newsics.com
ಬೆಂಗಳೂರು : ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನಪ್ಪಿದ್ದಾರೆ. ಹೈವೇ ಯಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಮೂವರು ಮಹಿಳೆಯರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಜಯಮ್ಮ (60) ಯಶೋದಮ್ಮ (60) ಹಾಗೂ ಗಂಗಾ (38) ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಟಿಟಿ ವಾಹನ ಚಾಲಕ ಮತ್ತು ಉಳಿದ ಎಂಟು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಮೃತರು ತುಮಕೂರು ಜಿಲ್ಲೆಯ ತಿಪಟೂರಿನ ನಿವಾಸಿಗಳು ಎಂದು ತಿಳಿದುಬಂದಿದೆ ಕಾಶಿ ಪ್ರವಾಸಕ್ಕೆ ಸ್ತ್ರೀಶಕ್ತಿ ಸಂಘದ ಮಹಿಳೆಯರು ತೆರಳುತ್ತಿದ್ದರು. ಕಾಶಿ ಅಯೋಧ್ಯ ಪ್ರವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ತಿಪಟೂರಿನಿಂದ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಮಧ್ಯರಾತ್ರಿ ಅಪಘಾತ ಸಂಭವಿಸಿದೆ.