https://youtube.com/shorts/1G3iDuCfqaQ?si=rbtHZp_4mD8cY9Sv
newsics.com
ಹೈದರಾಬಾದ್: ಆಂಧ್ರದ ಎಲೂರು ಜಿಲ್ಲೆಯ ಗೋದಾವರಿ ನದಿಯಲ್ಲಿ ಈಜಲು ತೆರಳಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಏಳು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಐವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ವಿದ್ಯಾರ್ಥಿಗಳು ಗುಂಟೂರು ಜಿಲ್ಲೆಯ ಅಮರಾವತಿಯ ಖಾಸಗಿ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನಾನಕ್ಕಾಗಿ ನದಿಗೆ ಇಳಿದಿದ್ದರು ಎನ್ನಲಾಗಿದೆ.
ವಿದ್ಯಾರ್ಥಿಗಳು ನದಿ ಆಳವಿಲ್ಲ ಎಂದು ಭಾವಿಸಿ ಇಳಿದಿದ್ದಾರೆ. ಅವರಿಗೆ ನದಿಯ ಪರಿಸ್ಥಿತಿಗಳ ಬಗ್ಗೆ ಅರಿವಿನ ಕೊರತೆಯಿತ್ತು. ಮೂರು ಶವಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಎಸ್‌ಡಿಆರ್‌ಎಫ್ ತಂಡದಿಂದ ಉಳಿದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.