newsics.com
ಅಮೆರಿಕದ ಯುದ್ಧ ವಿಮಾನಗಳನ್ನು ಇಳಿಸಲು ಅವಕಾಶ ನೀಡಬೇಕೆಂಬ ಅಮೆರಿಕದ ಮನವಿಯನ್ನು ಶ್ರೀಲಂಕಾ ನಿರಾಕರಿಸಿದೆ. ಈ ಬಗ್ಗೆ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶ್ರೀಲಂಕಾದ ಸಂಸತ್ತಿನಲ್ಲಿ ತಿಳಿಸಿದ್ದಾರೆ.
ಕೆಂಪು ಸಮುದ್ರ ಮತ್ತು ಏಡನ್ ಕೊಲ್ಲಿಯ ನಡುವಿನ ಪ್ರಮುಖ ಕಡಲ ಮಾರ್ಗವಾದ ಜಿಬೌಟಿಯಲ್ಲಿರುವ ಅಮೆರಿಕದ ಸೇನಾ ನೆಲೆಯಿಂದ ಮಾರ್ಚ್ 4 ಮತ್ತು 8 ರಂದು ಈ ಮನವಿಗಳು ಬಂದಿದ್ದವು, ಆದರೆ ಆ ಎರಡೂ ಮನವಿಗಳನ್ನು ಶ್ರೀಲಂಕಾ ತಿರಸ್ಕರಿಸಿದೆ.
ಹಲವು ಒತ್ತಡಗಳ ಹೊರತಾಗಿಯೂ ನಾವು ನಮ್ಮ ತಟಸ್ಥತೆಯನ್ನು ಕಾಪಾಡಿಕೊಳ್ಳಲು ಬಯಸುತ್ತೇವೆ. ನಾವು ಯಾವುದಕ್ಕೂ ಮಣಿಯುವುದಿಲ್ಲ. ಮಧ್ಯಪ್ರಾಚ್ಯ ಯುದ್ಧವು ಸವಾಲುಗಳನ್ನು ಒಡ್ಡುತ್ತದೆ. ಆದರೆ ಈ ವಿಷಯದಲ್ಲಿ ತಟಸ್ಥವಾಗಿರಲು ನಾವು ಸಾಧ್ಯವಿರುವ ಎಲ್ಲ ಪ್ರಯತ್ನವನ್ನೂ ಮಾಡುತ್ತೇವೆ” ಎಂದು ಶ್ರೀಲಂಕಾದ ಅಧ್ಯಕ್ಷ ಹೇಳಿದ್ದಾರೆ.
ಅಮೆರಿಕದ ವಿಮಾನವು ತಲಾ 8 ಹಡಗು ವಿರೋಧಿ ಕ್ಷಿಪಣಿಗಳನ್ನು ಹೊಂದಿರುವ 2 ಯುದ್ಧವಿಮಾನಗಳನ್ನು ತರಲು ಪ್ರಯತ್ನಿಸಿದೆ. ದಕ್ಷಿಣ ಮತ್ತು ಮಧ್ಯ ಏಷ್ಯಾದ ಅಮೆರಿಕದ ವಿಶೇಷ ರಾಯಭಾರಿ ಸೆರ್ಗಿಯೊ ಗೋರ್ ಅವರೊಂದಿಗಿನ ಅನುರ ಕುಮಾರ ದಿಸಾನಾಯಕೆ ಅವರ ಸಭೆಯ ನಂತರ ಈ ಘೋಷಣೆ ಮಾಡಲಾಯಿತು.