಎಲ್ಲರೂ ಪ್ರಶಂಸಿಸುವರು. ನೀವು ಕಾರ್ಯಕ್ಕೆ ಸಂಬಂಧಪಟ್ಟಂತೆ ನಿಮ್ಮದೇ ಆದ ಚೌಕಟ್ಟನ್ನು ರಚಿಸಿಕೊಳ್ಳುವುದು ಕ್ಷೇಮ.‌ ಇಲ್ಲವಾದರೆ ಎಲ್ಲವೂ ನಿಮ್ಮ ಬುಡಕ್ಕೇ ಬರುವುದು.

ವೃಶ್ಚಿಕ ರಾಶಿ:

ಉತ್ಸಾಹದಿಂದ ಇರಲು ನಿಮಗೆ ದಾರಿ ಕಡಿಮೆ‌ ಇರಬಹುದು. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಿಸುವಿರಿ. ನಿಮ್ಮ ವೃತ್ತಿಜೀವನದಲ್ಲಿ ಹೊಸತನ್ನು ಸಾಧಿಸಲು ಅವಕಾಶ ಸಿಗುತ್ತದೆ. ಯಾವುದೋ ಗುಂಗಿನಲ್ಲಿ ಇಂದಿನ ಕೆಲಸವನ್ನೆಲ್ಲ ಹಾಳುಮಾಡಿಕೊಳ್ಳುವಿರಿ. ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನು ನಡೆಸಿ. ಸ್ವಾರ್ಥದಿಂದ ನಿಮಗೇ ತೊಂದರೆಯಾಗುವುದು ಎಂದು ಮನವರಿಕೆ ಆಗುವುದು.

ಧನು ರಾಶಿ:

ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ಮಾತಿನ ಪ್ರಭಾವದಿಂದ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಆಒ್ತರು ಬಟ್ಟೆ ಇತ್ಯಾದಿಗಳನ್ನು ಉಡುಗೊರೆಯಾಗಿ ಪಡೆಯುವಿರಿ. ಆಮದು ವ್ಯವಹಾರವನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ನಿಮ್ಮ ದೌರ್ಬಲ್ಯಗಳನ್ನು ಎಲ್ಲರೆದುರು ಪ್ರಕಟಪಡಿಸುವುದು ಬೇಡ.

ಮಕರ ರಾಶಿ:

ಇಂದು ನೀವು ಮಾತಿನಿಂದ ಮಂತ್ರ ಮುಗ್ಧರನ್ನಾಗಿ ಮಾಡುವಿರಿ. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ನಿಮ್ಮನ್ನು ಬಲವಾದ ಕಾರಣದಿಂದ ಒಪ್ಪಿಕೊಳ್ಳಬಹುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ವಿದ್ಯಾರ್ಥಿಗಳು ಓದಿನ ಸಮಯವನ್ನು ಬದಲಿಸಿಕೊಳ್ಳುವುದು ಸೂಕ್ತ. ಉದ್ಯಮಕ್ಕೆ ಪ್ರಭಾವಿಗಳ ಕೃಪಾಕಟಾಕ್ಷ ಬೇಕು. ಅಪರಿಚಿತ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವು ಆಗಲಿದೆ. ಅನಪೇಕ್ಷಿತ ಮಾತುಗಳನ್ನು ಹೆಚ್ಚಾಗ ಆಡುವಿರಿ.

ಕುಂಭ ರಾಶಿ:

ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ಪರರ ವಸ್ತುವನ್ನು ಬಳಸಿ, ಸರಿಯಾಗಿ ಹಿಂದಿರುಗಿಸಿ. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ನೆಚ್ಚಿನ ವ್ಯಕ್ತಿಗಳ ಬಗ್ಗೆ ಪ್ರೀತಿ ಅಧಿಕವಾಗಬಹುದು.

ಮೀನ ರಾಶಿ:

ಇಂದು ಸಂಬಂಧಗಳಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಕಾಣುವಿರಿ. ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ಯಶಸ್ಸು ಸಿಗುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಸ್ಥಿತಿಯನ್ನು ಬಹಳ ಗಂಭೀರವಾಗಿ ನೋಡಿಕೊಳ್ಳಬೇಕು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಪರಿಸ್ಥಿತಿ ಉಂಟಾಗಬಹುದು.

 

HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

 

TAGGED:19-03-2026Happy Ugadi... Today's horoscopehow is your planetary position today?Thursday
Share This Article
Facebook Twitter Copy Link Print
Previous Article HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ
Next Article ಕನ್ನಡದ ಮೊಟ್ಟಮೊದಲ ಸ್ಯಾಟಲೈಟ್‌ ಚಾನೆಲ್‌ ಉದಯ ಟಿವಿ ಹೆಸರು ಬದಲಾವಣೆ : ಏನಾಗಲಿದೆ ಹೆಸರು?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?