https://youtube.com/shorts/1G3iDuCfqaQ?si=rbtHZp_4mD8cY9Sv
newsics.com
ಶುಕ್ರವಾರ ಮುಂಜಾನೆ ಮಾಲ್ಡೀವ್ಸ್‌ನ ವಿ ಫೆಲಿಧೂ ಪ್ರದೇಶದ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್ ಬೋಟ್ ಏಕಾಏಕಿ ಮಗುಚಿ ಬಿದ್ದಿದೆ. ಈ ದುರಂತದಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಕರು ಇದ್ದರು. ಈ ಅಪಘಾತದಲ್ಲಿ ರೇಮಂಡ್ ಗ್ರೂಪ್ ಮಾಲೀಕ ಗೌತಮ್ ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದ ನಂತರ ಗೌತಮ್ ಸಿಂಘಾನಿಯಾ ಅವರನ್ನು ತಕ್ಷಣ ರಕ್ಷಿಸಿ ಏರ್ ಲಿಫ್ಟ್ ಮಾಡಿ ವಿಮಾನದ ಮುಂಬೈಗೆ ಕರೆತರಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅವರ ವಕ್ತಾರರು ನೀಡಿದ ಮಾಹಿತಿಯಂತೆ, ದುರದೃಷ್ಟಕರ ಅಪಘಾತದಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಜೊತೆಗೆ, ಈ ಘಟನೆಗೆ ಸಂಬಂಧಿಸಿದಂತೆ ಆತಂಕ ವ್ಯಕ್ತಪಡಿಸಿ, ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.
ಗೌತಮ್ ಸಿಂಘಾನಿಯಾ ಮತ್ತು ಹರಿ ಸಿಂಗ್ ದೀರ್ಘಕಾಲದ ಸ್ನೇಹಿತರು ಇವರಿಬ್ಬರಿಗೂ ಸಾಹಸ ಕ್ರೀಡೆಗಳ ಬಗ್ಗೆ ಅತೀವ ಆಸಕ್ತಿ. ಸಿಂಘಾನಿಯಾ ಸ್ವತಃ ವೃತ್ತಿಪರ ರೇಸರ್ ಆಗಿದ್ದು, ಹರಿ ಸಿಂಗ್ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರ್ಯಾಲಿ ಪ್ರಶಸ್ತಿಗಳನ್ನು ಗೆದ್ದು ಭಾರತಕ್ಕೆ ಕೀರ್ತಿ ತಂದುಕೊಟ್ಟಿದ್ದಾರೆ. ಸ್ನೇಹಿತರೆಲ್ಲ ರಜೆ ಮತ್ತು ಪವರ್ ಬೋಟಿಂಗ್‌ಗಾಗಿ ಮಾಲ್ಡೀವ್ಸ್‌ಗೆ ತೆರಳಿದ್ದರು.
ನಾಪತ್ತೆಯಾದವರಿಗಾಗಿ ಸಮುದ್ರ ಪ್ರದೇಶದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳೀಯ ಪೊಲೀಸ್ ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯವನ್ನು ವಿಸ್ತರಿಸಿದ್ದು, ಅವರನ್ನು ಸುರಕ್ಷಿತವಾಗಿ ಪತ್ತೆಹಚ್ಚುವ ಪ್ರಯತ್ನ ಮುಂದುವರಿದಿದೆ.
https://www.newsics.com/2026/03/21/another-shock-indian-oil-hikes-diesel-price-by-rs-22/