newsics.com
ಹುಬ್ಬಳ್ಳಿ: ಸಾಮಾಜಿಕ ಜಾಲತಾಣದ ‘ರೀಲ್ಸ್’ ಕ್ರೇಜ್ ಹುಬ್ಬಳ್ಳಿಯಲ್ಲಿ ಮತ್ತೊಂದು ಬಲಿ ಪಡೆದಿದೆ.
ಅತಿ ವೇಗವಾಗಿ ವಾಹನ ಚಲಾಯಿಸುವ ಸಾಹಸದ ವಿಡಿಯೋ ಮಾಡಲು ಹೋಗಿ, ಸ್ಥಳೀಯ ಬಿಜೆಪಿ ಮುಖಂಡ ವಿರೇಶ್ ಸಂಗಳದ ಅವರ ಪುತ್ರ ನಮೀಷ್ ಸಂಗಳದ (15) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಈ ಘಟನೆ ಬರಸಿಡಿಲಿನಂತೆ ಎರಗಿದೆ.
ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ್, ಯುಗಾದಿ ಹಬ್ಬದ ರಜೆಗಾಗಿ ಹುಬ್ಬಳ್ಳಿಯ ಮನೆಗೆ ಬಂದಿದ್ದ. ಗುರುವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಸೇರಿ ಶೇಜವಾಡಕ್ಕರ್ ಪ್ಲಾಟ್‌ಗೆ ರೀಲ್ಸ್ ಮಾಡಲು ತೆರಳಿದ್ದ. ಅಲ್ಲಿ ಅತಿ ವೇಗವಾಗಿ ಬೈಕ್ ಮತ್ತು ಆಡಿ (AUDI) ಕಾರು ಚಲಾಯಿಸುವ ‘ಸ್ಟಂಟ್ ಹಾಗೂ ಕ್ರ್ಯಾಶ್’ ರೀಲ್ಸ್ ಚಿತ್ರೀಕರಿಸಲು ಈ ಬಾಲಕರು ಮುಂದಾಗಿದ್ದರು.
ಅಪಘಾತಕ್ಕೆ ಕಾರಣವಾದ ಆಡಿ ಕಾರನ್ನು ಚಲಾಯಿಸುತ್ತಿದ್ದವನು ಕೂಡ 15 ವರ್ಷದ ಅಪ್ರಾಪ್ತ ಬಾಲಕನೇ ಆಗಿದ್ದ. ರೀಲ್ಸ್ ಮಾಡುವ ಭರದಲ್ಲಿ ಅತಿ ವೇಗವಾಗಿ ಬಂದ ಕಾರು, ಬೈಕ್‌ನಲ್ಲಿದ್ದ ನಮೀಷ್‌ಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ನಮೀಷ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿದ ಅಪ್ರಾಪ್ತ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಲೈಸೆನ್ಸ್ ಇಲ್ಲದಿದ್ದರೂ ಬಾಲಕನ ಕೈಗೆ ದುಬಾರಿ ಕಾರು ನೀಡಿದ್ದು ಯಾರು ಎಂಬ ಬಗ್ಗೆ ತನಿಖೆ ಚುರುಕುಗೊಂಡಿದೆ.
Short dress girl ತುಂಡುಡುಗೆ ತೊಟ್ಟು ರೀಲ್ಸ್ ಮಾಡ್ತಿದ್ದ ಹುಡುಗಿಗೆ ಬುದ್ಧಿವಾದ ಹೇಳಿದ ಅಜ್ಜಿ! ವೈರಲ್ ವಿಡಿಯೋ ನೋಡಿ
Drugs in jail ಡ್ರಗ್ಸ್ ಸೇವನೆಯಲ್ಲಿ ರಾಜ್ಯದ ಮಹಿಳಾ ಕೈದಿಗಳೇ ಹೆಚ್ಚು!
Dhurandhar 2 ಧುರಂಧರ್ 2ನಲ್ಲಿ ಪ್ರಧಾನಿ ಮೋದಿ! ಏನಿದು ವೈರಲ್ ವಿಡಿಯೋ ಹಕೀಕತ್ತು? ನೀವೂ ನೋಡಿ ವಿಡಿಯೋ