Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High court news ಬೆತ್ತಲೆ ಫೋಟೋ ಬಳಸಿಕೊಂಡು ಶಿಕ್ಷಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ: ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ
ಕರ್ನಾಟಕಪ್ರಮುಖ

High court news ಬೆತ್ತಲೆ ಫೋಟೋ ಬಳಸಿಕೊಂಡು ಶಿಕ್ಷಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ: ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

Share
1 Min Read
SHARE

 

HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

HAPPY UGADI ಯುಗಾದಿ ಹಬ್ಬದ ಶುಭಾಶಯಗಳು… ಯುಗಾದಿ ವರ್ಷ ಭವಿಷ್ಯ

newsics.com

ಬೆಂಗಳೂರು: ಬೆತ್ತಲೆ ಫೋಟೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿ ಅತಿಥಿ ಶಿಕ್ಷಕಿ ಮೇಲೆ ಸುಮಾರು ಒಂದು ವರ್ಷಕ್ಕೂ ಅಧಿಕ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸರ್ಕಾರಿ ಶಾಲಾ ಶಿಕ್ಷಕನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.

ಆರೋಪಿ ಲಿಂಗರಾಜ ನಾಯಕ್(47) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ.

ಪ್ರಕರಣದ ದಾಖಲೆ ಪರಿಶೀಲಿಸಿದಾಗ ಇದು ಸಮ್ಮತಿಯ ಲೈಂಗಿಕ ದೌರ್ಜನ್ಯವಲ್ಲ, ಬಲವಂತದಿಂದ ಒತ್ತಾಯಿಸಿ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಹಂತದಲ್ಲಿ ಪ್ರಕರಣ ರದ್ದು ಮಾಡುವುದು ಸೂಕ್ತವಲ್ಲ, ಅರ್ಜಿದಾರರು ಪೂರ್ಣ ಪ್ರಮಾಣದ ವಿಚಾರಣೆ ಎದುರಿಸಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಆರೋಪಿ ಅರ್ಜಿಯನ್ನು ವಜಾಗೊಳಿಸಿದೆ.

ಅಧಿಕಾರ ದುರುಪಯೋಗ ಮಾಡಿಕೊಂಡು ಮೊದಲು ನಗ್ನ ಚಿತ್ರಗಳನ್ನು ಪಡೆದು ನಂತರ ಅವುಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ. ಉದ್ಯೋಗ ಕಳೆದುಕೊಳ್ಳುವ ಭಯ ಮತ್ತು ಅವಮಾನ ಭೀತಿಯಲ್ಲಿದ್ದ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

ಶಿವಮೊಗ್ಗದ ಸರ್ಕಾರಿ ಶಾಲೆಯೊಂದಕ್ಕೆ 2023ರಲ್ಲಿ ಅತಿಥಿ ಶಿಕ್ಷಕಿಯಾಗಿ ದೂರುದಾರೆ ಸೇರಿದ್ದರು. ಆಕೆಯನ್ನು ಪರಿಚಯಿಸಿಕೊಂಡ ಆರೋಪಿ ಕಚೇರಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಕೆಲಸದಿಂದ ತೆಗೆಯುವುದಾಗಿ ಬೆದರಿಸಿ ಮೊಬೈಲ್ ಮೂಲಕ ತನಗೆ ನಗ್ನ ಚಿತ್ರ ಕಳುಹಿಸಲು ಬಲವಂತ ಮಾಡಿದ್ದ. ಅವುಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಶಾಲೆ, ಮಹಿಳೆಯ ಮನೆ ಸೇರಿದಂತೆ ವಿವಿಧೆಡೆ ಅನೇಕ ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ಆರೋಪಿಸಿ ಸಂತ್ರಸ್ತ ಶಿಕ್ಷಕಿ ದೂರು ನೀಡಿದ್ದರು.

 

Film Review ಧುರಂಧರ್ 2 ಹೇಗಿದೆ? ಸಿನಿಮಾ ನೋಡಿದವರು‌ ಹೇಳ್ತಿರೋದೇನು? ವಿಡಿಯೋ ನೋಡಿ

New Fuel policy ಏಪ್ರಿಲ್ 1ರಿಂದ ಹೊಸ ಬಗೆ ಪೆಟ್ರೋಲ್! ದುಬಾರಿಯಾಗತ್ತಾ? ಏನಿದು ಹೊಸ ಪೆಟ್ರೋಲ್?

War field ಹೆಚ್ಚುತ್ತಲೇ ಇದೆ ಮಧ್ಯಪ್ರಾಚ್ಯ ಯುದ್ಧ ತೀವ್ರತೆ: ಗ್ಯಾಸ್ ಸ್ಥಾವರಗಳ ಮೇಲೆ ದಾಳಿ, ಪ್ರತಿದಾಳಿ

Drug controller arrest ಲಂಚದೊಂದಿಗೆ ಪರಾರಿಯಾಗುತ್ತಿದ್ದ ಔಷಧ ನಿಯಂತ್ರಕಿ ಬಂಧನ, ಸಿನಿಮಾ ಮಾದರಿ ಕಾರ್ಯಾಚರಣೆ!

 

TAGGED:Teacher sexually assaulted by blackmailing her with nude photos: High Court refuses to quash case
Share This Article
Facebook Twitter Copy Link Print
Previous Article Vaastu info ಚಪ್ಪಲಿ ಹಾಕಿ ಅಡುಗೆಮನೆಗೆ ಹೋಗಬಾರದಾ? ಹೋದ್ರೆ ಏನಾಗುತ್ತೆ?
Next Article Dhurandhar 2 ಧುರಂಧರ್ 2ನಲ್ಲಿ ಪ್ರಧಾನಿ ಮೋದಿ! ಏನಿದು ವೈರಲ್ ವಿಡಿಯೋ ಹಕೀಕತ್ತು? ನೀವೂ ನೋಡಿ ವಿಡಿಯೋ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?