Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅನುಮತಿ ಪಡೆಯದೆ ಆಟವಾಡಿದ್ದಕ್ಕೆ ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿಹಾಕಿ ಬೆಲ್ಟ್‌ನಿಂದ ಪ್ರಿನ್ಸಿಪಾಲ್ ಹಲ್ಲೆ
ಕರ್ನಾಟಕಪ್ರಮುಖ

ಅನುಮತಿ ಪಡೆಯದೆ ಆಟವಾಡಿದ್ದಕ್ಕೆ ವಿದ್ಯಾರ್ಥಿಗಳನ್ನು ಕೊಠಡಿಯಲ್ಲಿ ಕೂಡಿಹಾಕಿ ಬೆಲ್ಟ್‌ನಿಂದ ಪ್ರಿನ್ಸಿಪಾಲ್ ಹಲ್ಲೆ

Share
1 Min Read
SHARE

 

newsics.com

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿ ಬೆಲ್ಟ್ ನಿಂದ ಹೊಡೆದಿರುವ ಘಟನೆ ಚಿಕ್ಕಮಗಳುರಿನ ಮೂಡಿಗೆರೆಯಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅನುಮತಿ ಪಡೆಯದೆ ಆಟವಾಡಿದರು ಎಂಬ ಕ್ಷುಲ್ಲಕ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಥಳಿಸಿದ್ದಾರೆ. ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ಸಿಟ್ಟಿನಲ್ಲಿದ್ದ ಪ್ರಿನ್ಸಿಪಾಲ್, ಶನಿವಾರ ಬೆಳಿಗ್ಗೆ ಅನುಮತಿ ಪಡೆಯದೆ ಮೈದಾನದಲ್ಲಿ ಆಟವಾಡುತ್ತಿದ್ದ 7 ವಿದ್ಯಾರ್ಥಿಗಳ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಸೇರಿ ವಿದ್ಯಾರ್ಥಿಗಳ ಕೈಕಾಲುಗಳಿಗೆ ಬಾಸುಂಡೆ ಬರುವಂತೆ ಪ್ಲಾಸ್ಟಿಕ್ ಪೈಪ್ ಹಾಗೂ ಬೆಲ್ಟ್‌ನಿಂದ ಹೊಡೆದಿದ್ದಾರೆ.

ಬಳಿಕ ವಿದ್ಯಾರ್ಥಿಗಳನ್ನು ರೂಮಿನೊಳಗೆ ಕೂಡಿಹಾಕಿ ಬೀಗ ಹಾಕಿದ್ದಾರೆ. ವಸತಿ ಶಾಲೆಯ ರೂಮಿನೊಳಗಿಂದ ವಿದ್ಯಾರ್ಥಿಗಳ ಕಿರುಚಾಟ ಮತ್ತು ಅಳು ಕೇಳಿ ಪಕ್ಕದ ಕಾಫಿ ತೋಟದ ಕಾರ್ಮಿಕರು ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರೂಮಿನಲ್ಲಿದ್ದ 7 ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಏಳು ವಿದ್ಯಾರ್ಥಿಗಳನ್ನು ಪೊಲೀಸರು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ಅವರ ಹೆಸರನ್ನು ಪೊಲೀಸರಿಗೆ ತಿಳಿಸಿದ್ದು, ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಏಪ್ರಿಲ್ 1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು

 

TAGGED:The principal was assaulted with a belt by keeping the students in their rooms for playing without permission
Share This Article
Facebook Twitter Copy Link Print
Previous Article ಏಪ್ರಿಲ್ 1ರಿಂದ ಬದಲಾಗಲಿವೆ ಈ ಪ್ರಮುಖ ನಿಯಮಗಳು
Next Article Attention employees ಉದ್ಯೋಗಿಗಳೇ ಗಮನಿಸಿ, ಏಪ್ರಿಲ್ 1ರಿಂದ ಬದಲಾಗಲಿದೆ ನಿಮ್ಮ ಸ್ಯಾಲರಿ ಲೆಕ್ಕಾಚಾರ, ಹೊಸ ನಿಯಮ ಜಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?